1 ULB ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. BSB BSB: Now the Spirit expressly states that in later times some will abandon the faith to follow deceitful spirits and the teachings of demons,
2 ULB ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು, BSB BSB: influenced by the hypocrisy of liars, whose consciences are seared with a hot iron.
3 ULB ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂದತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. BSB BSB: They will prohibit marriage and require abstinence from certain foods that God has created to be received with thanksgiving by those who believe and know the truth.
4 ULB ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. BSB BSB: For every creation of God is good, and nothing that is received with thanksgiving should be rejected,
5 ULB ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ. BSB BSB: because it is sanctified by the word of God and prayer.
6 ULB ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ. BSB BSB: By pointing out these things to the brothers, you will be a good servant of Christ Jesus, nourished by the words of faith and sound instruction that you have followed.
7 ULB ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ. BSB BSB: But reject irreverent, silly myths. Instead, train yourself for godliness.
8 ULB ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು. BSB BSB: For physical exercise is of limited value, but godliness is valuable in every way, holding promise for the present life and for the one to come.
9 ULB ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ. BSB BSB: This is a trustworthy saying, worthy of full acceptance.
10 ULB ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ. BSB BSB: To this end we labor and strive, because we have set our hope on the living God, who is the Savior of everyone, and especially of those who believe.
11 ULB ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು. BSB BSB: Command and teach these things.
12 ULB ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. BSB BSB: Let no one despise your youth, but set an example for the believers in speech, in conduct, in love, in faith, in purity.
13 ULB ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. BSB BSB: Until I come, devote yourself to the public reading of Scripture, to exhortation, and to teaching.
14 ULB ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. BSB BSB: Do not neglect the gift that is in you, which was given you through the prophecy spoken over you at the laying on of the hands of the elders.
15 ULB ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು. BSB BSB: Be diligent in these matters and absorbed in them, so that your progress will be evident to all.
16 ULB ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ. BSB BSB: Pay close attention to your life and to your teaching. Persevere in these things, for by so doing you will save both yourself and those who hear you.
Select verses for actions: Enter goes to them and Escape comes back.