1 ULB ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು. BSB BSB: These were the divisions of the descendants of Aaron. The sons of Aaron were Nadab, Abihu, Eleazar, and Ithamar.
2 ULB ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು. BSB BSB: But Nadab and Abihu died before their father did, and they had no sons; so Eleazar and Ithamar served as priests.
3 ULB ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು. BSB BSB: With the help of Eleazar’s descendant Zadok and Ithamar’s descendant Ahimelech, David divided them according to the offices of their service.
4 ULB ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ, BSB BSB: Since more leaders were found among Eleazar’s descendants than those of Ithamar, they were divided accordingly. There were sixteen heads of families from the descendants of Eleazar and eight from the descendants of Ithamar.
5 ULB ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು. BSB BSB: Thus they were divided by lot, for there were officers of the sanctuary and officers of God among both Eleazar’s and Ithamar’s descendants.
6 ULB ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು. BSB BSB: The scribe, Shemaiah son of Nethanel, a Levite, recorded their names in the presence of the king and of the officers: Zadok the priest, Ahimelech son of Abiathar, and the heads of families of the priests and the Levites—one family being taken from Eleazar, and then one from Ithamar.
7 ULB ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ, BSB BSB: The first lot fell to Jehoiarib, the second to Jedaiah,
8 ULB ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮನಿಗೆ, BSB BSB: the third to Harim, the fourth to Seorim,
9 ULB ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾಮೀನನಿಗೆ, BSB BSB: the fifth to Malchijah, the sixth to Mijamin,
10 ULB ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, BSB BSB: the seventh to Hakkoz, the eighth to Abijah,
11 ULB ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, BSB BSB: the ninth to Jeshua, the tenth to Shecaniah,
12 ULB ಹನ್ನೊಂದನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, BSB BSB: the eleventh to Eliashib, the twelfth to Jakim,
13 ULB ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ, BSB BSB: the thirteenth to Huppah, the fourteenth to Jeshebeab,
14 ULB ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, BSB BSB: the fifteenth to Bilgah, the sixteenth to Immer,
15 ULB ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಚ್ಚೇಚನಿಗೆ, BSB BSB: the seventeenth to Hezir, the eighteenth to Happizzez,
16 ULB ಹತ್ತೊಂಬತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, BSB BSB: the nineteenth to Pethahiah, the twentieth to Jehezkel,
17 ULB ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ, BSB BSB: the twenty-first to Jachin, the twenty-second to Gamul,
18 ULB ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು. BSB BSB: the twenty-third to Delaiah, and the twenty-fourth to Maaziah.
19 ULB ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು. BSB BSB: This was their appointed order for service when they entered the house of the LORD, according to the regulations prescribed for them by their forefather Aaron, as the LORD, the God of Israel, had commanded him.
20 ULB ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು. BSB BSB: Now these were the rest of the descendants of Levi: From the sons of Amram: Shubael; from the sons of Shubael: Jehdeiah.
21 ULB ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ, BSB BSB: As for Rehabiah, from his sons: The first was Isshiah.
22 ULB ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು. BSB BSB: From the Izharites: Shelomoth; from the sons of Shelomoth: Jahath.
23 ULB ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು, BSB BSB: From the sons of Hebron: Jeriah was the first, Amariah the second, Jahaziel the third, and Jekameam the fourth.
24 ULB ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ, BSB BSB: From the sons of Uzziel: Micah; from the sons of Micah: Shamir.
25 ULB ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು. BSB BSB: The brother of Micah: Isshiah; from the sons of Isshiah: Zechariah.
26 ULB ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ. BSB BSB: The sons of Merari: Mahli and Mushi. The son of Jaaziah: Beno.
27 ULB ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ. BSB BSB: The descendants of Merari from Jaaziah: Beno, Shoham, Zaccur, and Ibri.
28 ULB ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು. BSB BSB: From Mahli: Eleazar, who had no sons.
29 ULB ಕೀಷನಿಂದ ಯೆರಹ್ಮೇಲನು ಹುಟ್ಟಿದನು. BSB BSB: From Kish: Jerahmeel the son of Kish.
30 ULB ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು. BSB BSB: And the sons of Mushi: Mahli, Eder, and Jerimoth. These were the sons of the Levites, according to their families.
31 ULB ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು. BSB BSB: As their brothers the descendants of Aaron did, they also cast lots in the presence of King David and of Zadok, Ahimelech, and the heads of the families of the priests and Levites—the family heads and their younger brothers alike.
Select verses for actions: Enter goes to them and Escape comes back.