1 ULB ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು. BSB BSB: In the eighteenth year of the reign of Jeroboam son of Nebat, Abijam became king of Judah,
2 ULB ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ. BSB BSB: and he reigned in Jerusalem three years. His mother’s name was Maacah daughter of Abishalom.
3 ULB ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ. BSB BSB: And Abijam walked in all the sins that his father before him had committed, and his heart was not as fully devoted to the LORD his God as the heart of David his forefather had been.
4 ULB ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ. BSB BSB: Nevertheless, for the sake of David, the LORD his God gave him a lamp in Jerusalem by raising up a son to succeed him and to make Jerusalem strong.
5 ULB ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು. BSB BSB: For David had done what was right in the eyes of the LORD and had not turned aside from anything the LORD commanded all the days of his life, except in the matter of Uriah the Hittite.
6 ULB ರೆಹಬ್ಬಾಮನಿಗೂ ಮತ್ತು ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು. BSB BSB: And there was war between the houses of Rehoboam and Jeroboam all the days of Abijam’s life.
7 ULB ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು. BSB BSB: As for the rest of the acts of Abijam, along with all his accomplishments, are they not written in the Book of the Chronicles of the Kings of Judah? And there was war between Abijam and Jeroboam.
8 ULB ಅಬೀಯಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. BSB BSB: And Abijam rested with his fathers and was buried in the City of David, and his son Asa reigned in his place.
9 ULB ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು. BSB BSB: In the twentieth year of Jeroboam’s reign over Israel, Asa became king of Judah,
10 ULB ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ. BSB BSB: and he reigned in Jerusalem forty-one years. His grandmother’s name was Maacah daughter of Abishalom.
11 ULB ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. BSB BSB: And Asa did what was right in the eyes of the LORD, as his father David had done.
12 ULB ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು. BSB BSB: He banished the male shrine prostitutes from the land and removed all the idols that his fathers had made.
13 ULB ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು. BSB BSB: He also removed his grandmother Maacah from her position as queen mother because she had made a detestable Asherah pole. Asa chopped down the pole and burned it in the Kidron Valley.
14 ULB ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು. BSB BSB: The high places were not removed, but Asa’s heart was fully devoted to the LORD all his days.
15 ULB ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು. BSB BSB: And he brought into the house of the LORD the silver and gold and the articles that he and his father had dedicated.
16 ULB ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು BSB BSB: Now there was war between Asa and Baasha king of Israel throughout their days.
17 ULB ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು. BSB BSB: Baasha king of Israel went to war against Judah and fortified Ramah to prevent anyone from leaving or entering the territory of Asa king of Judah.
18 ULB ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು. BSB BSB: So Asa withdrew all the silver and gold that remained in the treasuries of the house of the LORD and the royal palace. He entrusted it to his servants and sent them with this message to Ben-hadad son of Tabrimmon, the son of Hezion, the king of Aram, who was ruling in Damascus:
19 ULB ಆತನು ಅವನಿಗೆ <<ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು>> ಎಂದು ಹೇಳಿದನು. BSB BSB: “Let there be a treaty between me and you as there was between my father and your father. See, I have sent you a gift of silver and gold. Now go and break your treaty with Baasha king of Israel, so that he will withdraw from me.”
20 ULB ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು. BSB BSB: And Ben-hadad listened to King Asa and sent the commanders of his armies against the cities of Israel, conquering Ijon, Dan, Abel-beth-maacah, and the whole land of Naphtali, including the region of Chinnereth.
21 ULB ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು. BSB BSB: When Baasha learned of this, he stopped fortifying Ramah and withdrew to Tirzah.
22 ULB ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. BSB BSB: Then King Asa summoned all the men of Judah, with no exceptions, and they carried away the stones of Ramah and the timbers Baasha had used for building. And with these materials King Asa built up Geba of Benjamin, as well as Mizpah.
23 ULB ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು. BSB BSB: Now the rest of the acts of Asa, along with all his might, all his accomplishments, and the cities he built, are they not written in the Book of the Chronicles of the Kings of Judah? In his old age, however, he became diseased in his feet.
24 ULB ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. BSB BSB: And Asa rested with his fathers and was buried with them in the city of his father David, and his son Jehoshaphat reigned in his place.
25 ULB ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು. BSB BSB: In the second year of Asa’s reign over Judah, Nadab son of Jeroboam became king of Israel, and he reigned two years.
26 ULB ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. BSB BSB: And he did evil in the sight of the LORD and walked in the way of his father and in his sin, which he had caused Israel to commit.
27 ULB ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು. BSB BSB: Then Baasha son of Ahijah of the house of Issachar conspired against Nadab, and Baasha struck him down at Gibbethon of the Philistines while Nadab and all Israel were besieging the city.
28 ULB ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು. BSB BSB: In the third year of Asa’s reign over Judah, Baasha killed Nadab and reigned in his place.
29 ULB ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು. BSB BSB: As soon as Baasha became king, he struck down the entire household of Jeroboam. He did not leave to Jeroboam anyone who breathed, but destroyed them all according to the word that the LORD had spoken through His servant Ahijah the Shilonite,
30 ULB ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು. BSB BSB: because of the sins Jeroboam had committed and had caused Israel to commit, and because he had provoked the LORD, the God of Israel, to anger.
31 ULB ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. BSB BSB: As for the rest of the acts of Nadab, along with all his accomplishments, are they not written in the Book of the Chronicles of the Kings of Israel?
32 ULB ಆಸನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು. BSB BSB: And there was war between Asa and Baasha king of Israel throughout their days.
33 ULB ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು. BSB BSB: In the third year of Asa’s reign over Judah, Baasha son of Ahijah became king of all Israel, and he reigned in Tirzah twenty-four years.
34 ULB ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. BSB BSB: And Baasha did evil in the sight of the LORD and walked in the way of Jeroboam and in his sin, which he had caused Israel to commit.
Select verses for actions: Enter goes to them and Escape comes back.