1 ULB ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು. BSB BSB: Then the king summoned all the elders of Judah and Jerusalem.
2 ULB ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು. BSB BSB: And he went up to the house of the LORD with all the people of Judah and Jerusalem, as well as the priests and the prophets—all the people small and great—and in their hearing he read all the words of the Book of the Covenant that had been found in the house of the LORD.
3 ULB ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು. BSB BSB: So the king stood by the pillar and made a covenant before the LORD to follow the LORD and to keep His commandments, decrees, and statutes with all his heart and all his soul, and to carry out the words of the covenant that were written in this book. And all the people entered into the covenant.
5 ULB ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು. BSB BSB: Josiah also did away with the idolatrous priests ordained by the kings of Judah to burn incense on the high places of the cities of Judah and in the places all around Jerusalem—those who had burned incense to Baal, to the sun and moon, to the constellations, and to all the host of heaven.
6 ULB ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು. BSB BSB: He brought the Asherah pole from the house of the LORD to the Kidron Valley outside Jerusalem, and there he burned it, ground it to powder, and threw its dust on the graves of the common people.
7 ULB ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು. BSB BSB: He also tore down the quarters of the male shrine prostitutes that were in the house of the LORD, where the women had woven tapestries for Asherah.
9 ULB ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ. BSB BSB: Although the priests of the high places did not come up to the altar of the LORD in Jerusalem, they ate unleavened bread with their fellow priests.
10 ULB ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ <<ತೋಫೆತ್>> ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು. BSB BSB: He also desecrated Topheth in the Valley of Ben-hinnom so that no one could sacrifice his son or daughter in the fire to Molech.
12 ULB ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು. BSB BSB: He pulled down the altars that the kings of Judah had set up on the roof near the upper chamber of Ahaz, and the altars that Manasseh had set up in the two courtyards of the house of the LORD. The king pulverized them there and threw their dust into the Kidron Valley.
14 ULB ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು. BSB BSB: He smashed the sacred pillars to pieces, cut down the Asherah poles, and covered the sites with human bones.
15 ULB ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು. BSB BSB: He even pulled down the altar at Bethel, the high place set up by Jeroboam son of Nebat, who had caused Israel to sin. Then he burned the high place, ground it to powder, and burned the Asherah pole.
16 ULB ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು. BSB BSB: And as Josiah turned, he saw the tombs there on the hillside, and he sent someone to take the bones out of the tombs, and he burned them on the altar to defile it, according to the word of the LORD proclaimed by the man of God who had foretold these things.
17 ULB ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, <<ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ>> ಎಂದು ಉತ್ತರಕೊಟ್ಟರು. BSB BSB: Then the king asked, “What is this monument I see?” And the men of the city replied, “It is the tomb of the man of God who came from Judah and proclaimed these things that you have done to the altar of Bethel.”
18 ULB ಆಗ ಯೋಷೀಯನು, <<ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು>> ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ. BSB BSB: “Let him rest,” said Josiah. “Do not let anyone disturb his bones.” So they left his bones undisturbed, along with those of the prophet who had come from Samaria.
19 ULB ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು. BSB BSB: Just as Josiah had done at Bethel, so also in the cities of Samaria he removed all the shrines of the high places set up by the kings of Israel who had provoked the LORD to anger.
20 ULB ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು. BSB BSB: On the altars he slaughtered all the priests of the high places, and he burned human bones on them. Then he returned to Jerusalem.
21 ULB ಅನಂತರ ಅರಸನು ಎಲ್ಲಾ ಜನರಿಗೆ, <<ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು>> ಎಂದು ಆಜ್ಞಾಪಿಸಿದನು. BSB BSB: The king commanded all the people, “Keep the Passover of the LORD your God, as it is written in this Book of the Covenant.”
22 ULB ಇಂಥ ಪಸ್ಕಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ. BSB BSB: No such Passover had been observed from the days of the judges who had governed Israel through all the days of the kings of Israel and Judah.
23 ULB ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು. BSB BSB: But in the eighteenth year of Josiah’s reign, this Passover was observed to the LORD in Jerusalem.
24 ULB ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು. BSB BSB: Furthermore, Josiah removed the mediums and spiritists, the household gods and idols, and all the abominations that were seen in the land of Judah and in Jerusalem. He did this to carry out the words of the law written in the book that Hilkiah the priest had found in the house of the LORD.
25 ULB ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ. BSB BSB: Neither before nor after Josiah was there any king like him, who turned to the LORD with all his heart and with all his soul and with all his strength, according to all the Law of Moses.
26 ULB ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ. BSB BSB: Nevertheless, the LORD did not turn away from the fury of His burning anger, which was kindled against Judah because of all that Manasseh had done to provoke Him to anger.
27 ULB ಯೆಹೋವನು, <<ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು>> ಎಂದು ಹೇಳಿದನು. BSB BSB: For the LORD had said, “I will remove Judah from My sight, just as I removed Israel. I will reject this city Jerusalem, which I chose, and the temple of which I said, ‘My Name shall be there.’”
28 ULB ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ. BSB BSB: As for the rest of the acts of Josiah and all his accomplishments, are they not written in the Book of the Chronicles of the Kings of Judah?
30 ULB ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು. BSB BSB: From Megiddo his servants carried his body in a chariot, brought him to Jerusalem, and buried him in his own tomb. Then the people of the land took Jehoahaz son of Josiah, anointed him, and made him king in place of his father.
31 ULB ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ. BSB BSB: Jehoahaz was twenty-three years old when he became king, and he reigned in Jerusalem three months. His mother’s name was Hamutal daughter of Jeremiah; she was from Libnah.
32 ULB ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. BSB BSB: And he did evil in the sight of the LORD, just as his fathers had done.
33 ULB ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು. BSB BSB: And Pharaoh Neco imprisoned Jehoahaz at Riblah in the land of Hamath so that he could not reign in Jerusalem, and he imposed on Judah a levy of a hundred talents of silver and a talent of gold.
34 ULB ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು. BSB BSB: Then Pharaoh Neco made Eliakim son of Josiah king in place of his father Josiah, and he changed Eliakim’s name to Jehoiakim. But Neco took Jehoahaz and carried him off to Egypt, where he died.
35 ULB ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು. BSB BSB: So Jehoiakim paid the silver and gold to Pharaoh Neco, but to meet Pharaoh’s demand he taxed the land and exacted the silver and the gold from the people, each according to his wealth.
36 ULB ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ. BSB BSB: Jehoiakim was twenty-five years old when he became king, and he reigned in Jerusalem eleven years. His mother’s name was Zebidah daughter of Pedaiah; she was from Rumah.
37 ULB ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. BSB BSB: And he did evil in the sight of the LORD, just as his fathers had done.
Select verses for actions: Enter goes to them and Escape comes back.