1 ULB ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು. BSB BSB: Now Ahab told Jezebel everything that Elijah had done and how he had killed all the prophets with the sword.
2 ULB ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಹೇಳಿಕಳುಹಿಸಿದಳು. BSB BSB: So Jezebel sent a messenger to Elijah, saying, “May the gods deal with me, and ever so severely, if by this time tomorrow I have not made your life like the lives of those you killed!”
3 ULB ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು. BSB BSB: And Elijah was afraid and ran for his life. When he came to Beersheba in Judah, he left his servant there,
4 ULB ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, <<ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ>> ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು. BSB BSB: while he himself went a day’s journey into the wilderness. He sat down under a broom tree and prayed that he might die. “I have had enough, LORD,” he said. “Take my life, for I am no better than my fathers.”
5 ULB ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, <<ಎದ್ದು ಊಟ ಮಾಡು>> ಎಂದು ಹೇಳಿದನು. BSB BSB: Then he lay down under the broom tree and fell asleep. Suddenly an angel touched him and said, “Get up and eat.”
6 ULB ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು. BSB BSB: And he looked around, and there by his head was a cake of bread baked over hot coals, and a jar of water. So he ate and drank and lay down again.
7 ULB ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, <<ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ>> ಎಂದನು. BSB BSB: A second time the angel of the LORD returned and touched him, saying, “Get up and eat, or the journey will be too much for you.”
8 ULB ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ BSB BSB: So he got up and ate and drank. And strengthened by that food, he walked forty days and forty nights until he reached Horeb, the mountain of God.
9 ULB ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, <<ಎಲೀಯನೇ ನೀನು ಇಲ್ಲೇನು ಮಾಡುತ್ತೀ?>> ಎಂಬ ವಾಣಿಯು ಕೇಳಿಸಿತು. BSB BSB: There Elijah entered a cave and spent the night. And the word of the LORD came to him, saying, “What are you doing here, Elijah?”
10 ULB ಅವನು ಅದಕ್ಕೆ, <<ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ>> ಎಂದು ಉತ್ತರಕೊಟ್ಟನು. BSB BSB: “I have been very zealous for the LORD, the God of Hosts,” he replied, “but the Israelites have forsaken Your covenant, torn down Your altars, and killed Your prophets with the sword. I am the only one left, and they are seeking my life as well.”
11 ULB ಆಗ ಪುನಃ, <<ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು>> ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ. BSB BSB: Then the LORD said, “Go out and stand on the mountain before the LORD. Behold, the LORD is about to pass by.” And a great and mighty wind tore into the mountains and shattered the rocks before the LORD, but the LORD was not in the wind. After the wind there was an earthquake, but the LORD was not in the earthquake.
12 ULB ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು, BSB BSB: After the earthquake there was a fire, but the LORD was not in the fire. And after the fire came a still, small voice.
13 ULB ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, <<ಎಲೀಯನೇ ನೀನು ಇಲ್ಲೇನು ಮಾಡುತ್ತೀ?>> ಎಂಬ ವಾಣಿಯು ಕೇಳಿಸಿತು. BSB BSB: When Elijah heard it, he wrapped his face in his cloak and went out and stood at the mouth of the cave. Suddenly a voice came to him and said, “What are you doing here, Elijah?”
14 ULB ಅದಕ್ಕೆ ಅವನು, <<ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ>> ಎಂದು ಉತ್ತರಕೊಟ್ಟನು. BSB BSB: “I have been very zealous for the LORD, the God of Hosts,” he replied, “but the Israelites have forsaken Your covenant, torn down Your altars, and killed Your prophets with the sword. I am the only one left, and they are seeking my life as well.”
15 ULB ಆಗ ಯೆಹೋವನು ಅವನಿಗೆ, <<ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು. BSB BSB: Then the LORD said to him, “Go back by the way you came, and go to the Desert of Damascus. When you arrive, you are to anoint Hazael as king over Aram.
16 ULB ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು. BSB BSB: You are also to anoint Jehu son of Nimshi as king over Israel and Elisha son of Shaphat from Abel-meholah to succeed you as prophet.
17 ULB ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು. BSB BSB: Then Jehu will put to death whoever escapes the sword of Hazael, and Elisha will put to death whoever escapes the sword of Jehu.
18 ULB ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು>> ಎಂದು ಹೇಳಿದನು. BSB BSB: Nevertheless, I have reserved seven thousand in Israel—all whose knees have not bowed to Baal and whose mouths have not kissed him.”
19 ULB ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. BSB BSB: So Elijah departed and found Elisha son of Shaphat. He was plowing with twelve teams of oxen, and he was with the twelfth team. Elijah passed by him and threw his cloak around him.
20 ULB ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, <<ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು>> ಅಂದನು. ಅದಕ್ಕೆ ಎಲೀಯನು <<ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?>> ಎಂದು ಉತ್ತರಕೊಟ್ಟನು. BSB BSB: So Elisha left the oxen, ran after Elijah, and said, “Please let me kiss my father and mother goodbye, and then I will follow you.” “Go on back,” Elijah replied, “for what have I done to you?”
21 ULB ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು. BSB BSB: So Elisha turned back from him, took his pair of oxen, and slaughtered them. Using the oxen’s equipment for fuel, he cooked the meat and gave it to the people, and they ate. Then he set out to follow and serve Elijah.
Select verses for actions: Enter goes to them and Escape comes back.