2 ULB ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ. BSB BSB: By this gospel you are saved, if you hold firmly to the word I preached to you. Otherwise, you have believed in vain.
4 ULB ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. BSB BSB: that He was buried, that He was raised on the third day according to the Scriptures,
5 ULB ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. BSB BSB: and that He appeared to Cephas and then to the Twelve.
7 ULB ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು. BSB BSB: Then He appeared to James, then to all the apostles.
8 ULB ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು. BSB BSB: And last of all He appeared to me also, as to one of untimely birth.
9 ULB ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ. BSB BSB: For I am the least of the apostles and am unworthy to be called an apostle, because I persecuted the church of God.
10 ULB ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಪಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ. BSB BSB: But by the grace of God I am what I am, and His grace to me was not in vain. No, I worked harder than all of them—yet not I, but the grace of God that was with me.
13 ULB ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ. BSB BSB: If there is no resurrection of the dead, then not even Christ has been raised.
15 ULB ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. BSB BSB: In that case, we are also exposed as false witnesses about God. For we have testified about God that He raised Christ from the dead, but He did not raise Him if in fact the dead are not raised.
16 ULB ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. BSB BSB: For if the dead are not raised, then not even Christ has been raised.
17 ULB ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. BSB BSB: And if Christ has not been raised, your faith is futile; you are still in your sins.
18 ULB ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ. BSB BSB: Then those also who have fallen asleep in Christ have perished.
19 ULB ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ. BSB BSB: If our hope in Christ is for this life alone, we are to be pitied more than all men.
22 ULB ಆದಾಮನಿಂದ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. BSB BSB: For as in Adam all die, so in Christ all will be made alive.
23 ULB ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. BSB BSB: But each in his own turn: Christ the firstfruits; then at His coming, those who belong to Him.
24 ULB ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. BSB BSB: Then the end will come, when He hands over the kingdom to God the Father after He has destroyed all dominion, authority, and power.
25 ULB ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ. BSB BSB: For He must reign until He has put all His enemies under His feet.
26 ULB ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ. BSB BSB: The last enemy to be destroyed is death.
27 ULB <<ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.>> ಆದರೆ <<ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ>> ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. BSB BSB: For “God has put everything under His feet.” Now when it says that everything has been put under Him, this clearly does not include the One who put everything under Him.
28 ULB ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು. BSB BSB: And when all things have been subjected to Him, then the Son Himself will be made subject to Him who put all things under Him, so that God may be all in all.
29 ULB ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ. BSB BSB: If these things are not so, what will those do who are baptized for the dead? If the dead are not raised at all, why are people baptized for them?
30 ULB ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ? BSB BSB: And why do we endanger ourselves every hour?
31 ULB ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. BSB BSB: I face death every day, brothers, as surely as I boast about you in Christ Jesus our Lord.
32 ULB ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. BSB BSB: If I fought wild beasts in Ephesus for human motives, what did I gain? If the dead are not raised, “Let us eat and drink, for tomorrow we die.”
33 ULB ಮೋಸಹೋಗಬೇಡಿರಿ; <<ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.>> BSB BSB: Do not be deceived: “Bad company corrupts good character.”
34 ULB ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ. BSB BSB: Sober up as you ought, and stop sinning; for some of you are ignorant of God. I say this to your shame.
36 ULB ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ. BSB BSB: You fool! What you sow does not come to life unless it dies.
37 ULB ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ. BSB BSB: And what you sow is not the body that will be, but just a seed, perhaps of wheat or something else.
38 ULB ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ. BSB BSB: But God gives it a body as He has designed, and to each kind of seed He gives its own body.
39 ULB ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ. BSB BSB: Not all flesh is the same: Men have one kind of flesh, animals have another, birds another, and fish another.
40 ULB ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ. BSB BSB: There are also heavenly bodies and earthly bodies. But the splendor of the heavenly bodies is of one degree, and the splendor of the earthly bodies is of another.
41 ULB ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು. BSB BSB: The sun has one degree of splendor, the moon another, and the stars another; and star differs from star in splendor.
43 ULB ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; BSB BSB: It is sown in dishonor; it is raised in glory. It is sown in weakness; it is raised in power.
44 ULB ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮಿಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮಿಕ ದೇಹವೂ ಇರುವುದು ಸತ್ಯ. BSB BSB: It is sown a natural body; it is raised a spiritual body. If there is a natural body, there is also a spiritual body.
45 ULB <<ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ>> ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು. BSB BSB: So it is written: “The first man Adam became a living being”; the last Adam a life-giving spirit.
46 ULB ಆತ್ಮಿಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮಿಕವಾದದ್ದು. BSB BSB: The spiritual, however, was not first, but the natural, and then the spiritual.
47 ULB ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. BSB BSB: The first man was of the dust of the earth, the second man from heaven.
48 ULB ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. BSB BSB: As was the earthly man, so also are those who are of the earth; and as is the heavenly man, so also are those who are of heaven.
49 ULB ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು. BSB BSB: And just as we have borne the likeness of the earthly man, so also shall we bear the likeness of the heavenly man.
50 ULB ಪ್ರಿಯರೇ, ನಾನು ಹೇಳುವುದೇನಂದರೆ, ರಕ್ತಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. BSB BSB: Now I declare to you, brothers, that flesh and blood cannot inherit the kingdom of God, nor does the perishable inherit the imperishable.
51 ULB ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. BSB BSB: Listen, I tell you a mystery: We will not all sleep, but we will all be changed—
52 ULB ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು. BSB BSB: in an instant, in the twinkling of an eye, at the last trumpet. For the trumpet will sound, the dead will be raised imperishable, and we will be changed.
53 ULB ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. BSB BSB: For the perishable must be clothed with the imperishable, and the mortal with immortality.
54 ULB ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. BSB BSB: When the perishable has been clothed with the imperishable and the mortal with immortality, then the saying that is written will come to pass: “Death has been swallowed up in victory.”
55 ULB <<ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?>> BSB BSB: “Where, O Death, is your victory? Where, O Death, is your sting?”
56 ULB ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. BSB BSB: The sting of death is sin, and the power of sin is the law.
57 ULB ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ. BSB BSB: But thanks be to God, who gives us the victory through our Lord Jesus Christ!
58 ULB ಆದ್ದರಿಂದ, ನನ್ನ ಪ್ರಿಯರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ. BSB BSB: Therefore, my beloved brothers, be steadfast and immovable. Always excel in the work of the Lord, because you know that your labor in the Lord is not in vain.
Select verses for actions: Enter goes to them and Escape comes back.