1 ULB ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, <<ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?>> ಎನ್ನಲು, BSB BSB: Then David fled from Naioth in Ramah. He came to Jonathan and asked, “What have I done? What is my iniquity? How have I sinned against your father, that he wants to take my life?”
2 ULB ಯೋನಾತಾನನು ಅವನಿಗೆ, <<ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?>> ಎಂದು ಹೇಳಿದನು. BSB BSB: “Far from it!” Jonathan replied. “You will not die. Indeed, my father does nothing, great or small, without telling me. So why would he hide this matter from me? This cannot be true!”
3 ULB ಅದಕ್ಕೆ ದಾವೀದನು, <<ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ>> ಎಂದು ಖಂಡಿತವಾಗಿ ಹೇಳಿದನು. BSB BSB: But David again vowed, “Your father knows very well that I have found favor in your eyes, and he has said, ‘Jonathan must not know of this, or he will be grieved.’ As surely as the LORD lives and as you yourself live, there is but a step between me and death.”
4 ULB ಆಗ ಯೋನಾತಾನನು ದಾವೀದನಿಗೆ, <<ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ>> ಅಂದನು. BSB BSB: Then Jonathan said to David, “Whatever you desire, I will do for you.”
5 ULB ಅದಕ್ಕೆ ದಾವೀದನು, <<ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು. BSB BSB: So David told him, “Look, tomorrow is the New Moon, and I am supposed to dine with the king. Instead, let me go and hide in the field until the third evening from now.
6 ULB ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, <ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ> ಎಂದು ಹೇಳು. BSB BSB: If your father misses me at all, tell him, ‘David urgently requested my permission to hurry to Bethlehem, his hometown, because there is an annual sacrifice for his whole clan.’
7 ULB ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ. BSB BSB: If he says, ‘Good,’ then your servant is safe, but if he is enraged, you will know he has evil intentions.
8 ULB ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು>> ಎಂದು ಹೇಳಿದನು. BSB BSB: Therefore show kindness to your servant, for you have brought me into a covenant with you before the LORD. If there is iniquity in me, then kill me yourself; why should you bring me to your father?”
9 ULB ಯೋನಾತಾನನು ಅವನಿಗೆ, <<ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?>> ಅಂದನು. BSB BSB: “Never!” Jonathan replied. “If I ever found out that my father had evil intentions against you, would I not tell you?”
10 ULB ದಾವೀದನು, <<ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?>> ಎಂದು ಅವನನ್ನು ಕೇಳಲು BSB BSB: Then David asked Jonathan, “Who will tell me if your father answers you harshly?”
11 ULB ಯೋನಾತಾನನು ಅವನಿಗೆ, <<ನಾವು ಹೊಲಕ್ಕೆ ಹೋಗೋಣ ಬಾ>> ಎಂದು ಹೇಳಿದನು. BSB BSB: “Come,” he replied, “let us go out to the field.” So the two of them went out into the field,
12 ULB ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, <<ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು. BSB BSB: and Jonathan said, “By the LORD, the God of Israel, I will sound out my father by this time tomorrow or the next day. If he is favorable toward you, will I not send for you and tell you?
13 ULB ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ. BSB BSB: But if my father intends to bring evil on you, then may the LORD punish me, and ever so severely, if I do not tell you and send you on your way in safety. May the LORD be with you, just as He has been with my father.
14 ULB ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು. BSB BSB: And as long as I live, treat me with the LORD’s loving devotion, that I may not die,
15 ULB ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ. BSB BSB: and do not ever cut off your loving devotion from my household—not even when the LORD cuts off every one of David’s enemies from the face of the earth.”
16 ULB ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ>> ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು, BSB BSB: So Jonathan made a covenant with the house of David, saying, “May the LORD hold David’s enemies accountable.”
17 ULB ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು. BSB BSB: And Jonathan had David reaffirm his vow out of love for him, for Jonathan loved David as he loved himself.
18 ULB ಯೋನಾತಾನನು ದಾವೀದನಿಗೆ, <<ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು. BSB BSB: Then Jonathan said to David, “Tomorrow is the New Moon, and you will be missed, because your seat will be empty.
19 ULB ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು. BSB BSB: When you have stayed three days, hurry down to the place you hid on the day this trouble began, and remain beside the stone Ezel.
20 ULB ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೇ ಅವುಗಳನ್ನು BSB BSB: I will shoot three arrows to the side of it, as if I were aiming at a target.
21 ULB ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, <ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ> ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ. BSB BSB: Then I will send a boy and say, ‘Go, find the arrows!’ Now, if I expressly say to him, ‘Look, the arrows are on this side of you; bring them,’ then come, because as surely as the LORD lives, it is safe for you, and there is no danger.
22 ULB ಆದರೆ, <ಬಾಣಗಳು ಆಚೆ ಬಿದ್ದಿರುತ್ತವೆ> ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ. BSB BSB: But if I say to the young man, ‘Look, the arrows are beyond you,’ then you must go, for the LORD has sent you away.
23 ULB ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು>> ಅಂದನು. BSB BSB: And as for the matter you and I have discussed, the LORD is a witness between you and me forever.”
24 ULB ದಾವೀದನು ಹೊಲದಲ್ಲಿ ಅಡಗಿಕೊಂಡನು. BSB BSB: So David hid in the field, and when the New Moon had come, the king sat down to eat.
25 ULB ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ, BSB BSB: He sat in his usual place by the wall, opposite Jonathan and beside Abner, but David’s place was empty.
26 ULB ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು. BSB BSB: Saul said nothing that day because he thought, “Something has happened to David to make him ceremonially unclean—surely he is unclean.”
27 ULB ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, <<ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?>> ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು. BSB BSB: But on the day after the New Moon, the second day, David’s place was still empty, and Saul asked his son Jonathan, “Why hasn’t the son of Jesse come to the meal either yesterday or today?”
28 ULB ಅದಕ್ಕೆ ಯೋನಾತಾನನು, <<ದಾವೀದನು <ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ BSB BSB: Jonathan answered, “David urgently requested my permission to go to Bethlehem,
29 ULB ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ> ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ>> ಎಂದು ಉತ್ತರಕೊಟ್ಟನು. BSB BSB: saying, ‘Please let me go, because our clan is holding a sacrifice in the city, and my brother has told me to be there. So now, if I have found favor in your eyes, please let me go and see my brothers.’ That is why he has not come to the king’s table.”
30 ULB ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, <<ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು. BSB BSB: Then Saul’s anger burned against Jonathan, and he said to him, “You son of a perverse and rebellious woman! Do I not know that you have chosen the son of Jesse to your own shame and to the shame of the mother who bore you?
31 ULB ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು>> ಅಂದನು. BSB BSB: For as long as the son of Jesse lives on this earth, neither you nor your kingdom shall be established. Now send for him and bring him to me, for he must surely die!”
32 ULB ಅದಕ್ಕೆ ಯೋನಾತಾನನು, <<ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?>> ಎಂದು ತನ್ನ ತಂದೆಯನ್ನು ಕೇಳಿದನು. BSB BSB: “Why must he be put to death?” Jonathan replied. “What has he done?”
33 ULB ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು BSB BSB: Then Saul hurled his spear at Jonathan to kill him. So Jonathan knew that his father was determined to kill David.
34 ULB ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ. BSB BSB: Jonathan got up from the table in fierce anger and did not eat any food that second day of the month, for he was grieved by his father’s shameful treatment of David.
35 ULB ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ, BSB BSB: In the morning Jonathan went out to the field for the appointment with David, and a small boy was with him.
36 ULB ಹುಡುಗನಿಗೆ, <<ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ>> ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು. BSB BSB: He said to the boy, “Run and find the arrows I shoot.” And as the boy ran, Jonathan shot an arrow beyond him.
37 ULB ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, <<ಬಾಣವು ನಿನ್ನ ಆಚೆ ಬಿದ್ದಿತಲ್ಲಾ BSB BSB: When the boy reached the place where Jonathan’s arrow had fallen, Jonathan called to him, “Isn’t the arrow beyond you?”
38 ULB ಬೇಗ ಹೋಗು ನಿಲ್ಲಬೇಡ>> ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು. BSB BSB: Then Jonathan cried out, “Hurry! Make haste! Do not delay!” So the boy picked up the arrow and returned to his master.
39 ULB ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ. BSB BSB: But the boy did not know anything; only Jonathan and David knew the arrangement.
40 ULB ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, <<ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು>> ಎಂದು ಹೇಳಿದನು. BSB BSB: Then Jonathan gave his equipment to the boy and said, “Go, take it back to the city.”
41 ULB ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು. BSB BSB: When the young man had gone, David got up from the south side of the stone, fell facedown, and bowed three times. Then he and Jonathan kissed each other and wept together—though David wept more.
42 ULB ಅನಂತರ ಯೋನಾತಾನನು ದಾವೀದನಿಗೆ, <<ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ>> ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು. BSB BSB: And Jonathan said to David, “Go in peace, for the two of us have sworn in the name of the LORD, saying, ‘May the LORD be a witness between you and me, and between your descendants and mine forever.’” Then David got up and departed, and Jonathan went back into the city.
Select verses for actions: Enter goes to them and Escape comes back.