1 ULB ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು. BSB BSB: Later, Solomon formed an alliance with Pharaoh king of Egypt by marrying his daughter. Solomon brought her to the City of David until he had finished building his palace and the house of the LORD, as well as the wall around Jerusalem.
2 ULB ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು. BSB BSB: The people, however, were still sacrificing on the high places because a house for the Name of the LORD had not yet been built.
3 ULB ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು. BSB BSB: And Solomon loved the LORD and walked in the statutes of his father David, except that he sacrificed and burned incense on the high places.
4 ULB ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು. BSB BSB: Now the king went to Gibeon to sacrifice there, for it was the great high place. Solomon offered a thousand burnt offerings on the altar there.
5 ULB ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, <<ನಿನಗೆ ಯಾವ ವರ ಬೇಕು ಕೇಳಿಕೋ>> ಎಂದು ಹೇಳಲು ಸೊಲೊಮೋನನು, BSB BSB: One night at Gibeon the LORD appeared to Solomon in a dream, and God said, “Ask, and I will give it to you!”
6 ULB <<ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ. BSB BSB: Solomon replied, “You have shown much loving devotion to Your servant, my father David, because he walked before You in faithfulness, righteousness, and uprightness of heart. And You have maintained this loving devotion by giving him a son to sit on his throne this very day.
7 ULB ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು. BSB BSB: And now, O LORD my God, You have made Your servant king in my father David’s place. But I am only a little child, not knowing how to go out or come in.
8 ULB ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ. BSB BSB: Your servant is here among the people You have chosen, a people too numerous to count or number.
9 ULB ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?>> ಎಂದು ಬೇಡಿಕೊಂಡನು. BSB BSB: Therefore give Your servant an understanding heart to judge Your people and to discern between good and evil. For who is able to govern this great people of Yours?”
10 ULB ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು. BSB BSB: Now it pleased the Lord that Solomon had made this request.
11 ULB ಆಗ ದೇವರು ಅವನಿಗೆ, <<ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. BSB BSB: So God said to him, “Since you have asked for this instead of requesting long life or wealth for yourself or death for your enemies—but you have asked for discernment to administer justice—
12 ULB ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ. BSB BSB: behold, I will do what you have asked. I will give you a wise and discerning heart, so that there will never have been another like you, nor will there ever be.
13 ULB ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ. BSB BSB: Moreover, I will give you what you did not request—both riches and honor—so that during all your days no man in any kingdom will be your equal.
14 ULB ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು>> ಎಂದನು. BSB BSB: So if you walk in My ways and keep My statutes and commandments, just as your father David did, I will prolong your days.”
15 ULB ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು. BSB BSB: Then Solomon awoke, and indeed it had been a dream. So he returned to Jerusalem, stood before the ark of the covenant of the Lord, and offered burnt offerings and peace offerings. Then he held a feast for all his servants.
16 ULB ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು. BSB BSB: At that time two prostitutes came to the king and stood before him.
17 ULB ಅವರಲ್ಲಿ ಒಬ್ಬಳು ಅರಸನಿಗೆ, <<ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು. BSB BSB: One woman said, “Please, my lord, this woman and I live in the same house, and I gave birth while she was in the house.
18 ULB ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು. ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ BSB BSB: On the third day after I gave birth, this woman also had a baby. We were alone, with no one in the house but the two of us.
19 ULB ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು. BSB BSB: During the night this woman’s son died because she rolled over on him.
20 ULB ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು. BSB BSB: So she got up in the middle of the night and took my son from my side while I was asleep. She laid him in her bosom and put her dead son at my bosom.
21 ULB ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ>> ಎಂದು ಹೇಳಿದಳು. BSB BSB: The next morning, when I got up to nurse my son, I discovered he was dead. But when I examined him, I realized that he was not the son I had borne.”
22 ULB ಆಗ ಎರಡನೆಯವಳು, <<ಹಾಗಲ್ಲ, ಬದುಕಿರುವವನು ನನ್ನ ಮಗನು ಸತ್ತಿರುವವನು ನಿನ್ನ ಮಗನು>> ಎಂದು ನುಡಿದಳು. ಮೊದಲನೆಯವಳು ತಿರುಗಿ, <<ಅಲ್ಲ, ಸತ್ತಿರುವವನು ನಿನ್ನ ಮಗನು, ಬದುಕಿರುವವನು ನನ್ನ ಮಗನು>> ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು. BSB BSB: “No,” said the other woman, “the living one is my son and the dead one is your son.” But the first woman insisted, “No, the dead one is yours and the living one is mine.” So they argued before the king.
23 ULB ಆಗ ಅರಸನು, <<ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ. BSB BSB: Then the king replied, “This woman says, ‘My son is alive and yours is dead,’ but that woman says, ‘No, your son is dead and mine is alive.’”
24 ULB ನನಗೊಂದು ಕತ್ತಿಯನ್ನು ತಂದು ಕೊಡಿರಿ>> ಎಂದು ಸೇವಕರಿಗೆ ಹೇಳಿದನು. BSB BSB: The king continued, “Bring me a sword.” So they brought him a sword,
25 ULB ಅವರು ಕತ್ತಿಯನ್ನು ತರಲು ಅರಸನು ಅವರಿಗೆ, <<ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗ ಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ>> ಎಂದು ಅಪ್ಪಣೆ ಮಾಡಿದನು. BSB BSB: and the king declared, “Cut the living child in two and give half to one and half to the other.”
26 ULB ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, <<ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ>> ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, <<ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ>> ಎಂದು ಕೂಗಿದಳು. BSB BSB: Then the woman whose son was alive spoke to the king because she yearned with compassion for her son. “Please, my lord,” she said, “give her the living baby. Do not kill him!” But the other woman said, “He will be neither mine nor yours. Cut him in two!”
27 ULB ಕೂಡಲೇ ಅರಸನು, <<ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ>> ಎಂದು ಆಜ್ಞಾಪಿಸಿದನು. BSB BSB: Then the king gave his ruling: “Give the living baby to the first woman. By no means should you kill him; she is his mother.”
28 ULB ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು. BSB BSB: When all Israel heard of the judgment the king had given, they stood in awe of him, for they saw that the wisdom of God was in him to administer justice.
Select verses for actions: Enter goes to them and Escape comes back.