1 ULB ಆದರೆ ಪ್ರಿಯರೇ ನಾನಂತೂ ಆತ್ಮಿಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು. BSB BSB: Brothers, I could not address you as spiritual, but as worldly—as infants in Christ.
2 ULB ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ. BSB BSB: I gave you milk, not solid food, for you were not yet ready for solid food. In fact, you are still not ready,
3 ULB ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ? BSB BSB: for you are still worldly. For since there is jealousy and dissension among you, are you not worldly? Are you not walking in the way of man?
4 ULB ಒಬ್ಬನು, <<ನಾನು ಪೌಲನವನು>> ಎಂದು, ಮತ್ತೊಬ್ಬನು, <<ನಾನು ಅಪೊಲ್ಲೋಸನವನು>> ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ? BSB BSB: For when one of you says, “I follow Paul,” and another, “I follow Apollos,” are you not mere men?
5 ULB ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ. BSB BSB: What then is Apollos? And what is Paul? They are servants through whom you believed, as the Lord has assigned to each his role.
6 ULB ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ. BSB BSB: I planted the seed and Apollos watered it, but God made it grow.
7 ULB ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು. BSB BSB: So neither he who plants nor he who waters is anything, but only God, who makes things grow.
8 ULB ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು. BSB BSB: He who plants and he who waters are one in purpose, and each will be rewarded according to his own labor.
9 ULB ನಾವು ದೇವರ ಜೊತೆಕೆಲಸದವರು. ನೀವು ದೇವರ ಕೃಷಿಗಳಾಗಿದ್ದೀರಿ. ದೇವರ ಮಂದಿರವೂ ಆಗಿದ್ದೀರಿ. BSB BSB: For we are God’s fellow workers; you are God’s field, God’s building.
10 ULB ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು. BSB BSB: By the grace God has given me, I laid a foundation as an expert builder, and someone else is building on it. But each one must be careful how he builds.
11 ULB ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. BSB BSB: For no one can lay a foundation other than the one already laid, which is Jesus Christ.
12 ULB ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, BSB BSB: If anyone builds on this foundation using gold, silver, precious stones, wood, hay, or straw,
13 ULB ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು. BSB BSB: his workmanship will be evident, because the Day will bring it to light. It will be revealed with fire, and the fire will prove the quality of each man’s work.
14 ULB ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು. BSB BSB: If what he has built survives, he will receive a reward.
15 ULB ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು. BSB BSB: If it is burned up, he will suffer loss. He himself will be saved, but only as if through the flames.
16 ULB ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? BSB BSB: Do you not know that you yourselves are God’s temple, and that God’s Spirit dwells in you?
17 ULB ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ. BSB BSB: If anyone destroys God’s temple, God will destroy him; for God’s temple is holy, and you are that temple.
18 ULB ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ <<ಮೂರ್ಖನಾಗಲಿ>> BSB BSB: Let no one deceive himself. If any of you thinks he is wise in this age, he should become a fool, so that he may become wise.
19 ULB ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. <<ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,>> BSB BSB: For the wisdom of this world is foolishness in God’s sight. As it is written: “He catches the wise in their craftiness.”
20 ULB <<ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ>> ಬರೆದದೆಯಲ್ಲಾ BSB BSB: And again, “The Lord knows that the thoughts of the wise are futile.”
21 ULB ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ. BSB BSB: Therefore, stop boasting in men. All things are yours,
22 ULB ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ. BSB BSB: whether Paul or Apollos or Cephas or the world or life or death or the present or the future. All of them belong to you,
23 ULB ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು. BSB BSB: and you belong to Christ, and Christ belongs to God.
Select verses for actions: Enter goes to them and Escape comes back.