1 ULB ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು. BSB BSB: Now when the queen of Sheba heard about the fame of Solomon, she came to test him with difficult questions. She arrived in Jerusalem with a very large caravan—with camels bearing spices, gold in abundance, and precious stones. And she came to Solomon and spoke with him about all that was on her mind.
2 ULB ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು. BSB BSB: And Solomon answered all her questions; nothing was too difficult for him to explain.
3 ULB ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ, BSB BSB: When the queen of Sheba saw the wisdom of Solomon, the palace he had built,
4 ULB ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ BSB BSB: the food at his table, the seating of his servants, the service and attire of his attendants, the attire of his cupbearers, and the burnt offerings he presented at the house of the LORD, it took her breath away.
5 ULB ಅವನಿಗೆ, <<ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. BSB BSB: She said to the king, “The report I heard in my own country about your words and wisdom is true.
6 ULB ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ. BSB BSB: But I did not believe the reports until I came and saw with my own eyes. Indeed, not half of the greatness of your wisdom was told to me. You have far exceeded the report I heard.
7 ULB ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು. BSB BSB: How blessed are your men! How blessed are these servants of yours who stand continually before you and hear your wisdom!
8 ULB ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ>> ಎಂದು ಹೇಳಿದಳು. BSB BSB: Blessed be the LORD your God, who has delighted in you to set you on His throne to be king for the LORD your God. Because your God loved Israel enough to establish them forever, He has made you king over them to carry out justice and righteousness.”
9 ULB ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ. BSB BSB: Then she gave the king 120 talents of gold, a great quantity of spices, and precious stones. There had never been such spices as those the queen of Sheba gave to King Solomon.
10 ULB ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ ದೇಶದ ಬಂಗಾರವನ್ನಲ್ಲದೆ ಸುಗಂಧದ ಮರಗಳ ಅಮೂಲ್ಯರತ್ನಗಳನ್ನೂ ತಂದರು. BSB BSB: (The servants of Hiram and of Solomon who brought gold from Ophir also brought algum wood and precious stones.
11 ULB ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ. BSB BSB: The king made the algum wood into steps for the house of the LORD and for the king’s palace, and into lyres and harps for the singers. Never before had anything like them been seen in the land of Judah.)
12 ULB ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು. BSB BSB: King Solomon gave the queen of Sheba all she desired—whatever she asked—far more than she had brought the king. Then she left and returned to her own country, along with her servants.
13 ULB ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು. BSB BSB: The weight of gold that came to Solomon each year was 666 talents,
14 ULB ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು. BSB BSB: not including the revenue from the merchants and traders. And all the Arabian kings and governors of the land also brought gold and silver to Solomon.
15 ULB ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು. BSB BSB: King Solomon made two hundred large shields of hammered gold; six hundred shekels of hammered gold went into each shield.
16 ULB ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲಾ ಬಂಗಾರ ಬೇಕಾಗುತ್ತಿತ್ತು. ಅರಸನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು. BSB BSB: He also made three hundred small shields of hammered gold; three hundred shekels of gold went into each shield. And the king put them in the House of the Forest of Lebanon.
17 ULB ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. BSB BSB: Additionally, the king made a great throne of ivory and overlaid it with pure gold.
18 ULB ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು. BSB BSB: The throne had six steps, and a footstool of gold was attached to it. There were armrests on both sides of the seat, with a lion standing beside each armrest.
19 ULB ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. BSB BSB: Twelve lions stood on the six steps, one at either end of each step. Nothing like this had ever been made for any kingdom.
20 ULB ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳಾಗಿದ್ದವು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ. BSB BSB: All King Solomon’s drinking cups were gold, and all the utensils of the House of the Forest of Lebanon were pure gold. There was no silver, because it was accounted as nothing in the days of Solomon.
21 ULB ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು. BSB BSB: For the king had the ships of Tarshish that went with Hiram’s servants, and once every three years the ships of Tarshish would arrive bearing gold, silver, ivory, apes, and peacocks.
22 ULB ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು. BSB BSB: So King Solomon surpassed all the kings of the earth in riches and wisdom.
23 ULB ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು. BSB BSB: All the kings of the earth sought an audience with Solomon to hear the wisdom that God had put in his heart.
24 ULB ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು. BSB BSB: Year after year, each visitor would bring his tribute: articles of silver and gold, clothing, weapons, spices, horses, and mules.
25 ULB ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು. BSB BSB: Solomon had 4,000 stalls for horses and chariots, and 12,000 horses, which he stationed in the chariot cities and also with him in Jerusalem.
26 ULB ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು. BSB BSB: He reigned over all the kings from the Euphrates to the land of the Philistines, as far as the border of Egypt.
27 ULB ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು. BSB BSB: The king made silver as common in Jerusalem as stones, and cedar as abundant as sycamore in the foothills.
28 ULB ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು. BSB BSB: Solomon’s horses were imported from Egypt and from all the lands.
29 ULB ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ. BSB BSB: As for the rest of the acts of Solomon, from beginning to end, are they not written in the Records of Nathan the Prophet, in the Prophecy of Ahijah the Shilonite, and in the Visions of Iddo the Seer concerning Jeroboam son of Nebat?
30 ULB ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು. BSB BSB: Solomon reigned in Jerusalem over all Israel forty years.
31 ULB ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು. BSB BSB: And Solomon rested with his fathers and was buried in the city of his father David. And his son Rehoboam reigned in his place.
Select verses for actions: Enter goes to them and Escape comes back.