1 ULB ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು. BSB BSB: Then Josiah kept the Passover to the LORD in Jerusalem, and the Passover lamb was slaughtered on the fourteenth day of the first month.
2 ULB ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು. BSB BSB: He appointed the priests to their duties and encouraged them in the service of the house of the LORD.
3 ULB ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, <<ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ. BSB BSB: To the Levites who taught all Israel and were holy to the LORD, Josiah said: “Put the holy ark in the temple built by Solomon son of David king of Israel. It is not to be carried around on your shoulders. Now serve the LORD your God and His people Israel.
4 ULB ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು, BSB BSB: Prepare yourselves by families in your divisions, according to the instructions written by David king of Israel and Solomon his son.
5 ULB ನಿಮ್ಮ ಸಹೋದರರಾದ ಇಸ್ರಾಯೇಲರ ಒಂದೊಂದು ಗೋತ್ರಶಾಖೆಗಳಿಗಾಗಿ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ BSB BSB: Moreover, stand in the Holy Place by the divisions of the families of your kinsmen the lay people, and by the divisions of the families of the Levites.
6 ULB ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ>> ಎಂದು ಆಜ್ಞಾಪಿಸಿದನು. BSB BSB: Slaughter the Passover lambs, consecrate yourselves, and make preparations for your fellow countrymen to carry out the word of the LORD given by Moses.”
7 ULB ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು. BSB BSB: From his own flocks and herds Josiah contributed 30,000 lambs and goats plus 3,000 bulls for the Passover offerings for all the people who were present.
8 ULB ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು. BSB BSB: His officials also contributed willingly to the people and priests and Levites. Hilkiah, Zechariah, and Jehiel, the chief officials of the house of God, gave the priests 2,600 Passover offerings and 300 bulls.
9 ULB ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ, ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ, ಐನೂರು ಹೋರಿಗಳನ್ನೂ ದಾನಮಾಡಿದರು. BSB BSB: Additionally, Conaniah and his brothers Shemaiah and Nethanel, as well as Hashabiah, Jeiel, and Jozabad, officers of the Levites, contributed to the Levites 5,000 Passover offerings and 500 bulls.
10 ULB ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು; BSB BSB: So the service was prepared; the priests stood in their places and the Levites in their divisions according to the king’s command.
11 ULB ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು. BSB BSB: And they slaughtered the Passover lambs, while the priests splattered the blood handed to them and the Levites skinned the animals.
12 ULB ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು. BSB BSB: They set aside the burnt offerings to be given to the divisions of the families of the people to offer to the LORD, as it is written in the Book of Moses. And they did the same with the bulls.
13 ULB ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು. BSB BSB: They roasted the Passover animals on the fire according to the regulation, and they boiled the other holy offerings in pots, kettles, and bowls and quickly brought them to all the people.
14 ULB ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು. BSB BSB: Afterward, they made preparations for themselves and for the priests, since the priests, the descendants of Aaron, were offering up burnt offerings and fat until nightfall. So the Levites made preparations for themselves and for the priests, the descendants of Aaron.
15 ULB ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ. BSB BSB: The singers, the descendants of Asaph, were at their stations according to the command of David, Asaph, Heman, and Jeduthun the king’s seer. And the gatekeepers at each gate did not need to leave their posts, because their fellow Levites made preparations for them.
16 ULB ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು. BSB BSB: So on that day the entire service of the LORD was carried out for celebrating the Passover and offering burnt offerings on the altar of the LORD, according to the command of King Josiah.
17 ULB ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು. BSB BSB: The Israelites who were present also observed the Passover at that time, as well as the Feast of Unleavened Bread for seven days.
18 ULB ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ. BSB BSB: No such Passover had been observed in Israel since the days of Samuel the prophet. None of the kings of Israel ever observed a Passover like the one that Josiah observed with the priests, the Levites, all Judah, the Israelites who were present, and the people of Jerusalem.
19 ULB ಈ ಪಸ್ಕಹಬ್ಬವು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು. BSB BSB: In the eighteenth year of Josiah’s reign, this Passover was observed.
21 ULB ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, <<ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು>> ಎಂದು ಹೇಳಿಸಿದನು. BSB BSB: But Neco sent messengers to him, saying, “What is the issue between you and me, O king of Judah? I have not come against you today, but I am fighting another dynasty, and God has told me to hurry. So stop opposing God, who is with me, or He will destroy you!”
22 ULB ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು. BSB BSB: Josiah, however, did not turn away from him; instead, in order to engage him in battle, he disguised himself. He did not listen to Neco’s words from the mouth of God, but went to fight him on the Plain of Megiddo.
23 ULB ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, <<ನನಗೆ ದೊಡ್ಡ ಗಾಯವಾಯಿತು, ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ>> ಎಂದನು. BSB BSB: There the archers shot King Josiah, who said to his servants, “Take me away, for I am badly wounded!”
24 ULB ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು. BSB BSB: So his servants took him out of his chariot, put him in his second chariot, and brought him to Jerusalem, where he died. And Josiah was buried in the tomb of his fathers, and all Judah and Jerusalem mourned for him.
25 ULB ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. BSB BSB: Then Jeremiah lamented over Josiah, and to this day all the male and female singers recite laments over Josiah. They established them as a statute for Israel, and indeed they are written in the Book of Laments.
26 ULB ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ, BSB BSB: As for the rest of the acts of Josiah and his deeds of loving devotion according to what is written in the Law of the LORD—
27 ULB ಅವನ ಪೂರ್ವೋತ್ತರ ವೃತ್ತಾಂತವೂ ಇಸ್ರಾಯೇಲರ ಮತ್ತು ಯೆಹೂದ್ಯ ರಾಜರ ಗ್ರಂಥದಲ್ಲಿ ಬರೆದಿರುತ್ತವೆ. BSB BSB: his acts from beginning to end—they are indeed written in the Book of the Kings of Israel and Judah.
Select verses for actions: Enter goes to them and Escape comes back.