1 ULB ಆಗ ದಾವೀದನು, <<ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ>> ಎಂದು ಹೇಳಿದನು. BSB BSB: Then David said, “Here shall be the house of the LORD God, as well as the altar of burnt offering for Israel.”
2 ULB ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು. BSB BSB: So David gave orders to gather the foreigners in the land of Israel, from whom he appointed stonecutters to prepare finished stones for building the house of God.
3 ULB ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ, BSB BSB: David provided a large quantity of iron to make the nails for the doors of the gateways and for the fittings, together with more bronze than could be weighed
4 ULB ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು. BSB BSB: and more cedar logs than could be counted; for the Sidonians and Tyrians had brought a large quantity of cedar logs to David.
5 ULB ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು. BSB BSB: And David said, “My son Solomon is young and inexperienced, and the house to be built for the LORD must be exceedingly magnificent—famous and glorious throughout all lands. Therefore I must make preparations for it.” So David made lavish preparations before his death.
6 ULB ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು. BSB BSB: Then David called for his son Solomon and instructed him to build a house for the LORD, the God of Israel.
7 ULB ದಾವೀದನು ಸೊಲೊಮೋನನಿಗೆ, <<ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು. BSB BSB: “My son,” said David to Solomon, “it was in my heart to build a house for the Name of the LORD my God,
8 ULB ಆದರೆ ಯೆಹೋವನು ನನಗೆ, <ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. BSB BSB: but this word of the LORD came to me: ‘You have shed much blood and waged great wars. You are not to build a house for My Name because you have shed so much blood on the ground before Me.
9 ULB ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು. BSB BSB: But a son will be born to you who will be a man of rest. I will give him rest from all his enemies on every side; for his name will be Solomon, and I will grant to Israel peace and quiet during his reign.
10 ULB ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು>. BSB BSB: He is the one who will build a house for My Name. He will be My son, and I will be his Father. And I will establish the throne of his kingdom over Israel forever.’
11 ULB ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ. BSB BSB: Now, my son, may the LORD be with you, and may you succeed in building the house of the LORD your God, as He said you would.
12 ULB ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ. BSB BSB: Above all, may the LORD give you insight and understanding when He puts you in command over Israel, so that you may keep the Law of the LORD your God.
13 ULB ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. BSB BSB: Then you will succeed, if you carefully follow the statutes and ordinances that the LORD commanded Moses for Israel. Be strong and courageous. Do not be afraid or discouraged.
14 ULB ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು. BSB BSB: Now behold, I have taken great pains to provide for the house of the LORD—100,000 talents of gold, 1,000,000 talents of silver, and bronze and iron too great to be weighed. I have also provided timber and stone, and you may add to them.
15 ULB ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ, BSB BSB: You also have many workers: stonecutters, masons, carpenters, and men skilled in every kind of work—
16 ULB ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ>> ಎಂದು ಹೇಳಿದನು. BSB BSB: in gold and silver, bronze and iron—craftsmen beyond number. Now begin the work, and may the LORD be with you.”
17 ULB ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು. BSB BSB: Then David ordered all the leaders of Israel to help his son Solomon:
18 ULB ಆತನು ಅವರಿಗೆ, <<ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ. BSB BSB: “Is not the LORD your God with you, and has He not granted you rest on every side? For He has given the inhabitants of the land into my hand, and the land has been subdued before the LORD and His people.
19 ULB ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ>> ಎಂದು ಹೇಳಿದನು. BSB BSB: Now set your heart and soul to seek the LORD your God. Begin building the sanctuary of the LORD God, so that you may bring the ark of the covenant of the LORD and the holy articles of God into the temple that will be built for the Name of the LORD.”
Select verses for actions: Enter goes to them and Escape comes back.