1 ULB ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು. BSB BSB: When Solomon had finished praying, fire came down from heaven and consumed the burnt offering and the sacrifices, and the glory of the LORD filled the temple.
2 ULB ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು. BSB BSB: The priests were unable to enter the house of the LORD, because the glory of the LORD had filled it.
3 ULB ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, <<ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು>> ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು. BSB BSB: When all the Israelites saw the fire coming down and the glory of the LORD above the temple, they bowed down on the pavement with their faces to the ground, and they worshiped and gave thanks to the LORD: “For He is good; His loving devotion endures forever.”
4 ULB ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು. BSB BSB: Then the king and all the people offered sacrifices before the LORD.
5 ULB ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು. BSB BSB: And King Solomon offered a sacrifice of 22,000 oxen and 120,000 sheep. So the king and all the people dedicated the house of God.
6 ULB ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, <<ಆತನ ಕೃಪೆಯು ಶಾಶ್ವತವಾದದ್ದು>> ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು. BSB BSB: The priests stood at their posts, as did the Levites with the musical instruments of the LORD, which King David had made for giving thanks to the LORD and with which David had offered praise, saying, “For His loving devotion endures forever.” Across from the Levites, the priests sounded trumpets, and all the Israelites were standing.
7 ULB ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು. BSB BSB: Then Solomon consecrated the middle of the courtyard in front of the house of the LORD, and there he offered the burnt offerings and the fat of the peace offerings, since the bronze altar he had made could not hold all these offerings.
8 ULB ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು. BSB BSB: So at that time Solomon and all Israel with him—a very great assembly of people from Lebo-hamath to the Brook of Egypt—kept the feast for seven days.
9 ULB ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು. BSB BSB: On the eighth day they held a solemn assembly, for the dedication of the altar had lasted seven days, and the feast seven days more.
10 ULB ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು. BSB BSB: On the twenty-third day of the seventh month, Solomon sent the people away to their homes, joyful and glad of heart for the good things that the LORD had done for David, for Solomon, and for His people Israel.
11 ULB ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು. BSB BSB: When Solomon had finished the house of the LORD and the royal palace, successfully carrying out all that was in his heart to do for the house of the LORD and for his own palace,
12 ULB ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, <<ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ. BSB BSB: the LORD appeared to him at night and said to him: “I have heard your prayer and have chosen this place for Myself as a house of sacrifice.
13 ULB ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ, BSB BSB: If I close the sky so there is no rain, or if I command the locust to devour the land, or if I send a plague among My people,
14 ULB ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು. BSB BSB: and if My people who are called by My name humble themselves and pray and seek My face and turn from their wicked ways, then I will hear from heaven, forgive their sin, and heal their land.
15 ULB ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು. BSB BSB: Now My eyes will be open and My ears attentive to the prayers offered in this place.
16 ULB ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ. BSB BSB: For I have now chosen and consecrated this temple so that My Name may be there forever. My eyes and My heart will be there for all time.
17 ULB ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ, BSB BSB: And as for you, if you walk before Me as your father David walked, doing all I have commanded you, and if you keep My statutes and ordinances,
18 ULB ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. BSB BSB: then I will establish your royal throne, as I covenanted with your father David when I said, ‘You will never fail to have a man to rule over Israel.’
19 ULB ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ, BSB BSB: But if you turn away and forsake the statutes and commandments I have set before you, and if you go off to serve and worship other gods,
20 ULB ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು. BSB BSB: then I will uproot Israel from the soil I have given them, and I will banish from My presence this temple I have sanctified for My Name. I will make it an object of scorn and ridicule among all the peoples.
21 ULB ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, <ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?> ಎಂದು ಕೇಳುವರು. BSB BSB: And when this temple has become a heap of rubble, all who pass by it will be appalled and say, ‘Why has the LORD done such a thing to this land and to this temple?’
22 ULB ಆಗ ಅವರಿಗೆ, <ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.>>> ಎಂದು ಉತ್ತರ ಕೊಡುವರು ಎಂದನು. BSB BSB: And others will answer, ‘Because they have forsaken the LORD, the God of their fathers, who brought them out of the land of Egypt, and have embraced other gods, worshiping and serving them—because of this, He has brought all this disaster upon them.’”
Select verses for actions: Enter goes to them and Escape comes back.