1 ULB ಪ್ರಿಯರೇ, ನಾನೂ ಸಹ ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ. BSB BSB: When I came to you, brothers, I did not come with eloquence or wisdom as I proclaimed to you the testimony about God.
2 ULB ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು. BSB BSB: For I resolved to know nothing while I was with you except Jesus Christ and Him crucified.
3 ULB ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು. BSB BSB: I came to you in weakness and fear, and with much trembling.
4 ULB ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳ ಪ್ರದರ್ಶನವನ್ನೇ ಪ್ರಯೋಗಿಸಿದೆನು. BSB BSB: My message and my preaching were not with persuasive words of wisdom, but with a demonstration of the Spirit’s power,
6 ULB ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. BSB BSB: Among the mature, however, we speak a message of wisdom—but not the wisdom of this age or of the rulers of this age, who are coming to nothing.
7 ULB ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. BSB BSB: No, we speak of the mysterious and hidden wisdom of God, which He destined for our glory before time began.
8 ULB ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; BSB BSB: None of the rulers of this age understood it. For if they had, they would not have crucified the Lord of glory.
9 ULB ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, <<ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.>> BSB BSB: Rather, as it is written: “No eye has seen, no ear has heard, no heart has imagined, what God has prepared for those who love Him.”
10 ULB ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ. BSB BSB: But God has revealed it to us by the Spirit. The Spirit searches all things, even the deep things of God.
11 ULB ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ. BSB BSB: For who among men knows the thoughts of man except his own spirit within him? So too, no one knows the thoughts of God except the Spirit of God.
12 ULB ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ. BSB BSB: We have not received the spirit of the world, but the Spirit who is from God, that we may understand what God has freely given us.
13 ULB ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮಿಕವಾದವುಗಳನ್ನು ಆತ್ಮಿಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ. BSB BSB: And this is what we speak, not in words taught us by human wisdom, but in words taught by the Spirit, expressing spiritual truths in spiritual words.
14 ULB ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು. BSB BSB: The natural man does not accept the things that come from the Spirit of God. For they are foolishness to him, and he cannot understand them, because they are spiritually discerned.
15 ULB ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ. BSB BSB: The spiritual man judges all things, but he himself is not subject to anyone’s judgment.
16 ULB <<ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?>> ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ. BSB BSB: “For who has known the mind of the Lord, so as to instruct Him?” But we have the mind of Christ.
Select verses for actions: Enter goes to them and Escape comes back.