1 ULB ಗಿಲ್ಯಾದಿನ ತಿಷ್ಬೀಯ ಊರಿನವನಾದ ತಿಷ್ಬೀಯನಾದ ಎಲೀಯ ಎಂಬುವವನು ಅಹಾಬನಿಗೆ, <<ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ, BSB BSB: Now Elijah the Tishbite, who was among the settlers of Gilead, said to Ahab, “As surely as the LORD, the God of Israel, lives, before whom I stand, there will be neither dew nor rain in these years except at my word!”
2 ULB ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ>> ಅಂದನು. BSB BSB: Then a revelation from the LORD came to Elijah:
3 ULB ತರುವಾಯ ಯೆಹೋವನು ಎಲೀಯನಿಗೆ, <<ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ. BSB BSB: “Leave here, turn eastward, and hide yourself by the Brook of Cherith, east of the Jordan.
4 ULB ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ>> ಎಂದು ಹೇಳಿದನು. BSB BSB: And you are to drink from the brook, and I have commanded the ravens to feed you there.”
5 ULB ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು. BSB BSB: So Elijah did what the LORD had told him, and he went and lived by the Brook of Cherith, east of the Jordan.
6 ULB ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು. BSB BSB: The ravens would bring him bread and meat in the morning and evening, and he would drink from the brook.
7 ULB ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು. BSB BSB: Some time later, however, the brook dried up because there had been no rain in the land.
8 ULB ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು, BSB BSB: Then the word of the LORD came to Elijah:
9 ULB ಆತನು ಅವನಿಗೆ, <<ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ>> ಅಂದನು. BSB BSB: “Get up and go to Zarephath of Sidon, and stay there. Behold, I have commanded a widow there to provide for you.”
10 ULB ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, <<ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ>> ಎಂದು ಹೇಳಿದನು. BSB BSB: So Elijah got up and went to Zarephath. When he arrived at the city gate, there was a widow gathering sticks. Elijah called to her and said, “Please bring me a little water in a cup, so that I may drink.”
11 ULB ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, <<ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ>> ಅಂದನು. BSB BSB: And as she was going to get it, he called to her and said, “Please bring me a piece of bread.”
12 ULB ಆಕೆಯು ಅವನಿಗೆ, <<ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ>> ಎಂದು ಉತ್ತರಕೊಟ್ಟಳು. BSB BSB: But she replied, “As surely as the LORD your God lives, I have no bread—only a handful of flour in a jar and a little oil in a jug. Look, I am gathering a couple of sticks to take home and prepare a meal for myself and my son, so that we may eat it and die.”
13 ULB ಆಗ ಎಲೀಯನು ಆಕೆಗೆ, <<ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. BSB BSB: “Do not be afraid,” Elijah said to her. “Go and do as you have said. But first make me a small cake of bread from what you have, and bring it out to me. Afterward, make some for yourself and your son,
14 ULB ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, <ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ>>> ಎಂದು ಹೇಳುತ್ತಾನೆ. BSB BSB: for this is what the LORD, the God of Israel, says: ‘The jar of flour will not be exhausted and the jug of oil will not run dry until the day the LORD sends rain upon the face of the earth.’”
15 ULB ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು. BSB BSB: So she went and did according to the word of Elijah, and there was food every day for Elijah and the woman and her household.
16 ULB ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ. BSB BSB: The jar of flour was not exhausted and the jug of oil did not run dry, according to the word that the LORD had spoken through Elijah.
17 ULB ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು. BSB BSB: Later, the son of the woman who owned the house became ill, and his sickness grew worse and worse, until no breath remained in him.
18 ULB ಆಗ ಆ ಸ್ತ್ರೀಯು ಎಲೀಯನಿಗೆ, <<ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?>> ಎಂದಳು. BSB BSB: “O man of God,” said the woman to Elijah, “what have you done to me? Have you come to remind me of my iniquity and cause the death of my son?”
19 ULB ಅವನು ಆಕೆಗೆ, <<ನಿನ್ನ ಮಗನನ್ನು ನನಗೆ ಕೊಡು>> ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು. BSB BSB: But Elijah said to her, “Give me your son.” So he took him from her arms, carried him to the upper room where he was staying, and laid him on his own bed.
20 ULB ಅನಂತರ ಅವನು ಯೆಹೋವನಿಗೆ, <<ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?>> ಎಂದು ಕೇಳಿದನು. BSB BSB: Then he cried out to the LORD, “O LORD my God, have You also brought tragedy on this widow who has opened her home to me, by causing her son to die?”
21 ULB ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, <<ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು>> ಎಂಬುದಾಗಿ ಆತನಿಗೆ ಮೊರೆಯಿಟ್ಟನು. BSB BSB: Then he stretched himself out over the child three times and cried out to the LORD, “O LORD my God, please let this boy’s life return to him!”
22 ULB ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು. BSB BSB: And the LORD listened to the voice of Elijah, and the child’s life returned to him, and he lived.
23 ULB ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, <<ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ>> ಅಂದನು. BSB BSB: Then Elijah took the child, brought him down from the upper room into the house, and gave him to his mother. “Look, your son is alive,” Elijah declared.
24 ULB ಆಗ ಆಕೆಯು ಎಲೀಯನಿಗೆ, <<ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು>> ಎಂದು ಹೇಳಿದಳು. BSB BSB: Then the woman said to Elijah, “Now I know that you are a man of God and that the word of the LORD from your mouth is truth.”
Select verses for actions: Enter goes to them and Escape comes back.