1 ULB ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ, BSB BSB: Do not rebuke an older man, but appeal to him as to a father. Treat younger men as brothers,
2 ULB ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು. BSB BSB: older women as mothers, and younger women as sisters, with absolute purity.
3 ULB ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. BSB BSB: Honor the widows who are truly widows.
5 ULB ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು. BSB BSB: The widow who is truly in need and left all alone puts her hope in God and continues night and day in her petitions and prayers.
6 ULB ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ. BSB BSB: But she who lives for pleasure is dead even while she is still alive.
7 ULB ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು. BSB BSB: Give these instructions to the believers, so that they will be above reproach.
8 ULB ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ. BSB BSB: If anyone does not provide for his own, and especially his own household, he has denied the faith and is worse than an unbeliever.
9 ULB ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ, BSB BSB: A widow should be enrolled if she is at least sixty years old, faithful to her husband,
10 ULB ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ. BSB BSB: and well known for good deeds such as bringing up children, entertaining strangers, washing the feet of the saints, imparting relief to the afflicted, and devoting herself to every good work.
11 ULB ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು. BSB BSB: But refuse to enroll younger widows. For when their passions draw them away from Christ, they will want to marry,
12 ULB ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು. BSB BSB: and thus will incur judgment because they are setting aside their first faith.
13 ULB ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ. BSB BSB: At the same time they will also learn to be idle, going from house to house and being not only idle, but also gossips and busybodies, discussing things they should not mention.
14 ULB ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು. BSB BSB: So I advise the younger widows to marry, have children, and manage their households, denying the adversary occasion for slander.
15 ULB ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ. BSB BSB: For some have already turned aside to follow Satan.
16 ULB ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. BSB BSB: If any believing woman has dependent widows, she must assist them and not allow the church to be burdened, so that it can help the widows who are truly in need.
17 ULB ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. BSB BSB: Elders who lead effectively are worthy of double honor, especially those who work hard at preaching and teaching.
18 ULB <<ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,>> ಮತ್ತು<< ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ>> ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ. BSB BSB: For the Scripture says, “Do not muzzle an ox while it is treading out the grain,” and, “The worker is worthy of his wages.”
19 ULB ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ. BSB BSB: Do not entertain an accusation against an elder, except on the testimony of two or three witnesses.
20 ULB ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು. BSB BSB: But those who persist in sin should be rebuked in front of everyone, so that the others will stand in fear of sin.
21 ULB ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ. BSB BSB: I solemnly charge you before God and Christ Jesus and the elect angels to maintain these principles without bias, and to do nothing out of partiality.
22 ULB ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ. BSB BSB: Do not be too quick in the laying on of hands and thereby share in the sins of others. Keep yourself pure.
23 ULB ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ. BSB BSB: Stop drinking only water and use a little wine instead, because of your stomach and your frequent ailments.
24 ULB ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ. BSB BSB: The sins of some men are obvious, going ahead of them to judgment; but the sins of others do not surface until later.
25 ULB ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ ಮರೆಯಾಗಿರಲಾರವು. BSB BSB: In the same way, good deeds are obvious, and even the ones that are inconspicuous cannot remain hidden.
Select verses for actions: Enter goes to them and Escape comes back.