1 ULB ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. BSB BSB: Now the Philistines brought all their forces together at Aphek, while Israel camped by the spring in Jezreel.
2 ULB ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು. BSB BSB: As the Philistine leaders marched out with their units of hundreds and thousands, David and his men marched behind them with Achish.
3 ULB ಆಗ ಫಿಲಿಷ್ಟಿಯ ಪ್ರಭುಗಳು, <<ಈ ಇಬ್ರಿಯರು ಯಾಕೆ?>> ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, <<ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ>> ಎಂದು ಉತ್ತರಕೊಟ್ಟನು. BSB BSB: Then the commanders of the Philistines asked, “What about these Hebrews?” Achish replied, “Is this not David, the servant of King Saul of Israel? He has been with me all these days, even years, and from the day he defected until today I have found no fault in him.”
4 ULB ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, <<ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ? BSB BSB: But the commanders of the Philistines were angry with Achish and told him, “Send that man back and let him return to the place you assigned him. He must not go down with us into battle only to become our adversary during the war. What better way for him to regain the favor of his master than with the heads of our men?
5 ULB <ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು> ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?>> ಅಂದರು. BSB BSB: Is this not the David about whom they sing in their dances: ‘Saul has slain his thousands, and David his tens of thousands’?”
6 ULB ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, <<ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ. BSB BSB: So Achish summoned David and told him, “As surely as the LORD lives, you have been upright, and it seems right in my sight that you should march in and out with me in the army, because I have found no fault in you from the day you came to me until this day. But you are not good in the sight of the leaders.
7 ULB ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು>> ಎಂದು ಹೇಳಿದನು. BSB BSB: Therefore turn back now and go in peace, so that you will not do anything to displease the leaders of the Philistines.”
8 ULB ದಾವೀದನು ಆಕೀಷನಿಗೆ, <<ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?>> ಅಂದನು. BSB BSB: “But what have I done?” David replied. “What have you found against your servant, from the day I came to you until today, to keep me from going along to fight against the enemies of my lord the king?”
9 ULB ಆಗ ಆಕೀಷನು ದಾವೀದನಿಗೆ, <<ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, <ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು> ಎಂದು ಹೇಳುತ್ತಾರಲ್ಲಾ. BSB BSB: Achish replied, “I know that you are as pleasing in my sight as an angel of God. But the commanders of the Philistines have said, ‘He must not go into battle with us.’
10 ULB ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ>> ಎಂದು ಹೇಳಿದನು. BSB BSB: Now then, get up early in the morning, along with your master’s servants who came with you, and go as soon as it is light.”
11 ULB ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು. BSB BSB: So David and his men got up early in the morning to return to the land of the Philistines. And the Philistines went up to Jezreel.
Select verses for actions: Enter goes to them and Escape comes back.