1 ULB ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು. BSB BSB: Now there was a man named Elkanah who was from Ramathaim-zophim in the hill country of Ephraim. He was the son of Jeroham, the son of Elihu, the son of Tohu, the son of Zuph, an Ephraimite.
2 ULB ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ. BSB BSB: He had two wives, one named Hannah and the other Peninnah. And Peninnah had children, but Hannah had none.
3 ULB ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು. BSB BSB: Year after year Elkanah would go up from his city to worship and sacrifice to the LORD of Hosts at Shiloh, where Eli’s two sons, Hophni and Phinehas, were priests to the LORD.
4 ULB ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು. BSB BSB: And whenever the day came for Elkanah to present his sacrifice, he would give portions to his wife Peninnah and to all her sons and daughters.
5 ULB ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು. BSB BSB: But to Hannah he would give a double portion, for he loved her even though the LORD had closed her womb.
6 ULB ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, <<ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ>> ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು. BSB BSB: Because the LORD had closed Hannah’s womb, her rival would provoke her viciously to taunt her.
7 ULB ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು. BSB BSB: And this went on year after year. Whenever Hannah went up to the house of the LORD, her rival taunted her until she wept and would not eat.
8 ULB ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ <<ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ>> ಅಂದನು. BSB BSB: “Hannah, why are you crying?” her husband Elkanah asked. “Why won’t you eat? Why is your heart so grieved? Am I not better to you than ten sons?”
9 ULB ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು. BSB BSB: So after they had finished eating and drinking in Shiloh, Hannah stood up. Now Eli the priest was sitting on a chair by the doorpost of the temple of the LORD.
10 ULB ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ, BSB BSB: In her bitter distress, Hannah prayed to the LORD and wept with many tears.
11 ULB <<ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ>> ಎಂದು ಪ್ರಾರ್ಥಿಸಿ ಹರಕೆಮಾಡಿದಳು. BSB BSB: And she made a vow, saying, “O LORD of Hosts, if only You will look upon the affliction of Your maidservant and remember me, not forgetting Your maidservant but giving her a son, then I will dedicate him to the LORD all the days of his life, and no razor shall ever touch his head.”
12 ULB ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು. BSB BSB: As Hannah kept on praying before the LORD, Eli watched her mouth.
13 ULB ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು BSB BSB: Hannah was praying in her heart, and though her lips were moving, her voice could not be heard. So Eli thought she was drunk
14 ULB ಏಲಿಯು, <<ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ>> ಅಂದನು. BSB BSB: and said to her, “How long will you be drunk? Put away your wine!”
15 ULB ಅದಕ್ಕೆ ಹನ್ನಳು <<ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ. BSB BSB: “No, my lord,” Hannah replied. “I am a woman troubled in spirit. I have not had any wine or strong drink, but I have poured out my soul before the LORD.
16 ULB ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು>> ಎಂದು ಹೇಳಿದಳು. BSB BSB: Do not take your servant for a wicked woman, for all this time I have been praying out of the depth of my anguish and grief.”
17 ULB ಆಗ ಏಲಿಯು ಆಕೆಗೆ, <<ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ>> ಎಂದನು. BSB BSB: “Go in peace,” Eli replied, “and may the God of Israel grant the petition you have asked of Him.”
18 ULB ಹನ್ನಳು ಏಲಿಗೆ, <<ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ>> ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ. BSB BSB: “May your maidservant find favor with you,” said Hannah. Then she went on her way, and she began to eat, and her face was no longer downcast.
19 ULB ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು. BSB BSB: The next morning they got up early to bow in worship before the LORD, and then they returned home to Ramah. And Elkanah had relations with his wife Hannah, and the LORD remembered her.
20 ULB ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. BSB BSB: So in the course of time, Hannah conceived and gave birth to a son. She named him Samuel, saying, “Because I have asked for him from the LORD.”
21 ULB ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು BSB BSB: Then Elkanah and all his house went up to make the annual sacrifice to the LORD and to fulfill his vow,
22 ULB <<ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು>> ಎಂದು ಹೇಳಿದಳು. BSB BSB: but Hannah did not go. “After the boy is weaned,” she said to her husband, “I will take him to appear before the LORD and to stay there permanently.”
23 ULB ಆಕೆಯ ಗಂಡನಾದ ಎಲ್ಕಾನನು ಆಕೆಗೆ <<ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ>> ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು. BSB BSB: “Do what you think is best,” her husband Elkanah replied, “and stay here until you have weaned him. Only may the LORD confirm His word.” So Hannah stayed and nursed her son until she had weaned him.
24 ULB ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು. BSB BSB: Once she had weaned him, Hannah took the boy with her, along with a three-year-old bull, an ephah of flour, and a skin of wine. Though the boy was still young, she brought him to the house of the LORD at Shiloh.
25 ULB ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು. BSB BSB: And when they had slaughtered the bull, they brought the boy to Eli.
26 ULB ಹನ್ನಳು ಏಲಿಗೆ <<ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ. BSB BSB: “Please, my lord,” said Hannah, “as surely as you live, my lord, I am the woman who stood here beside you praying to the LORD.
27 ULB ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ; BSB BSB: I prayed for this boy, and since the LORD has granted me what I asked of Him,
28 ULB ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು>> ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು. BSB BSB: I now dedicate the boy to the LORD. For as long as he lives, he is dedicated to the LORD.” So they worshiped the LORD there.
Select verses for actions: Enter goes to them and Escape comes back.