1 ULB ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ. BSB BSB: Rid yourselves, therefore, of all malice, deceit, hypocrisy, envy, and slander.
2 ULB ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ. BSB BSB: Like newborn babies, crave pure spiritual milk, so that by it you may grow up in your salvation,
3 ULB ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ. BSB BSB: now that you have tasted that the Lord is good.
4 ULB ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ. BSB BSB: As you come to Him, the living stone, rejected by men but chosen and precious in God’s sight,
5 ULB ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. BSB BSB: you also, like living stones, are being built into a spiritual house to be a holy priesthood, offering spiritual sacrifices acceptable to God through Jesus Christ.
6 ULB <<ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ>> ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. BSB BSB: For it stands in Scripture: “See, I lay in Zion a stone, a chosen and precious cornerstone; and the one who believes in Him will never be put to shame.”
7 ULB ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, <<ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು>> BSB BSB: To you who believe, then, this stone is precious. But to those who do not believe, “The stone the builders rejected has become the cornerstone,”
8 ULB ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, <<ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.>> ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ. BSB BSB: and, “A stone of stumbling and a rock of offense.” They stumble because they disobey the word—and to this they were appointed.
9 ULB ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ. BSB BSB: But you are a chosen people, a royal priesthood, a holy nation, a people for God’s own possession, to proclaim the virtues of Him who called you out of darkness into His marvelous light.
11 ULB ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. BSB BSB: Beloved, I urge you, as foreigners and exiles, to abstain from the desires of the flesh, which war against your soul.
12 ULB ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. BSB BSB: Conduct yourselves with such honor among the Gentiles that, though they slander you as evildoers, they may see your good deeds and glorify God on the day He visits us.
13 ULB ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ BSB BSB: Submit yourselves for the Lord’s sake to every human institution, whether to the king as the supreme authority,
14 ULB ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ. BSB BSB: or to governors as those sent by him to punish those who do wrong and to praise those who do right.
15 ULB ತಿಳುವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ. BSB BSB: For it is God’s will that by doing good you should silence the ignorance of foolish men.
16 ULB ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ. BSB BSB: Live in freedom, but do not use your freedom as a cover-up for evil; live as servants of God.
17 ULB ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ. BSB BSB: Treat everyone with high regard: Love the brotherhood of believers, fear God, honor the king.
18 ULB ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ. BSB BSB: Servants, submit yourselves to your masters with all respect, not only to those who are good and gentle, but even to those who are unreasonable.
19 ULB ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. BSB BSB: For if anyone endures the pain of unjust suffering because he is conscious of God, this is to be commended.
20 ULB ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ. BSB BSB: How is it to your credit if you are beaten for doing wrong and you endure it? But if you suffer for doing good and you endure it, this is commendable before God.
21 ULB ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. BSB BSB: For to this you were called, because Christ also suffered for you, leaving you an example, that you should follow in His footsteps:
23 ULB ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. BSB BSB: When they heaped abuse on Him, He did not retaliate; when He suffered, He made no threats, but entrusted Himself to Him who judges justly.
24 ULB ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. BSB BSB: He Himself bore our sins in His body on the tree, so that we might die to sin and live to righteousness. “By His stripes you are healed.”
25 ULB ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ. BSB BSB: For “you were like sheep going astray,” but now you have returned to the Shepherd and Overseer of your souls.
Select verses for actions: Enter goes to them and Escape comes back.