1 ULB ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು. BSB BSB: Then in the seventh year, Jehoiada strengthened himself and made a covenant with the commanders of hundreds—with Azariah son of Jeroham, Ishmael son of Jehohanan, Azariah son of Obed, Maaseiah son of Adaiah, and Elishaphat son of Zichri.
2 ULB ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು. BSB BSB: So they went throughout Judah and gathered the Levites from all the cities of Judah and the heads of the families of Israel. And when they came to Jerusalem,
3 ULB ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, <<ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ. BSB BSB: the whole assembly made a covenant with the king in the house of God. “Behold, the king’s son!” said Jehoiada. “He must reign, just as the LORD promised concerning the descendants of David.
4 ULB ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು. BSB BSB: This is what you are to do: A third of you priests and Levites who come on duty on the Sabbath shall keep watch at the doors,
5 ULB ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು. BSB BSB: a third shall be at the royal palace, and a third at the Foundation Gate, while all the others are to be in the courtyards of the house of the LORD.
6 ULB ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು. BSB BSB: No one is to enter the house of the LORD except the priests and those Levites who serve; they may enter because they are consecrated, but all the people are to obey the requirement of the LORD.
7 ULB ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು>> ಎಂದು ಹೇಳಿದನು. BSB BSB: The Levites must surround the king with weapons in hand, and anyone who enters the temple must be put to death. You must stay close to the king wherever he goes.”
8 ULB ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು. BSB BSB: So the Levites and all Judah did everything that Jehoiada the priest had ordered. Each of them took his men—those coming on duty on the Sabbath and those going off duty—for Jehoiada the priest had not released any of the divisions.
9 ULB ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು. BSB BSB: Then Jehoiada the priest gave to the commanders of hundreds the spears and the large and small shields of King David that were in the house of God.
10 ULB ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು. BSB BSB: He stationed all the troops, with their weapons in hand, surrounding the king by the altar and the temple, from the south side to the north side of the temple.
11 ULB ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, <<ಅರಸನು ಚಿರಂಜೀವಿಯಾಗಿರಲಿ>> ಎಂದು ಹರಸಿದರು. BSB BSB: Then Jehoiada and his sons brought out the king’s son, put the crown on him, presented him with the Testimony, and proclaimed him king. They anointed him and shouted, “Long live the king!”
12 ULB ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು. BSB BSB: When Athaliah heard the noise of the people running and cheering the king, she went out to them in the house of the LORD.
13 ULB ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, <<ದ್ರೋಹ, ದ್ರೋಹ>> ಎಂದು ಕೂಗಿದಳು. BSB BSB: And she looked and saw the king standing by his pillar at the entrance. The officers and trumpeters were beside the king, and all the people of the land were rejoicing and blowing trumpets, while the singers with musical instruments were leading the praises. Then Athaliah tore her clothes and screamed, “Treason, treason!”
14 ULB ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, <<ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ>> ಎಂದು ಆಜ್ಞಾಪಿಸಿದನು. BSB BSB: And Jehoiada the priest sent out the commanders of hundreds in charge of the army, saying, “Bring her out between the ranks, and put to the sword anyone who follows her.” For the priest had said, “She must not be put to death in the house of the LORD.”
15 ULB ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು. BSB BSB: So they seized Athaliah as she reached the entrance of the Horse Gate on the palace grounds, and there they put her to death.
16 ULB ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು. BSB BSB: Then Jehoiada made a covenant between himself and the king and the people that they would be the LORD’s people.
17 ULB ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು. BSB BSB: So all the people went to the temple of Baal and tore it down. They smashed the altars and idols to pieces and killed Mattan the priest of Baal in front of the altars.
18 ULB ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು. BSB BSB: Moreover, Jehoiada put the oversight of the house of the LORD into the hands of the Levitical priests, whom David had appointed over the house of the LORD, to offer burnt offerings to the LORD as written in the Law of Moses, with rejoicing and song, as ordained by David.
19 ULB ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು. BSB BSB: He stationed gatekeepers at the gates of the house of the LORD, so that no one who was in any way unclean could enter.
20 ULB ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. BSB BSB: And he took with him the commanders of hundreds, the nobles, the rulers of the people, and all the people of the land, and they brought the king down from the house of the LORD and entered the royal palace through the Upper Gate. They seated King Joash on the royal throne,
21 ULB ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು. BSB BSB: and all the people of the land rejoiced. And the city was quiet, because Athaliah had been put to the sword.
Select verses for actions: Enter goes to them and Escape comes back.