1 ULB ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, <<ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. BSB BSB: Then Samuel took a flask of oil, poured it on Saul’s head, kissed him, and said, “Has not the LORD anointed you ruler over His inheritance?
2 ULB ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, <ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ> ಎಂದು ಹೇಳುವರು. BSB BSB: When you leave me today, you will find two men at Rachel’s tomb in Zelzah on the border of Benjamin. They will say to you, ‘The donkeys you seek have been found, and now your father has stopped worrying about the donkeys and started worrying about you, asking, “What should I do about my son?”’
3 ULB ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು. BSB BSB: Then you will go on from there until you come to the Oak of Tabor. Three men going up to God at Bethel will meet you there, one carrying three young goats, another carrying three loaves of bread, and another carrying a skin of wine.
4 ULB ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು. BSB BSB: They will greet you and give you two loaves of bread, which you will accept from their hands.
5 ULB ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು. BSB BSB: After that you will come to Gibeah of God, where the Philistines have an outpost. As you approach the city, you will meet a group of prophets coming down from the high place, preceded by harps, tambourines, flutes, and lyres, and they will be prophesying.
6 ULB ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ. BSB BSB: Then the Spirit of the LORD will rush upon you, and you will prophesy with them; and you will be transformed into a different person.
7 ULB ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ. BSB BSB: When these signs have come, do as the occasion demands, for God is with you.
8 ULB ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು>> ಎಂದು ಹೇಳಿದನು. BSB BSB: And you shall go before me to Gilgal, and surely I will come to you to offer burnt offerings and to sacrifice peace offerings. Wait seven days until I come to you and show you what you are to do.”
9 ULB ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು. BSB BSB: As Saul turned to leave Samuel, God changed Saul’s heart, and all the signs came to pass that day.
10 ULB ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು. BSB BSB: When Saul and his servant arrived at Gibeah, a group of prophets met him. Then the Spirit of God rushed upon him, and he prophesied along with them.
11 ULB ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, <<ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?>> ಎಂದು ಮಾತನಾಡಿಕೊಳ್ಳುತ್ತಿದ್ದರು. BSB BSB: When all those who had formerly known Saul saw him prophesying with the prophets, they asked one another, “What has happened to the son of Kish? Is Saul also among the prophets?”
12 ULB ಆಗ ಆ ಸ್ಥಳದವನೊಬ್ಬನು, <<ಹಾಗಾದರೆ ಇವರ ತಂದೆ ಯಾರು?>> ಎಂದು ಕೇಳಿದನು. ಈ ಸಂಗತಿಯಿಂದ <<ಸೌಲನು ಪ್ರವಾದಿಗಳಲ್ಲಿದ್ದಾನೆ>> ಎಂಬ ವಿಷಯ ಹುಟ್ಟಿತು. BSB BSB: Then a man who lived there replied, “And who is their father?” So the saying became a proverb: “Is Saul also among the prophets?”
13 ULB ಅವನು ಪ್ರವಾದಿಸಿದ ನಂತರ ಬೆಟ್ಟದ ಮೇಲಿದ್ದ ಯಜ್ಞವೇದಿಯ ಬಳಿಗೆ ಬಂದನು. BSB BSB: And when Saul had finished prophesying, he went up to the high place.
14 ULB ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, <<ನೀವು ಎಲ್ಲಿಗೆ ಹೋಗಿದ್ದಿರಿ?>> ಎಂದು ಕೇಳಲು ಅವನು, <<ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು>> ಅಂದನು. BSB BSB: Now Saul’s uncle asked him and his servant, “Where did you go?” “To look for the donkeys,” Saul replied. “When we saw they were not to be found, we went to Samuel.”
15 ULB <<ಸಮುವೇಲನು ಏನು ಹೇಳಿದನು?>> ಎಂದು ಚಿಕ್ಕಪ್ಪನು ಕೇಳಲು BSB BSB: “Tell me,” Saul’s uncle asked, “what did Samuel say to you?”
16 ULB ಸೌಲನು, <<ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು>> ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ. BSB BSB: And Saul replied, “He assured us that the donkeys had been found.” But Saul did not tell his uncle what Samuel had said about the kingship.
17 ULB ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು. BSB BSB: After this, Samuel summoned the people to the LORD at Mizpah
18 ULB ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, <<ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ. BSB BSB: and said to the Israelites, “This is what the LORD, the God of Israel, says: ‘I brought Israel up out of Egypt, and I rescued you from the hands of the Egyptians and of all the kingdoms that oppressed you.’
19 ULB ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ>> ಎಂದು ಅಪ್ಪಣೆ ಮಾಡಿದನು. BSB BSB: But today you have rejected your God, who saves you from all your troubles and afflictions, and you have said to Him, ‘No, set a king over us.’ Now therefore present yourselves before the LORD by your tribes and clans.”
20 ULB ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು. BSB BSB: Thus Samuel had all the tribes of Israel come forward, and the tribe of Benjamin was selected.
21 ULB ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ. BSB BSB: Then he had the tribe of Benjamin come forward by its clans, and the clan of Matri was selected. Finally, Saul son of Kish was selected. But when they looked for him, they could not find him.
22 ULB ಅವರು, <<ಆ ಮನುಷ್ಯನು ಇಲ್ಲಿಗೆ ಬರುವನೋ>> ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, <<ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ>> ಎಂದು ಉತ್ತರಕೊಟ್ಟನು. BSB BSB: So again they inquired of the LORD, “Has the man come here yet?” And the LORD replied, “Behold, he has hidden himself among the baggage.”
23 ULB ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು. BSB BSB: So they ran and brought Saul, and when he stood among the people, he was a head taller than any of the others.
24 ULB ಆಗ ಸಮುವೇಲನು ಎಲ್ಲಾ ಜನರಿಗೆ, <<ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ>> ಎನ್ನಲು ಜನರೆಲ್ಲರೂ, <<ಅರಸನು ಚಿರಂಜೀವಿಯಾಗಿರಲಿ>> ಎಂದು ಘೋಷಣೆಗಳನ್ನು ಕೂಗಿದರು. BSB BSB: Samuel said to all the people, “Do you see the one the LORD has chosen? There is no one like him among all the people.” And all the people shouted, “Long live the king!”
25 ULB ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು. BSB BSB: Then Samuel explained to the people the rights of kingship. He wrote them on a scroll and laid it up before the LORD. And Samuel sent all the people away, each to his own home.
26 ULB ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು. BSB BSB: Saul also went to his home in Gibeah, and the men of valor whose hearts God had touched went with him.
27 ULB ಕೆಲವು ಮಂದಿ ಅಯೋಗ್ಯರು, <<ಇವನು ನಮ್ಮನ್ನು ರಕ್ಷಿಸುವನೋ?>> ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು. BSB BSB: But some worthless men said, “How can this man save us?” So they despised him and brought him no gifts; but Saul remained silent about it.
Select verses for actions: Enter goes to them and Escape comes back.