1 ULB ಯೆಹೋವನು ಸಮುವೇಲನಿಗೆ, <<ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ>> ಎಂದು ಹೇಳಿದನು. BSB BSB: Now the LORD said to Samuel, “How long are you going to mourn for Saul, since I have rejected him as king over Israel? Fill your horn with oil and go. I am sending you to Jesse of Bethlehem, for I have selected from his sons a king for Myself.”
2 ULB ಅದಕ್ಕೆ ಸಮುವೇಲನು, <<ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ>> ಎಂದನು. ಅದಕ್ಕೆ ಯೆಹೋವನು, <<ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ. BSB BSB: “How can I go?” Samuel asked. “Saul will hear of it and kill me!” The LORD answered, “Take a heifer with you and say, ‘I have come to sacrifice to the LORD.’
3 ULB ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು>> ಎಂದನು. BSB BSB: Then invite Jesse to the sacrifice, and I will show you what you are to do. You are to anoint for Me the one I indicate.”
5 ULB ಅವನು, <<ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ>> ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು. BSB BSB: “In peace,” he replied. “I have come to sacrifice to the LORD. Consecrate yourselves and come with me to the sacrifice.” Then he consecrated Jesse and his sons and invited them to the sacrifice.
6 ULB ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು. BSB BSB: When they arrived, Samuel saw Eliab and said, “Surely here before the LORD is His anointed.”
7 ULB ಆದರೆ ಯೆಹೋವನು ಸಮುವೇಲನಿಗೆ,<< ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ>> ಅಂದನು. BSB BSB: But the LORD said to Samuel, “Do not consider his appearance or height, for I have rejected him; the LORD does not see as man does. For man sees the outward appearance, but the LORD sees the heart.”
8 ULB ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, <<ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ>> ಎಂದನು. BSB BSB: Then Jesse called Abinadab and presented him to Samuel, who said, “The LORD has not chosen this one either.”
9 ULB ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, <<ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ>> ಎಂದು ಹೇಳಿದನು. BSB BSB: Next Jesse presented Shammah, but Samuel said, “The LORD has not chosen this one either.”
10 ULB ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, <<ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ>> ಎಂದು ನುಡಿದನು. BSB BSB: Thus Jesse made seven of his sons pass before Samuel, but Samuel told him, “The LORD has not chosen any of these.”
11 ULB ಅನಂತರ ಸಮುವೇಲನು ಇಷಯನನ್ನು, <<ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ>> ಎಂದು ಕೇಳಲು ಅವನು, <<ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ>> ಎಂದು ಉತ್ತರಕೊಟ್ಟನು. ಆಗ ಸಮುವೇಲನು, <<ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು>> ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು. BSB BSB: And Samuel asked him, “Are these all the sons you have?” “There is still the youngest,” Jesse replied, “but he is tending the sheep.” “Send for him,” Samuel replied. “For we will not sit down to eat until he arrives.”
12 ULB ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, <<ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ>> ಎಂದು ಆಜ್ಞಾಪಿಸಲು BSB BSB: So Jesse sent for his youngest son and brought him in. He was ruddy, with beautiful eyes and a handsome appearance. And the LORD said, “Rise and anoint him, for he is the one.”
13 ULB ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು. BSB BSB: So Samuel took the horn of oil and anointed him in the presence of his brothers, and the Spirit of the LORD rushed upon David from that day forward. Then Samuel set out and went to Ramah.
14 ULB ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ BSB BSB: Now the Spirit of the LORD departed from Saul, and a spirit of distress from the LORD began to torment him.
15 ULB ಅವನ ಸೇವಕರು ಅವನಿಗೆ, <<ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ. BSB BSB: Saul’s servants said to him, “Surely a spirit of distress from God is tormenting you.
16 ULB ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು>> ಎಂದು ಹೇಳಿದರು. BSB BSB: Let our lord command your servants here to seek out someone who can skillfully play the harp. Whenever the spirit of distress from God is upon you, he is to play it, and you will be well.”
17 ULB ಸೌಲನು ಅವರಿಗೆ, <<ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ>> ಎಂದು ಆಜ್ಞಾಪಿಸಿದನು. BSB BSB: And Saul commanded his servants, “Find me someone who plays well, and bring him to me.”
18 ULB ಸೇವಕರಲ್ಲೊಬ್ಬನು ಅವನಿಗೆ, <<ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ>> ಎಂದು ತಿಳಿಸಿದನು. BSB BSB: One of the servants answered, “I have seen a son of Jesse of Bethlehem who knows how to play the harp. He is a mighty man of valor, a warrior, eloquent and handsome, and the LORD is with him.”
19 ULB ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು>> ಎಂದು ಹೇಳಿಸಿದನು. BSB BSB: So Saul sent messengers to Jesse and said, “Send me your son David, who is with the sheep.”
20 ULB ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು. BSB BSB: And Jesse took a donkey loaded with bread, a skin of wine, and one young goat and sent them to Saul with his son David.
21 ULB ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು. BSB BSB: When David came to Saul and entered his service, Saul loved him very much, and David became his armor-bearer.
22 ULB ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ>> ಎಂದು ತಿಳಿಸಿದನು. BSB BSB: Then Saul sent word to Jesse, saying, “Let David remain in my service, for I am pleased with him.”
23 ULB ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು. BSB BSB: And whenever the spirit from God came upon Saul, David would pick up his harp and play. Then Saul would find relief and feel better, and the spirit of distress would depart from him.
Select verses for actions: Enter goes to them and Escape comes back.