1 ULB ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು. BSB BSB: So King Solomon ruled over Israel,
2 ULB ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು. BSB BSB: and these were his chief officials: Azariah son of Zadok was the priest;
3 ULB ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು. BSB BSB: Elihoreph and Ahijah, the sons of Shisha, were secretaries; Jehoshaphat son of Ahilud was the recorder;
4 ULB ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು. BSB BSB: Benaiah son of Jehoiada was in charge of the army; Zadok and Abiathar were priests;
5 ULB ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು. BSB BSB: Azariah son of Nathan was in charge of the governors; Zabud son of Nathan was a priest and adviser to the king;
6 ULB ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು. BSB BSB: Ahishar was in charge of the palace; and Adoniram son of Abda was in charge of the forced labor.
7 ULB ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು. BSB BSB: Solomon had twelve governors over all Israel to provide food for the king and his household. Each one would arrange provisions for one month of the year,
8 ULB ಅವರು ಯಾರಾರೆಂದರೆ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿದ್ದ ಹೂರನ ಮಗ, BSB BSB: and these were their names: Ben-hur in the hill country of Ephraim;
9 ULB ಮಾಕಾಚ್, ಶಾಲ್ಬೀಮ್, ಬೇತ್ಷೆಮೆಷ್, ಏಲೋನ್ ಮತ್ತು ಬೇತ್ ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು. BSB BSB: Ben-deker in Makaz, in Shaalbim, in Beth-shemesh, and in Elon-beth-hanan;
10 ULB ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗ, ಅವನು ಸೋಕೋ ಮತ್ತು ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು. BSB BSB: Ben-hesed in Arubboth (Socoh and all the land of Hepher belonged to him);
11 ULB ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು. BSB BSB: Ben-abinadab in Naphath-dor (Taphath, a daughter of Solomon, was his wife);
12 ULB ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು. BSB BSB: Baana son of Ahilud in Taanach, in Megiddo, and in all of Beth-shean next to Zarethan below Jezreel, from Beth-shean to Abel-meholah and on past Jokmeam;
13 ULB ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು. BSB BSB: Ben-geber in Ramoth-gilead (the villages of Jair son of Manasseh in Gilead belonged to him, as well as the region of Argob in Bashan with its sixty great cities with walls and bronze bars);
14 ULB ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು. BSB BSB: Ahinadab son of Iddo in Mahanaim;
15 ULB ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು. BSB BSB: Ahimaaz in Naphtali (he had married Basemath, a daughter of Solomon);
16 ULB ಅಶೇರಿಗೂ ಮತ್ತು ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು, BSB BSB: Baana son of Hushai in Asher and in Aloth;
17 ULB ಇಸ್ಸಾಕಾರ್ ಪ್ರಾಂತ್ಯದಲ್ಲಿದ್ದ ಫಾರೂಹನ ಮಗನಾದ ಯೆಹೋಷಾಫಾಟನು, BSB BSB: Jehoshaphat son of Paruah in Issachar;
18 ULB ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ, BSB BSB: Shimei son of Ela in Benjamin;
19 ULB ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು. BSB BSB: Geber son of Uri in the land of Gilead, including the territories of Sihon king of the Amorites and of Og king of Bashan. There was also one governor in the land of Judah.
20 ULB ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು. BSB BSB: The people of Judah and Israel were as numerous as the sand on the seashore, and they were eating and drinking and rejoicing.
21 ULB ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು. BSB BSB: And Solomon reigned over all the kingdoms from the Euphrates to the land of the Philistines, as far as the border of Egypt. These kingdoms offered tribute and served Solomon all the days of his life.
22 ULB ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು, BSB BSB: Solomon’s provisions for a single day were thirty cors of fine flour, sixty cors of meal,
23 ULB ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ. BSB BSB: ten fat oxen, twenty range oxen, and a hundred sheep, as well as deer, gazelles, roebucks, and fattened poultry.
24 ULB ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು. BSB BSB: For Solomon had dominion over everything west of the Euphrates—over all the kingdoms from Tiphsah to Gaza—and he had peace on all sides.
25 ULB ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು. BSB BSB: Throughout the days of Solomon, Judah and Israel dwelt securely from Dan to Beersheba, each man under his own vine and his own fig tree.
26 ULB ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು. BSB BSB: Solomon had 4,000 stalls for his chariot horses and 12,000 horses.
27 ULB ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು. BSB BSB: Each month the governors in turn provided food for King Solomon and all who came to his table. They saw to it that nothing was lacking.
28 ULB ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು. BSB BSB: Each one also brought to the required place their quotas of barley and straw for the chariot horses and other horses.
29 ULB ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು. BSB BSB: And God gave Solomon wisdom, exceedingly deep insight, and understanding beyond measure, like the sand on the seashore.
30 ULB ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು. BSB BSB: Solomon’s wisdom was greater than that of all the men of the East, greater than all the wisdom of Egypt.
31 ULB ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು. BSB BSB: He was wiser than all men—wiser than Ethan the Ezrahite, and wiser than Heman, Calcol, and Darda, the sons of Mahol. And his fame spread throughout the surrounding nations.
32 ULB ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು. BSB BSB: Solomon composed three thousand proverbs, and his songs numbered a thousand and five.
33 ULB ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು. BSB BSB: He spoke of trees, from the cedar in Lebanon to the hyssop growing in the wall, and he taught about animals, birds, reptiles, and fish.
34 ULB ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು. BSB BSB: So men of all nations came to listen to Solomon’s wisdom, sent by all the kings of the earth, who had heard of his wisdom.
Select verses for actions: Enter goes to them and Escape comes back.