2 KANOKCV ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ. BSB BSB: just as they were handed down to us by the initial eyewitnesses and servants of the word.
3 KANOKCV ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು. BSB BSB: Therefore, having carefully investigated everything from the beginning, it seemed good also to me to write an orderly account for you, most excellent Theophilus,
4 KANOKCV ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು. BSB BSB: so that you may know the certainty of the things you have been taught.
6 KANOKCV ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು. BSB BSB: Both of them were righteous in the sight of God, walking blamelessly in all the commandments and decrees of the Lord.
7 KANOKCV ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು. BSB BSB: But they had no children, because Elizabeth was barren, and they were both well along in years.
8 KANOKCV ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ, BSB BSB: One day while Zechariah’s division was on duty and he was serving as priest before God,
9 KANOKCV ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು. BSB BSB: he was chosen by lot, according to the custom of the priesthood, to enter the temple of the Lord and burn incense.
10 KANOKCV ಧೂಪಾರ್ಪಣೆಯ ಸಮಯದಲ್ಲಿ ಸೇರಿದ ಜನರೆಲ್ಲರೂ ಹೊರಗೆ ಪ್ರಾರ್ಥಿಸುತ್ತಿದ್ದರು. BSB BSB: And at the hour of the incense offering, the whole congregation was praying outside.
11 KANOKCV ಆಗ ಧೂಪವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ, ಕರ್ತದೇವರ ದೂತನು ಅವನಿಗೆ ಕಾಣಿಸಿಕೊಂಡನು. BSB BSB: Just then an angel of the Lord appeared to Zechariah, standing at the right side of the altar of incense.
12 KANOKCV ಜಕರೀಯನು ದೂತನನ್ನು ಕಂಡು, ಚಕಿತಗೊಂಡು ಭಯಭ್ರಾಂತನಾದನು. BSB BSB: When Zechariah saw him, he was startled and gripped with fear.
13 KANOKCV ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು. BSB BSB: But the angel said to him, “Do not be afraid, Zechariah, because your prayer has been heard. Your wife Elizabeth will bear you a son, and you are to give him the name John.
14 KANOKCV ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು, BSB BSB: He will be a joy and delight to you, and many will rejoice at his birth,
15 KANOKCV ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು. BSB BSB: for he will be great in the sight of the Lord. He shall never take wine or strong drink, and he will be filled with the Holy Spirit even from his mother’s womb.
16 KANOKCV ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು. BSB BSB: Many of the sons of Israel he will turn back to the Lord their God.
18 KANOKCV ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು. BSB BSB: “How can I be sure of this?” Zechariah asked the angel. “I am an old man, and my wife is well along in years.”
19 KANOKCV ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ. BSB BSB: “I am Gabriel,” replied the angel. “I stand in the presence of God, and I have been sent to speak to you and to bring you this good news.
20 KANOKCV ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು. BSB BSB: And now you will be silent and unable to speak until the day this comes to pass, because you did not believe my words, which will be fulfilled at their proper time.”
21 KANOKCV ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. BSB BSB: Meanwhile, the people were waiting for Zechariah and wondering why he took so long in the temple.
22 KANOKCV ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು. BSB BSB: When he came out and was unable to speak to them, they realized he had seen a vision in the temple. He kept making signs to them but remained unable to speak.
23 KANOKCV ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು. BSB BSB: And when the days of his service were complete, he returned home.
24 KANOKCV ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. BSB BSB: After these days, his wife Elizabeth became pregnant and for five months remained in seclusion. She declared,
25 KANOKCV ಅವಳು, “ಜನರಲ್ಲಿ ನನಗಿದ್ದ ಅವಮಾನವನ್ನು ತೆಗೆದುಹಾಕುವುದಕ್ಕಾಗಿ ಕರ್ತದೇವರು ನನ್ನ ಮೇಲೆ ದಯೆತೋರಿಸಿ ಈ ದಿನಗಳಲ್ಲಿ ನನಗೆ ಹೀಗೆ ಮಾಡಿದ್ದಾರೆ,” ಎಂದು ಹೇಳಿದಳು. BSB BSB: “The Lord has done this for me. In these days He has shown me favor and taken away my disgrace among the people.”
27 KANOKCV ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು. BSB BSB: to a virgin pledged in marriage to a man named Joseph, who was of the house of David. And the virgin’s name was Mary.
28 KANOKCV ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು. BSB BSB: The angel appeared to her and said, “Greetings, you who are highly favored! The Lord is with you.”
29 KANOKCV ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು. BSB BSB: Mary was greatly troubled at his words and wondered what kind of greeting this might be.
30 KANOKCV ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ. BSB BSB: So the angel told her, “Do not be afraid, Mary, for you have found favor with God.
31 KANOKCV ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು. BSB BSB: Behold, you will conceive and give birth to a son, and you are to give Him the name Jesus.
32 KANOKCV ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು. BSB BSB: He will be great and will be called the Son of the Most High. The Lord God will give Him the throne of His father David,
33 KANOKCV ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು. BSB BSB: and He will reign over the house of Jacob forever. His kingdom will never end!”
35 KANOKCV ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು. BSB BSB: The angel replied, “The Holy Spirit will come upon you, and the power of the Most High will overshadow you. So the Holy One to be born will be called the Son of God.
36 KANOKCV ನಿನ್ನ ಬಂಧು ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಒಬ್ಬ ಮಗನನ್ನು ಹೆರಲಿದ್ದಾಳೆ. ಬಂಜೆಯಾಗಿದ್ದ ಆಕೆಗೆ ಇದು ಆರನೆಯ ತಿಂಗಳು. BSB BSB: Look, even Elizabeth your relative has conceived a son in her old age, and she who was called barren is in her sixth month.
37 KANOKCV ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು. BSB BSB: For no word from God will ever fail.”
39 KANOKCV ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು. BSB BSB: In those days Mary got ready and hurried to a town in the hill country of Judah,
40 KANOKCV ಅಲ್ಲಿ ಜಕರೀಯನ ಮನೆಯನ್ನು ಪ್ರವೇಶಿಸಿ, ಎಲಿಸಬೇತಳನ್ನು ವಂದಿಸಿದಳು. BSB BSB: where she entered the home of Zechariah and greeted Elizabeth.
41 KANOKCV ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ BSB BSB: When Elizabeth heard Mary’s greeting, the baby leaped in her womb, and Elizabeth was filled with the Holy Spirit.
42 KANOKCV ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು! BSB BSB: In a loud voice she exclaimed, “Blessed are you among women, and blessed is the fruit of your womb!
43 KANOKCV ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ? BSB BSB: And why am I so honored, that the mother of my Lord should come to me?
44 KANOKCV ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿಗಳಲ್ಲಿ ಬಿದ್ದ ಕೂಡಲೇ, ಶಿಶುವು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು. BSB BSB: For as soon as the sound of your greeting reached my ears, the baby in my womb leaped for joy.
45 KANOKCV ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು. BSB BSB: Blessed is she who has believed that the Lord’s word to her will be fulfilled.”
47 KANOKCV ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ. BSB BSB: and my spirit rejoices in God my Savior!
49 KANOKCV ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು. BSB BSB: For the Mighty One has done great things for me. Holy is His name.
50 KANOKCV ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು. BSB BSB: His mercy extends to those who fear Him, from generation to generation.
51 KANOKCV ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ. BSB BSB: He has performed mighty deeds with His arm; He has scattered those who are proud in the thoughts of their hearts.
52 KANOKCV ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ, ದೀನರನ್ನು ಮೇಲಕ್ಕೆ ಎತ್ತಿದ್ದಾರೆ. BSB BSB: He has brought down rulers from their thrones, but has exalted the humble.
53 KANOKCV ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ, ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ. BSB BSB: He has filled the hungry with good things, but has sent the rich away empty.
54 KANOKCV ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.” BSB BSB: He has helped His servant Israel, remembering to be merciful,
56 KANOKCV ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಜೊತೆಯಲ್ಲಿದ್ದು, ಅನಂತರ ತನ್ನ ಮನೆಗೆ ಹಿಂತಿರುಗಿ ಹೋದಳು. BSB BSB: Mary stayed with Elizabeth for about three months and then returned home.
57 KANOKCV ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು. BSB BSB: When the time came for Elizabeth to have her child, she gave birth to a son.
58 KANOKCV ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು. BSB BSB: Her neighbors and relatives heard that the Lord had shown her great mercy, and they rejoiced with her.
59 KANOKCV ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು. BSB BSB: On the eighth day, when they came to circumcise the child, they were going to name him after his father Zechariah.
60 KANOKCV ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು. BSB BSB: But his mother replied, “No! He shall be called John.”
61 KANOKCV ಬಂದಿದ್ದವರು ಆಕೆಗೆ, “ನಿನ್ನ ಬಂಧುಬಳಗದವರಲ್ಲಿ ಆ ಹೆಸರಿನವರು ಒಬ್ಬರೂ ಇಲ್ಲವಲ್ಲಾ,” ಎಂದರು. BSB BSB: They said to her, “There is no one among your relatives who bears this name.”
62 KANOKCV ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು. BSB BSB: So they made signs to his father to find out what he wanted to name the child.
63 KANOKCV ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು. BSB BSB: Zechariah asked for a tablet and wrote, “His name is John.” And they were all amazed.
64 KANOKCV ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು. BSB BSB: Immediately Zechariah’s mouth was opened and his tongue was released, and he began to speak, praising God.
65 KANOKCV ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು. BSB BSB: All their neighbors were filled with awe, and people throughout the hill country of Judea were talking about these events.
66 KANOKCV ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು. BSB BSB: And all who heard this wondered in their hearts and asked, “What then will this child become?” For the Lord’s hand was with him.
67 KANOKCV ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: BSB BSB: Then his father Zechariah was filled with the Holy Spirit and prophesied:
68 KANOKCV “ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ. BSB BSB: “Blessed be the Lord, the God of Israel, because He has visited and redeemed His people.
69 KANOKCV ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ. BSB BSB: He has raised up a horn of salvation for us in the house of His servant David,
71 KANOKCV ಇದನ್ನು, ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ BSB BSB: salvation from our enemies and from the hand of all who hate us,
72 KANOKCV ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ BSB BSB: to show mercy to our fathers and to remember His holy covenant,
74 KANOKCV ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ BSB BSB: deliverance from hostile hands, that we may serve Him without fear,
75 KANOKCV ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ ಅವರನ್ನೇ ಸೇವಿಸುವವರಾಗುವಂತೆಯೂ ಈ ಪ್ರಕಾರ ಮಾಡಿದ್ದಾರೆ. BSB BSB: in holiness and righteousness before Him all the days of our lives.
76 KANOKCV “ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ. BSB BSB: And you, child, will be called a prophet of the Most High; for you will go on before the Lord to prepare the way for Him,
77 KANOKCV ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ, BSB BSB: to give to His people the knowledge of salvation through the forgiveness of their sins,
78 KANOKCV ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ BSB BSB: because of the tender mercy of our God, by which the Dawn will visit us from on high,
79 KANOKCV ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.” BSB BSB: to shine on those who live in darkness and in the shadow of death, to guide our feet into the path of peace.”
80 KANOKCV ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು. BSB BSB: And the child grew and became strong in spirit; and he lived in the wilderness until the time of his public appearance to Israel.