1 ULB ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. BSB BSB: So they brought the ark of God and placed it inside the tent that David had pitched for it. And they presented burnt offerings and peace offerings before God.
2 ULB ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು. BSB BSB: When David had finished sacrificing the burnt offerings and peace offerings, he blessed the people in the name of the LORD.
3 ULB ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು. BSB BSB: Then he distributed to every man and woman of Israel a loaf of bread, a date cake, and a raisin cake.
4 ULB ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು. BSB BSB: David appointed some of the Levites to minister before the ark of the LORD, to celebrate, to give thanks, and to praise the LORD, the God of Israel.
5 ULB ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು. BSB BSB: Asaph was the chief, Zechariah was second, then Jeiel, Shemiramoth, Jehiel, Mattithiah, Eliab, Benaiah, Obed-edom, and Jeiel. They were to play the harps and lyres, while Asaph sounded the cymbals
6 ULB ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು. BSB BSB: and the priests Benaiah and Jahaziel blew the trumpets regularly before the ark of the covenant of God.
7 ULB ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ; BSB BSB: On that day David first committed to Asaph and his associates this song of thanksgiving to the LORD:
8 ULB <<ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ. BSB BSB: “Give thanks to the LORD; call upon His name; make known His deeds among the nations.
9 ULB ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. BSB BSB: Sing to Him, sing praises to Him; tell of all His wonders.
10 ULB ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ. BSB BSB: Glory in His holy name; let the hearts of those who seek the LORD rejoice.
11 ULB ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. BSB BSB: Seek out the LORD and His strength; seek His face always.
12 ULB ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು, BSB BSB: Remember the wonders He has done, His marvels, and the judgments He has pronounced,
13 ULB ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ. BSB BSB: O offspring of His servant Israel, O sons of Jacob, His chosen ones.
14 ULB ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. BSB BSB: He is the LORD our God; His judgments carry throughout the earth.
15 ULB ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ. BSB BSB: Remember His covenant forever, the word He ordained for a thousand generations—
16 ULB ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು. BSB BSB: the covenant He made with Abraham, and the oath He swore to Isaac.
17 ULB ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು. BSB BSB: He confirmed it to Jacob as a decree, to Israel as an everlasting covenant:
18 ULB ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ BSB BSB: ‘I will give you the land of Canaan as the portion of your inheritance.’
19 ULB ಆತನು, <ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು> ಎಂದು ವಾಗ್ದಾನ ಮಾಡಿದನು. BSB BSB: When they were few in number, few indeed, and strangers in the land,
20 ULB ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ BSB BSB: they wandered from nation to nation, from one kingdom to another.
21 ULB ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ, BSB BSB: He let no man oppress them; He rebuked kings on their behalf:
22 ULB <ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು> ಎಂದು ಹೇಳಿದನು. BSB BSB: ‘Do not touch My anointed ones! Do no harm to My prophets!’
23 ULB ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ. BSB BSB: Sing to the LORD, all the earth. Proclaim His salvation day after day.
24 ULB ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ. BSB BSB: Declare His glory among the nations, His wonders among all peoples.
25 ULB ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು. BSB BSB: For great is the LORD, and greatly to be praised; He is to be feared above all gods.
26 ULB ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು. BSB BSB: For all the gods of the nations are idols, but it is the LORD who made the heavens.
27 ULB ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ. BSB BSB: Splendor and majesty are before Him; strength and joy fill His dwelling.
28 ULB ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ. BSB BSB: Ascribe to the LORD, O families of the nations, ascribe to the LORD glory and strength.
29 ULB ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ. BSB BSB: Ascribe to the LORD the glory due His name; bring an offering and come before Him. Worship the LORD in the splendor of His holiness;
30 ULB ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ, BSB BSB: tremble before Him, all the earth. The world is firmly established; it cannot be moved.
31 ULB ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. BSB BSB: Let the heavens be glad, and the earth rejoice. Let them say among the nations, ‘The LORD reigns!’
32 ULB ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ. BSB BSB: Let the sea resound, and all that fills it; let the fields exult, and all that is in them.
33 ULB ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ. BSB BSB: Then the trees of the forest will sing for joy before the LORD, for He is coming to judge the earth.
34 ULB ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು. BSB BSB: Give thanks to the LORD, for He is good; His loving devotion endures forever.
35 ULB ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ. BSB BSB: Then cry out: ‘Save us, O God of our salvation; gather and deliver us from the nations, that we may give thanks to Your holy name, that we may glory in Your praise.’
36 ULB ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ>> ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು. BSB BSB: Blessed be the LORD, the God of Israel, from everlasting to everlasting.” Then all the people said, “Amen!” and “Praise the LORD!”
37 ULB ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ, BSB BSB: So David left Asaph and his associates there before the ark of the covenant of the LORD, to minister there regularly according to the daily requirements,
38 ULB ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು. BSB BSB: along with Obed-edom and his sixty-eight relatives. Obed-edom son of Jeduthun, and also Hosah, were to be gatekeepers.
39 ULB ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು. BSB BSB: And David left Zadok the priest and his fellow priests before the tabernacle of the LORD at the high place in Gibeon
40 ULB ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು. BSB BSB: to regularly present burnt offerings to the LORD on the altar of burnt offerings, morning and evening, according to all that was written in the Law of the LORD, which He had commanded Israel to keep.
41 ULB ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು. BSB BSB: With them were Heman, Jeduthun, and the rest of those chosen and designated by name to give thanks to the LORD, for “His loving devotion endures forever.”
42 ULB ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು. BSB BSB: Heman and Jeduthun had with them trumpets and cymbals for the music and instruments for the songs of God. And the sons of Jeduthun were stationed at the gate.
43 ULB ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು. BSB BSB: Then all the people departed for their homes, and David returned home to bless his household.
Select verses for actions: Enter goes to them and Escape comes back.