1 ULB ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ,<< <ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ> ಎಂದು ಯೆಹೋವನು ತಿಳಿಸಿದ್ದಾನೆ>> ಎಂದು ಹೇಳಿದನು. BSB BSB: In those days Hezekiah became mortally ill. The prophet Isaiah son of Amoz came to him and said, “This is what the LORD says: ‘Put your house in order, for you are about to die; you will not recover.’”
2 ULB ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು. BSB BSB: Then Hezekiah turned his face to the wall and prayed to the LORD, saying,
3 ULB <<ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ>> ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು. BSB BSB: “Please, O LORD, remember how I have walked before You faithfully and with wholehearted devotion; I have done what is good in Your sight.” And Hezekiah wept bitterly.
4 ULB ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು. BSB BSB: Before Isaiah had left the middle courtyard, the word of the LORD came to him, saying,
5 ULB <<ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, <ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ. BSB BSB: “Go back and tell Hezekiah the leader of My people that this is what the LORD, the God of your father David, says: ‘I have heard your prayer; I have seen your tears. I will surely heal you. On the third day from now you will go up to the house of the LORD.
6 ULB ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು> ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು>> ಅಂದನು. BSB BSB: I will add fifteen years to your life. And I will deliver you and this city from the hand of the king of Assyria. I will defend this city for My sake and for the sake of My servant David.’”
7 ULB ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು. BSB BSB: Then Isaiah said, “Prepare a poultice of figs.” So they brought it and applied it to the boil, and Hezekiah recovered.
8 ULB ಹಿಜ್ಕೀಯನು ಯೆಶಾಯನಿಗೆ, <<ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?>> ಎಂದು ಕೇಳಿದನು. BSB BSB: Now Hezekiah had asked Isaiah, “What will be the sign that the LORD will heal me and that I will go up to the house of the LORD on the third day?”
9 ULB ಅದಕ್ಕೆ ಯೆಶಾಯನು, <<ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ?ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?>> ಎಂದು ಕೇಳಿದನು. BSB BSB: And Isaiah had replied, “This will be a sign to you from the LORD that He will do what He has promised: Would you like the shadow to go forward ten steps, or back ten steps?”
10 ULB ಅದಕ್ಕೆ ಹಿಜ್ಕೀಯನು, <<ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು>> ಎಂದು ಹೇಳಿದನು. BSB BSB: “It is easy for the shadow to lengthen ten steps,” answered Hezekiah, “but not for it to go back ten steps.”
11 ULB ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು. BSB BSB: So Isaiah the prophet called out to the LORD, and He brought the shadow back the ten steps it had descended on the stairway of Ahaz.
12 ULB ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು. BSB BSB: At that time Merodach-baladan son of Baladan king of Babylon sent letters and a gift to Hezekiah, for he had heard about Hezekiah’s illness.
13 ULB ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. BSB BSB: And Hezekiah received the envoys and showed them all that was in his treasure house—the silver, the gold, the spices, and the precious oil, as well as his armory—all that was found in his storehouses. There was nothing in his palace or in all his dominion that Hezekiah did not show them.
14 ULB ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, <<ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?>> ಎಂದು ಕೇಳಲು ಅವನು, <<ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು>> ಎಂದು ಉತ್ತರ ಕೊಟ್ಟನು. BSB BSB: Then the prophet Isaiah went to King Hezekiah and asked, “Where did those men come from, and what did they say to you?” “They came from a distant land,” Hezekiah replied, “from Babylon.”
15 ULB ಯೆಶಾಯನು ತಿರುಗಿ ಹಿಜ್ಕೀಯನನ್ನು, <<ಅವರು ನಿನ್ನ ಮನೆಯಲ್ಲಿ ಏನು ನೋಡಿದರು?>> ಎಂದು ಕೇಳಲು ಅವನು, <<ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ>> ಎಂದನು. BSB BSB: “What have they seen in your palace?” Isaiah asked. “They have seen everything in my palace,” answered Hezekiah. “There is nothing among my treasures that I did not show them.”
16 ULB ಆಗ ಯೆಶಾಯನು ಹಿಜ್ಕೀಯನಿಗೆ, <<ಯೆಹೋವನ ಮಾತನ್ನು ಕೇಳು, BSB BSB: Then Isaiah said to Hezekiah, “Hear the word of the LORD:
17 ULB <ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬೆಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ. BSB BSB: The time will surely come when everything in your palace and all that your fathers have stored up until this day will be carried off to Babylon. Nothing will be left, says the LORD.
18 ULB ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ>>> ಎಂದು ಹೇಳಿದನು. BSB BSB: And some of your descendants, your own flesh and blood, will be taken away to be eunuchs in the palace of the king of Babylon.”
19 ULB ಹಿಜ್ಕೀಯನು ಯೆಶಾಯನಿಗೆ, <<ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?>> ಎಂದು ಕೊಂಡನು. BSB BSB: But Hezekiah said to Isaiah, “The word of the LORD that you have spoken is good.” For he thought, “Will there not at least be peace and security in my lifetime?”
21 ULB ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು. BSB BSB: And Hezekiah rested with his fathers, and his son Manasseh reigned in his place.
Select verses for actions: Enter goes to them and Escape comes back.