1 Thessalonians 1 1 1 Thessalonians Thanks for their faith Kannada Unlocked Literal Bible Probably Paul's earliest surviving letter, encouraging a young church under pressure and teaching about Christ's return.
Introduction to 1 Thessalonians
1 ULB ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ. BSB BSB: Paul, Silvanus, and Timothy, To the church of the Thessalonians in God the Father and the Lord Jesus Christ: Grace and peace to you.
2 ULB ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ. BSB BSB: We always thank God for all of you, remembering you in our prayers
4 ULB ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು. BSB BSB: Brothers who are beloved by God, we know that He has chosen you,
5 ULB ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ. BSB BSB: because our gospel came to you not only in word, but also in power, in the Holy Spirit, and with great conviction—just as you know we lived among you for your sake.
6 ULB ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ. BSB BSB: And you became imitators of us and of the Lord when you welcomed the message with the joy of the Holy Spirit, in spite of your great suffering.
7 ULB ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ. BSB BSB: As a result, you have become an example to all the believers in Macedonia and Achaia.
8 ULB ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ. BSB BSB: For not only did the message of the Lord ring out from you to Macedonia and Achaia, but your faith in God has gone out to every place, so that we have no need to say anything more.
9 ULB ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ BSB BSB: For they themselves report what kind of welcome you gave us, and how you turned to God from idols to serve the living and true God
10 ULB ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು. BSB BSB: and to await His Son from heaven, whom He raised from the dead—Jesus our deliverer from the coming wrath.
Select verses for actions: Enter goes to them and Escape comes back.
Chapter complete
You’ve read 1 Thessalonians 1
Make Opened yours A free account keeps your place, highlights and notes on every device. Add Plus to ask Study Help about 1 Thessalonians 1, and keep Opened free for readers who can’t pay.