2 ULB ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ. BSB BSB: He was twenty-five years old when he became king, and he reigned in Jerusalem twenty-nine years. His mother’s name was Abi, the daughter of Zechariah.
3 ULB ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. BSB BSB: And he did what was right in the eyes of the LORD, just as his father David had done.
5 ULB ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ. BSB BSB: Hezekiah trusted in the LORD, the God of Israel. No king of Judah was like him, either before him or after him.
6 ULB ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು. BSB BSB: He remained faithful to the LORD and did not turn from following Him; he kept the commandments that the LORD had given Moses.
8 ULB ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು. BSB BSB: He defeated the Philistines as far as Gaza and its borders, from watchtower to fortified city.
9 ULB ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು. BSB BSB: In the fourth year of Hezekiah’s reign, which was the seventh year of the reign of Hoshea son of Elah over Israel, Shalmaneser king of Assyria marched against Samaria and besieged it.
10 ULB ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು. BSB BSB: And at the end of three years, the Assyrians captured it. So Samaria was captured in the sixth year of Hezekiah, which was the ninth year of Hoshea king of Israel.
11 ULB ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು. BSB BSB: The king of Assyria exiled the Israelites to Assyria and settled them in Halah, in Gozan by the Habor River, and in the cities of the Medes.
12 ULB ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು. BSB BSB: This happened because they did not listen to the voice of the LORD their God, but violated His covenant—all that Moses the servant of the LORD had commanded—and would neither listen nor obey.
15 ULB ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು. BSB BSB: Hezekiah gave him all the silver that was found in the house of the LORD and in the treasuries of the royal palace.
16 ULB ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು. BSB BSB: At that time Hezekiah stripped the gold with which he had plated the doors and doorposts of the temple of the LORD, and he gave it to the king of Assyria.
17 ULB ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. BSB BSB: Nevertheless, the king of Assyria sent the Tartan, the Rabsaris, and the Rabshakeh, along with a great army, from Lachish to King Hezekiah at Jerusalem. They advanced up to Jerusalem and stationed themselves by the aqueduct of the upper pool, on the road to the Launderer’s Field.
18 ULB ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು. BSB BSB: Then they called for the king. And Eliakim son of Hilkiah the palace administrator, Shebnah the scribe, and Joah son of Asaph the recorder, went out to them.
19 ULB ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, <<ನಿನ್ನ ಭರವಸಕ್ಕೆ ಯಾವ ಆಧಾರವುಂಟು? BSB BSB: The Rabshakeh said to them, “Tell Hezekiah that this is what the great king, the king of Assyria, says: What is the basis of this confidence of yours?
20 ULB ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ? BSB BSB: You claim to have a strategy and strength for war, but these are empty words. In whom are you now trusting, that you have rebelled against me?
21 ULB ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು. BSB BSB: Look now, you are trusting in Egypt, that splintered reed of a staff that will pierce the hand of anyone who leans on it. Such is Pharaoh king of Egypt to all who trust in him.
23 ULB ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. BSB BSB: Now, therefore, make a bargain with my master, the king of Assyria. I will give you two thousand horses—if you can put riders on them!
24 ULB ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ. BSB BSB: For how can you repel a single officer among the least of my master’s servants when you depend on Egypt for chariots and horsemen?
25 ULB ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? <ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ>>> ಎಂದನು. BSB BSB: So now, was it apart from the LORD that I have come up against this place to destroy it? The LORD Himself said to me, ‘Go up against this land and destroy it.’”
26 ULB ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, <<ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ>> ಎಂದು ಹೇಳಿದರು. BSB BSB: Then Eliakim son of Hilkiah, along with Shebnah and Joah, said to the Rabshakeh, “Please speak to your servants in Aramaic, since we understand it. Do not speak with us in Hebrew in the hearing of the people on the wall.”
27 ULB ಅದಕ್ಕೆ ರಬ್ಷಾಕೆಯು, <<ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು>> ಎಂದು ಉತ್ತರಕೊಟ್ಟನು. BSB BSB: But the Rabshakeh replied, “Has my master sent me to speak these words only to you and your master, and not to the men sitting on the wall, who are destined with you to eat their own dung and drink their own urine?”
28 ULB ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, <<ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ. BSB BSB: Then the Rabshakeh stood and called out loudly in Hebrew: “Hear the word of the great king, the king of Assyria!
29 ULB ಅರಸನು ನಿಮಗೆ, <ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು> BSB BSB: This is what the king says: Do not let Hezekiah deceive you; he cannot deliver you from my hand.
30 ULB ಹಿಜ್ಕೀಯನು ನಿಮಗೆ, <ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ> ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ>> BSB BSB: Do not let Hezekiah persuade you to trust in the LORD when he says, ‘The LORD will surely deliver us; this city will not be given into the hand of the king of Assyria.’
31 ULB ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, <<ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು. BSB BSB: Do not listen to Hezekiah, for this is what the king of Assyria says: Make peace with me and come out to me. Then every one of you will eat from his own vine and his own fig tree and drink water from his own cistern,
32 ULB ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ. BSB BSB: until I come and take you away to a land like your own—a land of grain and new wine, a land of bread and vineyards, a land of olive trees and honey—so that you may live and not die. But do not listen to Hezekiah, for he misleads you when he says, ‘The LORD will deliver us.’
33 ULB ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸಾಧ್ಯ? BSB BSB: Has the god of any nation ever delivered his land from the hand of the king of Assyria?
34 ULB ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ? BSB BSB: Where are the gods of Hamath and Arpad? Where are the gods of Sepharvaim, Hena, and Ivvah? Have they delivered Samaria from my hand?
35 ULB ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?>> ಎಂದು ಹೇಳಿದನು. BSB BSB: Who among all the gods of these lands has delivered his land from my hand? How then can the LORD deliver Jerusalem from my hand?”
36 ULB ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ. BSB BSB: But the people remained silent and did not answer a word, for Hezekiah had commanded, “Do not answer him.”
37 ULB ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು. BSB BSB: Then Hilkiah’s son Eliakim the palace administrator, Shebna the scribe, and Asaph’s son Joah the recorder came to Hezekiah with their clothes torn, and they relayed to him the words of the Rabshakeh.
Select verses for actions: Enter goes to them and Escape comes back.