1 ULB ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು. BSB BSB: When David was old and full of years, he installed his son Solomon as king over Israel.
2 ULB ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು. BSB BSB: Then he gathered all the leaders of Israel, as well as the priests and Levites.
3 ULB ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು. BSB BSB: The Levites thirty years of age or older were counted, and the total number of men was 38,000.
4 ULB ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು, BSB BSB: “Of these,” said David, “24,000 are to oversee the work of the house of the LORD, 6,000 are to be officers and judges,
5 ULB ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು. BSB BSB: 4,000 are to be gatekeepers, and 4,000 are to praise the LORD with the instruments I have made for giving praise.”
6 ULB ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು. BSB BSB: Then David divided the Levites into divisions according to the sons of Levi: Gershon, Kohath, and Merari.
7 ULB ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಮತ್ತು ಶಿಮ್ಮೀ ಎಂಬುವರು. BSB BSB: The Gershonites: Ladan and Shimei.
8 ULB ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು. BSB BSB: The sons of Ladan: Jehiel the first, Zetham, and Joel—three in all.
9 ULB ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು. BSB BSB: The sons of Shimei: Shelomoth, Haziel, and Haran—three in all. These were the heads of the families of Ladan.
10 ULB ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು. BSB BSB: And the sons of Shimei: Jahath, Zina, Jeush, and Beriah. These were the sons of Shimei—four in all.
11 ULB ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು. BSB BSB: Jahath was the first and Zizah was the second; but Jeush and Beriah did not have many sons, so they were counted as one family and received a single assignment.
12 ULB ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು. BSB BSB: The sons of Kohath: Amram, Izhar, Hebron, and Uzziel—four in all.
13 ULB ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು. BSB BSB: The sons of Amram: Aaron and Moses. Aaron and his descendants were set apart forever to consecrate the most holy things, to burn incense before the LORD, to minister before Him, and to pronounce blessings in His name forever.
14 ULB ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು. BSB BSB: As for Moses the man of God, his sons were named among the tribe of Levi.
15 ULB ಮೋಶೆಯ ಮಕ್ಕಳು ಗೇರ್ಷೋಮ್ ಮತ್ತು ಎಲೀಯೆಜೆರ್ ಎಂಬುವವರು. BSB BSB: The sons of Moses: Gershom and Eliezer.
16 ULB ಪ್ರಧಾನನಾದ ಶೆಬೂವೇಲನು ಗೇರ್ಷೋಮನ ಮಗನು. BSB BSB: The descendants of Gershom: Shebuel was the first.
17 ULB ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು. BSB BSB: The descendants of Eliezer: Rehabiah was the first. Eliezer did not have any other sons, but the sons of Rehabiah were very numerous.
18 ULB ಪ್ರಧಾನನಾದ ಶೆಲೋಮೋತನು ಇಚ್ಹಾರನ ಮಗ. BSB BSB: The sons of Izhar: Shelomith was the first.
19 ULB ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು. BSB BSB: The sons of Hebron: Jeriah was the first, Amariah the second, Jahaziel the third, and Jekameam the fourth.
20 ULB ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು. BSB BSB: The sons of Uzziel: Micah was the first and Isshiah the second.
21 ULB ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್. BSB BSB: The sons of Merari: Mahli and Mushi. The sons of Mahli: Eleazar and Kish.
22 ULB ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು. BSB BSB: Eleazar died without having any sons; he had only daughters. Their cousins, the sons of Kish, married them.
23 ULB ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು. BSB BSB: The sons of Mushi: Mahli, Eder, and Jeremoth—three in all.
24 ULB ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು. BSB BSB: These were the descendants of Levi by their families—the heads of families, registered individually by name—those twenty years of age or older who worked in the service of the house of the LORD.
25 ULB ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ, BSB BSB: For David had said, “The LORD, the God of Israel, has given rest to His people and has come to dwell in Jerusalem forever.
26 ULB ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು. BSB BSB: So now the Levites no longer need to carry the tabernacle or any of the articles for its service.”
27 ULB ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು. BSB BSB: For according to the final instructions of David, the Levites twenty years of age or older were counted,
28 ULB ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ, BSB BSB: but their duty was to assist the descendants of Aaron with the service of the house of the LORD, being responsible for the courts and chambers, the purification of all the holy things, and the work of the service of the house of God,
29 ULB ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ, BSB BSB: as well as for the rows of the showbread, the fine flour for the grain offering, the wafers of unleavened bread, the baking, the mixing, and all measurements of quantity and size.
30 ULB ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ BSB BSB: They were also to stand every morning to give thanks and praise to the LORD, and likewise in the evening.
31 ULB ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ. BSB BSB: Whenever burnt offerings were presented to the LORD on the Sabbaths, New Moons, and appointed feasts, they were to serve regularly before the LORD in the numbers prescribed for them.
32 ULB ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು. BSB BSB: So the Levites were to carry out the responsibilities for the Tent of Meeting and the Holy Place, and, under their brothers the descendants of Aaron, the service of the house of the LORD.
Select verses for actions: Enter goes to them and Escape comes back.