1 ULB ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ. BSB BSB: If I speak in the tongues of men and of angels, but have not love, I am only a ringing gong or a clanging cymbal.
2 ULB ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ. BSB BSB: If I have the gift of prophecy and can fathom all mysteries and all knowledge, and if I have absolute faith so as to move mountains, but have not love, I am nothing.
3 ULB ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು. BSB BSB: If I give all I possess to the poor and exult in the surrender of my body, but have not love, I gain nothing.
4 ULB ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚು ಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. BSB BSB: Love is patient, love is kind. It does not envy, it does not boast, it is not proud.
5 ULB ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. BSB BSB: It is not rude, it is not self-seeking, it is not easily angered, it keeps no account of wrongs.
6 ULB ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. BSB BSB: Love takes no pleasure in evil, but rejoices in the truth.
7 ULB ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ. BSB BSB: It bears all things, believes all things, hopes all things, endures all things.
8 ULB ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳುವಳಿಕೆಯೋ ಇಲ್ಲದಂತಾಗುವುದು. BSB BSB: Love never fails. But where there are prophecies, they will cease; where there are tongues, they will be restrained; where there is knowledge, it will be dismissed.
9 ULB ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ. BSB BSB: For we know in part and we prophesy in part,
10 ULB ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು. BSB BSB: but when the perfect comes, the partial passes away.
11 ULB ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು. BSB BSB: When I was a child, I talked like a child, I thought like a child, I reasoned like a child. When I became a man, I set aside childish ways.
12 ULB ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು. BSB BSB: Now we see but a dim reflection as in a mirror; then we shall see face to face. Now I know in part; then I shall know fully, even as I am fully known.
13 ULB ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ. BSB BSB: And now these three remain: faith, hope, and love; but the greatest of these is love.
Select verses for actions: Enter goes to them and Escape comes back.