1 ULB ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ. BSB BSB: Then three years passed without war between Aram and Israel.
2 ULB ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು. BSB BSB: However, in the third year, Jehoshaphat king of Judah went down to visit the king of Israel,
3 ULB ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, <<ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ>> ಎಂದು ಹೇಳಿದನು. BSB BSB: who said to his servants, “Do you not know that Ramoth-gilead is ours, but we have failed to take it from the hand of the king of Aram?”
4 ULB ಅವನು ಯೆಹೋಷಾಫಾಟನಿಗೆ, <<ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?>> ಎಂದು ಕೇಳಲು ಅವನು, <<ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?>> ಎಂದು ಉತ್ತರಕೊಟ್ಟನು. BSB BSB: So he asked Jehoshaphat, “Will you go with me to fight against Ramoth-gilead?” Jehoshaphat answered the king of Israel, “I am as you are, my people are your people, and my horses are your horses.”
5 ULB ಯೆಹೋಷಾಫಾಟನು, <<ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು>> ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು. BSB BSB: But Jehoshaphat also said to the king of Israel, “Please inquire first for the word of the LORD.”
6 ULB ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, <<ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?>> ಎಂದು ಕೇಳಲು ಅವರು, <<ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು>> ಅಂದರು. BSB BSB: So the king of Israel assembled the prophets, about four hundred men, and asked them, “Should I go to war against Ramoth-gilead, or should I refrain?” “Go up,” they replied, “and the Lord will deliver it into the hand of the king.”
7 ULB ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, <<ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?>> ಎಂದು ಕೇಳಿದನು. BSB BSB: But Jehoshaphat asked, “Is there not still a prophet of the LORD here of whom we can inquire?”
8 ULB ಅದಕ್ಕೆ ಅವನು <<ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ>> ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು <<ಅರಸನು ಹಾಗನ್ನದಿರಲಿ>> ಅಂದನು. BSB BSB: The king of Israel answered, “There is still one man through whom we can inquire of the LORD, but I hate him because he never prophesies anything good for me, but only bad. He is Micaiah son of Imlah.” “The king should not say that!” Jehoshaphat replied.
9 ULB ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, <<ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ>> ಎಂದು ಆಜ್ಞಾಪಿಸಿದನು. BSB BSB: So the king of Israel called one of his officials and said, “Bring Micaiah son of Imlah at once.”
10 ULB ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು. BSB BSB: Dressed in royal attire, the king of Israel and Jehoshaphat king of Judah were sitting on their thrones at the threshing floor by the entrance of the gate of Samaria, with all the prophets prophesying before them.
11 ULB ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, <<ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ>> ಎಂದನು. BSB BSB: Now Zedekiah son of Chenaanah had made for himself iron horns and declared, “This is what the LORD says: ‘With these you shall gore the Arameans until they are finished off.’”
12 ULB ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, <<ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು>> ಅಂದರು. BSB BSB: And all the prophets were prophesying the same, saying, “Go up to Ramoth-gilead and triumph, for the LORD will deliver it into the hand of the king.”
13 ULB ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, <<ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು>> ಎಂದು ಹೇಳಿದನು. BSB BSB: Then the messenger who had gone to call Micaiah instructed him, “Behold now, with one accord the words of the prophets are favorable to the king. So please let your words be like theirs, and speak favorably.”
14 ULB ಅದಕ್ಕೆ ಮೀಕಾಯೆಹುವು, <<ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ>> ಎಂದು ಉತ್ತರಕೊಟ್ಟನು. BSB BSB: But Micaiah said, “As surely as the LORD lives, I will speak whatever the LORD tells me.”
15 ULB ಅವನು ಅರಸನ ಬಳಿಗೆ ಬಂದಾಗ ಅರಸನು, <<ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?>> ಎಂದು ಕೇಳಲು ಅವನು, <<ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು>> ಎಂದು ಹೇಳಿದನು. BSB BSB: When Micaiah arrived, the king asked him, “Micaiah, should we go to war against Ramoth-gilead, or should we refrain?” “Go up and triumph,” Micaiah replied, “for the LORD will deliver it into the hand of the king.”
16 ULB ಆಗ ಅರಸನು, <<ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?>> ಎಂದನು. BSB BSB: But the king said to him, “How many times must I make you swear not to tell me anything but the truth in the name of the LORD?”
17 ULB ಆಗ ಮೀಕಾಯೆಹುವು, <<ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, <ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ> ಎಂದನು>> ಎಂಬುದಾಗಿ ಉತ್ತರಕೊಟ್ಟನು. BSB BSB: So Micaiah declared: “I saw all Israel scattered on the hills like sheep without a shepherd. And the LORD said, ‘These people have no master; let each one return home in peace.’”
18 ULB ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, <<ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?>> ಎಂದನು. BSB BSB: Then the king of Israel said to Jehoshaphat, “Did I not tell you that he never prophesies good for me, but only bad?”
19 ULB ಅದಕ್ಕೆ ಮೀಕಾಯೆಹುವು <<ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು. BSB BSB: Micaiah continued, “Therefore hear the word of the LORD: I saw the LORD sitting on His throne, and all the host of heaven standing by Him on His right and on His left.
20 ULB ಯೆಹೋವನು ತನ್ನ ಹತ್ತಿರ ನಿಂತವರನ್ನು, <ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ> ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು. BSB BSB: And the LORD said, ‘Who will entice Ahab to march up and fall at Ramoth-gilead?’ And one suggested this, and another that.
21 ULB ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, <ನಾನು ಹೋಗಿ ಅವರನ್ನು ಪ್ರೇರೇಪಿಸುವೆನು> ಅಂದಿತು. BSB BSB: Then a spirit came forward, stood before the LORD, and said, ‘I will entice him.’ ‘By what means?’ asked the LORD.
22 ULB <ಹೇಗೆ ಪ್ರೇರೇಪಿಸುವಿ?> ಎಂದು ಯೆಹೋವನು ಕೇಳಲು ಅದು, <ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು> ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, <ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ> ಅಂದನು. BSB BSB: And he replied, ‘I will go out and be a lying spirit in the mouths of all his prophets.’ ‘You will surely entice him and prevail,’ said the LORD. ‘Go and do it.’
23 ULB ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ>> ಎಂದು ಹೇಳಿದನು. BSB BSB: So you see, the LORD has put a lying spirit in the mouths of all these prophets of yours, and the LORD has pronounced disaster against you.”
24 ULB ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, <<ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?>> ಎನ್ನಲು BSB BSB: Then Zedekiah son of Chenaanah went up, struck Micaiah in the face, and demanded, “Which way did the Spirit of the LORD go when He departed from me to speak with you?”
25 ULB ಮೀಕಾಯೆಹುವು, <<ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು>> ಎಂದು ಉತ್ತರಕೊಟ್ಟನು. BSB BSB: Micaiah replied, “You will soon see, on that day when you go and hide in an inner room.”
26 ULB ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, <<ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ, BSB BSB: And the king of Israel declared, “Take Micaiah and return him to Amon the governor of the city and to Joash the king’s son,
27 ULB <ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ> ಎಂದು ಹೇಳಿರಿ>> ಎಂಬುದಾಗಿ ಆಜ್ಞಾಪಿಸಿದನು. BSB BSB: and tell them that this is what the king says: ‘Put this man in prison and feed him only bread and water until I return safely.’”
28 ULB ಮೀಕಾಯೆಹುವು ಅರಸನಿಗೆ, <<ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ>> ಎಂದು ಹೇಳಿ <<ಎಲ್ಲಾ ಜನರೇ, ಇದನ್ನು ಕೇಳಿರಿ>> ಎಂದು ಕೂಗಿದನು. BSB BSB: But Micaiah replied, “If you ever return safely, the LORD has not spoken through me.” Then he added, “Take heed, all you people!”
29 ULB ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. BSB BSB: So the king of Israel and Jehoshaphat king of Judah went up to Ramoth-gilead.
30 ULB ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, <<ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ>> ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು. BSB BSB: And the king of Israel said to Jehoshaphat, “I will disguise myself and go into battle, but you wear your royal robes.” So the king of Israel disguised himself and went into battle.
31 ULB ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, <<ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ>> ಎಂದು ಆಜ್ಞಾಪಿಸಿದನು. BSB BSB: Now the king of Aram had ordered his thirty-two chariot commanders, “Do not fight with anyone, small or great, except the king of Israel.”
32 ULB ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು. BSB BSB: When the chariot commanders saw Jehoshaphat, they said, “Surely this is the king of Israel!” So they turned to fight against him, but Jehoshaphat cried out.
33 ULB ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. BSB BSB: And when the chariot commanders saw that he was not the king of Israel, they turned back from pursuing him.
34 ULB ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, <<ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ>> ಎಂದು ಹೇಳಿದನು. BSB BSB: However, a certain man drew his bow without taking special aim, and he struck the king of Israel between the joints of his armor. So the king said to his charioteer, “Turn around and take me out of the battle, for I am badly wounded!”
35 ULB ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು. BSB BSB: The battle raged throughout that day, and the king was propped up in his chariot facing the Arameans. And the blood from his wound ran out onto the floor of the chariot, and that evening he died.
36 ULB ಸೂರ್ಯಸ್ತಮಾನವಾದ ಕೂಡಲೆ <<ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ>> ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು BSB BSB: As the sun was setting, the cry rang out in the army: “Every man to his own city, and every man to his own land!”
37 ULB ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು. BSB BSB: So the king died and was brought to Samaria, where they buried him.
38 ULB ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು. BSB BSB: And the chariot was washed at the pool of Samaria where the prostitutes bathed, and the dogs licked up Ahab’s blood, according to the word that the LORD had spoken.
40 ULB ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು. BSB BSB: And Ahab rested with his fathers, and his son Ahaziah reigned in his place.
41 ULB ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. BSB BSB: In the fourth year of Ahab’s reign over Israel, Jehoshaphat son of Asa became king of Judah.
42 ULB ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ BSB BSB: Jehoshaphat was thirty-five years old when he became king, and he reigned in Jerusalem twenty-five years. His mother’s name was Azubah daughter of Shilhi.
43 ULB ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು. BSB BSB: And Jehoshaphat walked in all the ways of his father Asa; he did not turn away from them, but did what was right in the eyes of the LORD. The high places, however, were not removed; the people still sacrificed and burned incense on the high places.
44 ULB ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು. BSB BSB: Jehoshaphat also made peace with the king of Israel.
45 ULB ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. BSB BSB: As for the rest of the acts of Jehoshaphat, along with the might he exercised and how he waged war, are they not written in the Book of the Chronicles of the Kings of Judah?
46 ULB ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು. BSB BSB: He banished from the land the male shrine prostitutes who remained from the days of his father Asa.
47 ULB ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು. BSB BSB: And there was no king in Edom; a deputy served as king.
48 ULB ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು. BSB BSB: Jehoshaphat built ships of Tarshish to go to Ophir for gold, but they never set sail, because they were wrecked at Ezion-geber.
49 ULB ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, <<ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ>> ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ. BSB BSB: At that time Ahaziah son of Ahab said to Jehoshaphat, “Let my servants sail with your servants,” but Jehoshaphat refused.
50 ULB ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು. BSB BSB: And Jehoshaphat rested with his fathers and was buried with them in the city of his father David. And his son Jehoram reigned in his place.
51 ULB ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು. BSB BSB: In the seventeenth year of Jehoshaphat’s reign over Judah, Ahaziah son of Ahab became king of Israel, and he reigned in Samaria two years.
52 ULB ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. BSB BSB: And he did evil in the sight of the LORD and walked in the ways of his father and mother and of Jeroboam son of Nebat, who had caused Israel to sin.
53 ULB ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು. BSB BSB: Ahaziah served and worshiped Baal, provoking the LORD, the God of Israel, to anger, just as his father had done.
Select verses for actions: Enter goes to them and Escape comes back.