1 ULB ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು BSB BSB: Suddenly, as Jeroboam was standing beside the altar to burn incense, there came a man of God from Judah to Bethel by the word of the LORD.
2 ULB ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, <<ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ>> ಅಂದನು. BSB BSB: And he cried out against the altar by the word of the LORD, “O altar, O altar, this is what the LORD says: ‘A son named Josiah will be born to the house of David, and upon you he will sacrifice the priests of the high places who burn incense upon you, and human bones will be burned upon you.’”
3 ULB ಇದಲ್ಲದೆ ಅವನು, <<ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು>> ಎಂದು ಹೇಳಿದನು. BSB BSB: That day the man of God gave a sign, saying, “The LORD has spoken this sign: ‘Surely the altar will be split apart, and the ashes upon it will be poured out.’”
4 ULB ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, <<ಕೈಚಾಚಿ ಅವನನ್ನು ಹಿಡಿಯಿರಿ>> ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ. BSB BSB: Now when King Jeroboam, who was at the altar in Bethel, heard the word that the man of God had cried out against it, he stretched out his hand and said, “Seize him!” But the hand he stretched out toward him withered, so that he could not pull it back.
5 ULB ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು. BSB BSB: And the altar was split apart, and the ashes poured out, according to the sign that the man of God had given by the word of the LORD.
6 ULB ಅರಸನು ಆ ಮನುಷ್ಯನಿಗೆ, <<ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು>> ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು. BSB BSB: Then the king responded to the man of God, “Intercede with the LORD your God and pray for me that my hand may be restored.” So the man of God interceded with the LORD, and the king’s hand was restored to him as it was before.
7 ULB ಆಗ ಅರಸನು ಅವನಿಗೆ, <<ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ>> ಎಂದನು. BSB BSB: Then the king said to the man of God, “Come home with me and refresh yourself, and I will give you a reward.”
8 ULB ಆದರೆ ದೇವರ ಮನುಷ್ಯನು ಅರಸನಿಗೆ, <<ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ. BSB BSB: But the man of God replied, “If you were to give me half your possessions, I still would not go with you, nor would I eat bread or drink water in this place.
9 ULB ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ>> ಎಂದು ಹೇಳಿದನು. BSB BSB: For this is what I was commanded by the word of the LORD: ‘You must not eat bread or drink water or return by the way you came.’”
10 ULB ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು. BSB BSB: So the man of God went another way and did not return by the way he had come to Bethel.
11 ULB ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು. BSB BSB: Now a certain old prophet was living in Bethel, and his sons came and told him all the deeds that the man of God had done that day in Bethel. They also told their father the words that the man had spoken to the king.
12 ULB ತಂದೆಯು ಅವರನ್ನು, <<ಅವನು ಯಾವ ದಾರಿಯಿಂದ ಹೋದನು?>> ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು. BSB BSB: “Which way did he go?” their father asked. And his sons showed him the way taken by the man of God, who had come from Judah.
13 ULB ಆಗ ಅವನು ತನ್ನ ಮಕ್ಕಳಿಗೆ, <<ಕತ್ತೆಗೆ ತಡಿಹಾಕಿರಿ>> ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು. BSB BSB: So the prophet said to his sons, “Saddle the donkey for me.” Then they saddled the donkey for him, and he mounted it
14 ULB ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, <<ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?>> ಎಂದು ಕೇಳಿದನು. ಅವನು ಹೌದೆಂದನು. BSB BSB: and went after the man of God. He found him sitting under an oak tree and asked, “Are you the man of God who came from Judah?” “I am,” he replied.
15 ULB ಆಗ ಆ ಮುದುಕನು ಅವನಿಗೆ, <<ನೀನು ನನ್ನ ಮನೆಗೆ ಬಂದು ಊಟಮಾಡು>> ಎಂದು ಹೇಳಿದನು. BSB BSB: So the prophet said to the man of God, “Come home with me and eat some bread.”
16 ULB ಅದಕ್ಕೆ ಅವನು, <<ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ. BSB BSB: But the man replied, “I cannot go home with you, and I will not eat bread or drink water with you in this place.
17 ULB ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ>> ಎಂದು ಉತ್ತರಕೊಟ್ಟನು. BSB BSB: For I have been told by the word of the LORD: ‘You must not eat bread or drink water there or return by the way you came.’”
18 ULB ಆಗ ಆ ಮುದುಕನು, <<ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ>> ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು. BSB BSB: Then the prophet replied, “I too am a prophet like you, and an angel spoke to me by the word of the LORD, saying, ‘Bring him back with you to your house, so that he may eat bread and drink water.’” The old prophet was lying to him,
19 ULB ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. BSB BSB: but the man of God went back with him, ate bread in his house, and drank water.
20 ULB ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು. BSB BSB: While they were sitting at the table, the word of the LORD came to the prophet who had brought him back,
21 ULB ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, <<ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ, BSB BSB: and the prophet cried out to the man of God who had come from Judah, “This is what the LORD says: ‘Because you have defied the word of the LORD and have not kept the commandment that the LORD your God gave you,
22 ULB ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ>> ಅಂದನು. BSB BSB: but you went back and ate bread and drank water in the place where He told you not to do so, your body shall never reach the tomb of your fathers.’”
23 ULB ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು. BSB BSB: And after the man of God had finished eating and drinking, the old prophet who had brought him back saddled the donkey for him.
24 ULB ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. BSB BSB: As he went on his way, a lion met him on the road and killed him, and his body was left lying in the road, with the donkey and the lion standing beside it.
25 ULB ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು. BSB BSB: And there were men passing by who saw the body lying in the road with the lion standing beside it, and they went and reported this in the city where the old prophet lived.
26 ULB ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, <<ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು>> ಎಂದು ಹೇಳಿದನು. BSB BSB: When the prophet who had brought him back from his journey heard this, he said, “It is the man of God who disobeyed the command of the LORD. Therefore the LORD has delivered him to the lion, and it has mauled him and killed him, according to the word that the LORD had spoken to him.”
27 ULB ಅವನು, <<ಕತ್ತೆಗೆ ತಡಿಹಾಕಿರಿ>> ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು. BSB BSB: Then the old prophet instructed his sons, “Saddle the donkey for me.” So they saddled it,
28 ULB ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ. BSB BSB: and he went and found the body lying in the road, with the donkey and the lion standing beside it. The lion had not eaten the body or mauled the donkey.
29 ULB ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು, BSB BSB: So the old prophet lifted up the body of the man of God, laid it on the donkey, and brought it back to his own city to mourn for him and bury him.
30 ULB ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, <<ಅಯ್ಯೋ, ನನ್ನ ಸಹೋದರನೇ!>> ಎಂದು ಗೋಳಾಡಿದರು. BSB BSB: Then he laid the body in his own tomb, and they lamented over him, “Oh, my brother!”
31 ULB ಅನಂತರ ಅವನು ತನ್ನ ಮಕ್ಕಳಿಗೆ, <<ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ. BSB BSB: After he had buried him, the prophet said to his sons, “When I die, you must bury me in the tomb where the man of God is buried. Lay my bones beside his bones,
32 ULB ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು>> ಎಂದನು. BSB BSB: for the message that he cried out by the word of the LORD against the altar in Bethel and against all the shrines on the high places in the cities of Samaria will surely come to pass.”
33 ULB ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು. BSB BSB: Even after these events, Jeroboam did not repent of his evil ways, but again he appointed priests for the high places from every class of people. He ordained anyone who desired to be a priest of the high places.
34 ULB ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು. BSB BSB: And this was the sin of the house of Jeroboam that led to its extermination and destruction from the face of the earth.
Select verses for actions: Enter goes to them and Escape comes back.