1 ULB ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, <<ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು>> ಎಂದು ಬೇಡಿಕೊಂಡರು. BSB BSB: Then Nahash the Ammonite came up and laid siege to Jabesh-gilead. All the men of Jabesh said to him, “Make a treaty with us, and we will serve you.”
2 ULB ಅದಕ್ಕೆ ಅವನು, <<ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ>> ಎಂದು ಉತ್ತರಕೊಟ್ಟನು. BSB BSB: But Nahash the Ammonite replied, “I will make a treaty with you on one condition, that I may put out everyone’s right eye and bring reproach upon all Israel.”
3 ULB ಆಗ ಯಾಬೇಷಿನ ಹಿರಿಯರು ಅವನಿಗೆ, <<ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ>> ಎಂದು ತಿಳಿಸಿದರು. BSB BSB: “Hold off for seven days,” replied the elders of Jabesh, “and let us send messengers throughout Israel. If there is no one to save us, we will surrender to you.”
4 ULB ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು. BSB BSB: When the messengers came to Gibeah of Saul and relayed these words in the hearing of the people, they all wept aloud.
5 ULB ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, <<ಜನರು ಗೋಳಾಡುವುದಕ್ಕೆ ಕಾರಣವೇನು?>> ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು. BSB BSB: Just then Saul was returning from the field, behind his oxen. “What troubles the people?” asked Saul. “Why are they weeping?” And they relayed to him the words of the men from Jabesh.
6 ULB ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು. BSB BSB: When Saul heard their words, the Spirit of God rushed upon him, and he burned with great anger.
7 ULB ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, <<ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು>> ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು. BSB BSB: He took a pair of oxen, cut them into pieces, and sent them by messengers throughout the land of Israel, proclaiming, “This is what will be done to the oxen of anyone who does not march behind Saul and Samuel.” Then the terror of the LORD fell upon the people, and they came out together as one man.
8 ULB ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು. BSB BSB: And when Saul numbered them at Bezek, there were 300,000 Israelites and 30,000 men of Judah.
9 ULB ಅವರು ಬಂದಿದ್ದ ದೂತರಿಗೆ, <<ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ>> ಎಂದು ಹೇಳಿ ಅವರನ್ನು ಕಳುಹಿಸಿದರು. BSB BSB: So they said to the messengers who had come, “Tell the men of Jabesh-gilead: ‘Deliverance will be yours tomorrow by the time the sun is hot.’” And when the messengers relayed this to the men of Jabesh, they rejoiced.
10 ULB ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, <<ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ>> ಎಂದು ಹೇಳಿದರು. BSB BSB: Then the men of Jabesh said to Nahash, “Tomorrow we will come out, and you can do with us whatever seems good to you.”
11 ULB ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು. BSB BSB: The next day Saul organized the troops into three divisions, and during the morning watch they invaded the camp of the Ammonites and slaughtered them, until the hottest part of the day. And the survivors were so scattered that no two of them were left together.
12 ULB ತರುವಾಯ ಜನರು ಸಮುವೇಲನಿಗೆ, <<ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ>> ಎಂದರು. BSB BSB: Then the people said to Samuel, “Who said that Saul should not reign over us? Bring those men here so we can kill them!”
13 ULB ಸೌಲನು ಅವರಿಗೆ, <<ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು>> ಎಂದು ಹೇಳಿದನು. BSB BSB: But Saul ordered, “No one shall be put to death this day, for today the LORD has worked salvation in Israel.”
14 ULB ಸಮುವೇಲನು ಜನರಿಗೆ, <<ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ>> ಅನ್ನಲು BSB BSB: Then Samuel said to the people, “Come, let us go to Gilgal and renew the kingship there.”
15 ULB ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು. BSB BSB: So all the people went to Gilgal and confirmed Saul as king in the presence of the LORD. There they sacrificed peace offerings before the LORD, and Saul and all the Israelites rejoiced greatly.
Select verses for actions: Enter goes to them and Escape comes back.