1 ULB ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು. BSB BSB: During Jehoiakim’s reign, Nebuchadnezzar king of Babylon invaded. So Jehoiakim became his vassal for three years, until he turned and rebelled against Nebuchadnezzar.
2 ULB ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು. BSB BSB: And the LORD sent Chaldean, Aramean, Moabite, and Ammonite raiders against Jehoiakim in order to destroy Judah, according to the word that the LORD had spoken through His servants the prophets.
3 ULB ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು. BSB BSB: Surely this happened to Judah at the LORD’s command, to remove them from His presence because of the sins of Manasseh and all that he had done,
4 ULB ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು. BSB BSB: and also for the innocent blood he had shed. For he had filled Jerusalem with innocent blood, and the LORD was unwilling to forgive.
5 ULB ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. BSB BSB: As for the rest of the acts of Jehoiakim, along with all his accomplishments, are they not written in the Book of the Chronicles of the Kings of Judah?
6 ULB ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು. BSB BSB: And Jehoiakim rested with his fathers, and his son Jehoiachin reigned in his place.
7 ULB ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ. BSB BSB: Now the king of Egypt did not march out of his land again, because the king of Babylon had taken all his territory, from the Brook of Egypt to the Euphrates River.
8 ULB ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ. BSB BSB: Jehoiachin was eighteen years old when he became king, and he reigned in Jerusalem three months. His mother’s name was Nehushta daughter of Elnathan; she was from Jerusalem.
9 ULB ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. BSB BSB: And he did evil in the sight of the LORD, just as his father had done.
11 ULB ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು. BSB BSB: And Nebuchadnezzar king of Babylon came to the city while his servants were besieging it.
12 ULB ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು. BSB BSB: Jehoiachin king of Judah, his mother, his servants, his commanders, and his officials all surrendered to the king of Babylon. So in the eighth year of his reign, the king of Babylon took him captive.
13 ULB ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು. BSB BSB: As the LORD had declared, Nebuchadnezzar also carried off all the treasures from the house of the LORD and the royal palace, and he cut into pieces all the gold articles that Solomon king of Israel had made in the temple of the LORD.
14 ULB ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ. BSB BSB: He carried into exile all Jerusalem—all the commanders and mighty men of valor, all the craftsmen and metalsmiths—ten thousand captives in all. Only the poorest people of the land remained.
15 ULB ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು. BSB BSB: Nebuchadnezzar carried away Jehoiachin to Babylon, as well as the king’s mother, his wives, his officials, and the leading men of the land. He took them into exile from Jerusalem to Babylon.
16 ULB ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬೆಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು. BSB BSB: The king of Babylon also brought into exile to Babylon all seven thousand men of valor and a thousand craftsmen and metalsmiths—all strong and fit for battle.
17 ULB ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು. BSB BSB: Then the king of Babylon made Mattaniah, Jehoiachin’s uncle, king in his place and changed his name to Zedekiah.
18 ULB ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ. BSB BSB: Zedekiah was twenty-one years old when he became king, and he reigned in Jerusalem eleven years. His mother’s name was Hamutal daughter of Jeremiah; she was from Libnah.
19 ULB ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. BSB BSB: And Zedekiah did evil in the sight of the LORD, just as Jehoiakim had done.
20 ULB ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು. BSB BSB: For because of the anger of the LORD, all this happened in Jerusalem and Judah, until He finally banished them from His presence. And Zedekiah also rebelled against the king of Babylon.
Select verses for actions: Enter goes to them and Escape comes back.