1 ULB ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು. BSB BSB: Solomon, however, took thirteen years to complete the construction of his entire palace.
2 ULB ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು. BSB BSB: He built the House of the Forest of Lebanon a hundred cubits long, fifty cubits wide, and thirty cubits high, with four rows of cedar pillars supporting the cedar beams.
3 ULB ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು. BSB BSB: The house was roofed with cedar above the beams that rested on the pillars—forty-five beams, fifteen per row.
4 ULB ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು BSB BSB: There were three rows of high windows facing one another in three tiers.
5 ULB ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು. BSB BSB: All the doorways had rectangular frames, with the openings facing one another in three tiers.
6 ULB ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು. BSB BSB: Solomon made his colonnade fifty cubits long and thirty cubits wide, with a portico in front of it and a canopy with pillars in front of the portico.
7 ULB ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು. BSB BSB: In addition, he built a hall for the throne, the Hall of Justice, where he was to judge. It was paneled with cedar from floor to ceiling.
8 ULB ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು. BSB BSB: And the palace where Solomon would live, set further back, was of similar construction. He also made a palace like this hall for Pharaoh’s daughter, whom he had married.
9 ULB ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು. BSB BSB: All these buildings were constructed with costly stones, cut to size and trimmed with saws inside and out from the foundation to the eaves, and from the outside to the great courtyard.
10 ULB ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು. BSB BSB: The foundations were laid with large, costly stones, some ten cubits long and some eight cubits long.
11 ULB ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು. BSB BSB: Above these were costly stones, cut to size, and cedar beams.
12 ULB ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು. BSB BSB: The great courtyard was surrounded by three rows of dressed stone and a row of trimmed cedar beams, as were the inner courtyard and portico of the house of the LORD.
13 ULB ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು. BSB BSB: Now King Solomon sent to bring Huram from Tyre.
14 ULB ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು. BSB BSB: He was the son of a widow from the tribe of Naphtali, and his father was a man of Tyre, a craftsman in bronze. Huram had great skill, understanding, and knowledge for every kind of bronze work. So he came to King Solomon and carried out all his work.
15 ULB ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ. BSB BSB: He cast two pillars of bronze, each eighteen cubits high and twelve cubits in circumference.
16 ULB ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ, BSB BSB: He also made two capitals of cast bronze to set on top of the pillars, each capital five cubits high.
17 ULB ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು. BSB BSB: For the capitals on top of the pillars he made a network of lattice, with wreaths of chainwork, seven for each capital.
18 ULB ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು. BSB BSB: Likewise, he made the pillars with two rows of pomegranates around each grating to cover each capital atop the pillars.
19 ULB ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು. BSB BSB: And the capitals atop the pillars in the portico were shaped like lilies, four cubits high.
20 ULB ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು. BSB BSB: On the capitals of both pillars, just above the rounded projection next to the network, were the two hundred pomegranates in rows encircling each capital.
21 ULB ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು. BSB BSB: Thus he set up the pillars at the portico of the temple. The pillar to the south he named Jachin, and the pillar to the north he named Boaz.
22 ULB ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು. BSB BSB: And the tops of the pillars were shaped like lilies. So the work of the pillars was completed.
23 ULB ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ. BSB BSB: He also made the Sea of cast metal. It was circular in shape, measuring ten cubits from rim to rim, five cubits in height, and thirty cubits in circumference.
24 ULB ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು. BSB BSB: Below the rim, ornamental buds encircled it, ten per cubit all the way around the Sea, cast in two rows as a part of the Sea.
25 ULB ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು. BSB BSB: The Sea stood on twelve oxen, three facing north, three facing west, three facing south, and three facing east. The Sea rested on them, with all their hindquarters toward the center.
26 ULB ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು. BSB BSB: It was a handbreadth thick, and its rim was fashioned like the brim of a cup, like a lily blossom. It could hold two thousand baths.
27 ULB ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು. BSB BSB: In addition, he made ten movable stands of bronze, each four cubits long, four cubits wide, and three cubits high.
28 ULB ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು. BSB BSB: This was the design of the stands: They had side panels attached to uprights,
29 ULB ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು. BSB BSB: and on the panels between the uprights were lions, oxen, and cherubim. On the uprights was a pedestal above, and below the lions and oxen were wreaths of beveled work.
30 ULB ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ನೀರು ತುಂಬುವ ಬೋಗುಣಿಗಳು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು. BSB BSB: Each stand had four bronze wheels with bronze axles and a basin resting on four supports, with wreaths at each side.
31 ULB ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು. BSB BSB: The opening to each stand inside the crown at the top was one cubit deep, with a round opening like the design of a pedestal, a cubit and a half wide. And around its opening were engravings, but the panels of the stands were square, not round.
32 ULB ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು. BSB BSB: There were four wheels under the panels, and the axles of the wheels were attached to the stand; each wheel was a cubit and a half in diameter.
33 ULB ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು. BSB BSB: The wheels were made like chariot wheels; their axles, rims, spokes, and hubs were all of cast metal.
34 ULB ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು. BSB BSB: Each stand had four handles, one for each corner, projecting from the stand.
35 ULB ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು. BSB BSB: At the top of each stand was a circular band half a cubit high. The supports and panels were cast as a unit with the top of the stand.
36 ULB ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು. BSB BSB: He engraved cherubim, lions, and palm trees on the surfaces of the supports and panels, wherever each had space, with wreaths all around.
37 ULB ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು. BSB BSB: In this way he made the ten stands, each with the same casting, dimensions, and shape.
38 ULB ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು. BSB BSB: He also made ten bronze basins, each holding forty baths and measuring four cubits across, one basin for each of the ten stands.
39 ULB ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು. BSB BSB: He set five stands on the south side of the temple and five on the north, and he put the Sea on the south side, at the southeast corner of the temple.
40 ULB ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ. BSB BSB: Additionally, Huram made the pots, shovels, and sprinkling bowls. So Huram finished all the work that he had undertaken for King Solomon in the house of the LORD:
41 ULB ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು BSB BSB: the two pillars; the two bowl-shaped capitals atop the pillars; the two sets of network covering both bowls of the capitals atop the pillars;
42 ULB ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು, BSB BSB: the four hundred pomegranates for the two sets of network (two rows of pomegranates for each network covering both the bowl-shaped capitals atop the pillars);
43 ULB ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು, BSB BSB: the ten stands; the ten basins on the stands;
44 ULB ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, BSB BSB: the Sea; the twelve oxen underneath the Sea;
45 ULB ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು. BSB BSB: and the pots, shovels, and sprinkling bowls. All the articles that Huram made for King Solomon in the house of the LORD were made of burnished bronze.
46 ULB ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು. BSB BSB: The king had them cast in clay molds in the plain of the Jordan between Succoth and Zarethan.
47 ULB ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ. BSB BSB: Solomon left all these articles unweighed, because there were so many. The weight of the bronze could not be determined.
48 ULB ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ- ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು, BSB BSB: Solomon also made all the furnishings for the house of the LORD: the golden altar; the golden table on which was placed the Bread of the Presence;
49 ULB ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು, BSB BSB: the lampstands of pure gold in front of the inner sanctuary, five on the right side and five on the left; the gold flowers, lamps, and tongs;
50 ULB ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ BSB BSB: the pure gold basins, wick trimmers, sprinkling bowls, ladles, and censers; and the gold hinges for the doors of the inner temple (that is, the Most Holy Place) as well as for the doors of the main hall of the temple.
51 ULB ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. BSB BSB: So all the work that King Solomon had performed for the house of the LORD was completed. Then Solomon brought in the items his father David had dedicated—the silver, the gold, and the furnishings—and he placed them in the treasuries of the house of the LORD.
Select verses for actions: Enter goes to them and Escape comes back.