1 ULB ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ, BSB BSB: Now when Solomon had finished building the house of the LORD and the royal palace, and had achieved all that he had desired to do,
2 ULB ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು. BSB BSB: the LORD appeared to him a second time, as He had appeared to him at Gibeon.
3 ULB ಆತನು ಅವನಿಗೆ, <<ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು. BSB BSB: And the LORD said to him: “I have heard your prayer and petition before Me. I have consecrated this temple, which you have built, by putting My Name there forever; My eyes and My heart will be there for all time.
4 ULB ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ, BSB BSB: And as for you, if you walk before Me as your father David walked, with a heart of integrity and uprightness, doing all I have commanded you, and if you keep My statutes and ordinances,
5 ULB ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. <ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು> ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. BSB BSB: then I will establish your royal throne over Israel forever, as I promised your father David when I said, ‘You will never fail to have a man on the throne of Israel.’
6 ULB ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ BSB BSB: But if indeed you or your sons turn away from following Me and do not keep the commandments and statutes I have set before you, and if you go off to serve and worship other gods,
7 ULB ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. <ಇಸ್ರಾಯೇಲರು> ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು. BSB BSB: then I will cut off Israel from the land that I have given them, and I will banish from My presence this temple I have sanctified for My Name. Then Israel will become an object of scorn and ridicule among all peoples.
8 ULB ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, <ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?> ಎಂದು ಕೇಳುವರು. BSB BSB: And when this temple has become a heap of rubble, all who pass by it will be appalled and will hiss and say, ‘Why has the LORD done such a thing to this land and to this temple?’
9 ULB ಆಗ ಈ ದೇಶದವರು ಅವರಿಗೆ, <ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ> ಎಂಬ ಉತ್ತರ ಹೇಳುವರು>> ಎಂದನು. BSB BSB: And others will answer, ‘Because they have forsaken the LORD their God who brought their fathers out of the land of Egypt, and have embraced other gods, worshiping and serving them—because of this, the LORD has brought all this disaster upon them.’”
10 ULB ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು. BSB BSB: Now at the end of the twenty years during which Solomon built these two houses, the house of the LORD and the royal palace,
11 ULB ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು. BSB BSB: King Solomon gave twenty towns in the land of Galilee to Hiram king of Tyre, who had supplied him with cedar and cypress logs and gold for his every desire.
12 ULB ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ. BSB BSB: So Hiram went out from Tyre to inspect the towns that Solomon had given him, but he was not pleased with them.
13 ULB ಆದುದರಿಂದ ಅವನು ಸೊಲೊಮೋನನಿಗೆ, <<ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?>> ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. BSB BSB: “What are these towns you have given me, my brother?” asked Hiram, and he called them the Land of Cabul, as they are called to this day.
14 ULB ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು. BSB BSB: And Hiram had sent the king 120 talents of gold.
15 ULB ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ. BSB BSB: This is the account of the forced labor that King Solomon imposed to build the house of the LORD, his own palace, the supporting terraces, and the wall of Jerusalem, as well as Hazor, Megiddo, and Gezer. 16 ULB ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು. BSB BSB: Pharaoh king of Egypt had attacked and captured Gezer. He had set it on fire, killed the Canaanites who lived in the city, and given it as a dowry to his daughter, Solomon’s wife.
17 ULB ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್, BSB BSB: So Solomon rebuilt Gezer, Lower Beth-horon,
18 ULB ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್, BSB BSB: Baalath, and Tamar in the Wilderness of Judah,
20 ULB ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ, BSB BSB: As for all the people who remained of the Amorites, Hittites, Perizzites, Hivites, and Jebusites (the people who were not Israelites)—
21 ULB ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ. BSB BSB: their descendants who remained in the land, those whom the Israelites were unable to devote to destruction—Solomon conscripted these people to be forced laborers, as they are to this day.
22 ULB ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು. BSB BSB: But Solomon did not consign any of the Israelites to slavery, because they were his men of war, his servants, his officers, his captains, and the commanders of his chariots and cavalry.
23 ULB ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು. BSB BSB: They were also the chief officers over Solomon’s projects: 550 supervisors over the people who did the work.
24 ULB ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು. BSB BSB: As soon as Pharaoh’s daughter had come up from the City of David to the palace that Solomon had built for her, he built the supporting terraces.
25 ULB ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು. BSB BSB: Three times a year Solomon offered burnt offerings and peace offerings on the altar he had built for the LORD, burning incense with them before the LORD. So he completed the temple.
26 ULB ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು. BSB BSB: King Solomon also assembled a fleet of ships at Ezion-geber, which is near Eloth in Edom, on the shore of the Red Sea.
27 ULB ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು. BSB BSB: And Hiram sent his servants, sailors who knew the sea, to serve in the fleet with Solomon’s servants.
28 ULB ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು. BSB BSB: They sailed to Ophir and imported gold from there—420 talents—and delivered it to Solomon.
Select verses for actions: Enter goes to them and Escape comes back.