1 ULB ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, <<ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ. BSB BSB: Now the sons of the prophets said to Elisha, “Please take note that the place where we meet with you is too small for us.
2 ULB ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ>> ಎಂದರು. ಎಲೀಷನು ಅವರಿಗೆ, <<ಹೋಗಿಬನ್ನಿರಿ>> ಎಂದು ಹೇಳಿದನು. BSB BSB: Please let us go to the Jordan, where each of us can get a log so we can build ourselves a place to live there.” “Go,” said Elisha.
3 ULB ಅವರಲ್ಲೊಬ್ಬನು, <<ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು>> ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, <<ಬರುತ್ತೇನೆ>> ಎಂದು ಹೇಳಿ ಅವರೊಡನೆ ಹೊರಟನು. BSB BSB: Then one of them said, “Please come with your servants.” “I will come,” he replied.
4 ULB ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ, BSB BSB: So Elisha went with them, and when they came to the Jordan, they began to cut down some trees.
5 ULB ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, <<ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು>> ಎಂದು ಕೂಗಿದನು. BSB BSB: As one of them was cutting down a tree, the iron axe head fell into the water. “Oh, my master,” he cried out, “it was borrowed!”
6 ULB ದೇವರ ಮನುಷ್ಯನು ಅವನಿಗೆ, <<ಅದು ಎಲ್ಲಿ ಬಿದ್ದಿತು?>> ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು. BSB BSB: “Where did it fall?” asked the man of God. And when he showed him the place, the man of God cut a stick, threw it there, and made the iron float.
7 ULB ಎಲೀಷನು <<ಅದನ್ನು ತೆಗೆದುಕೋ>> ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು. BSB BSB: “Lift it out,” he said, and the man reached out his hand and took it.
8 ULB ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, <<ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು>> ಎಂದನು. BSB BSB: Now the king of Aram was at war against Israel. After consulting with his servants, he said, “My camp will be in such and such a place.”
9 ULB ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, <<ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ>> ಎಂದು ತಿಳಿಸುತ್ತಿದ್ದನು. BSB BSB: Then the man of God sent word to the king of Israel: “Be careful not to pass by this place, for the Arameans are going down there.”
10 ULB ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು. BSB BSB: So the king of Israel sent word to the place the man of God had pointed out. Time and again Elisha warned the king, so that he was on his guard in such places.
11 ULB ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, <<ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ>> ಎಂದು ಕೇಳಿದನು. BSB BSB: For this reason the king of Aram became enraged and called his servants to demand of them, “Tell me, which one of us is on the side of the king of Israel?”
12 ULB ಆಗ ಅವರಲ್ಲೊಬ್ಬನು ಅವನಿಗೆ, <<ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ>> ಎಂದನು. BSB BSB: But one of his servants replied, “No one, my lord the king. For Elisha, the prophet in Israel, tells the king of Israel the very words you speak in your bedroom.”
13 ULB ಅರಸನು ಇದನ್ನು ಕೇಳಿ, <<ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ>> ಎಂದು ಹೇಳಿದನು. <<ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ>> ಎಂದು ಅರಸನು ತಿಳಿದುಕೊಂಡನು. BSB BSB: So the king said, “Go and see where he is, that I may send men to capture him.” On receiving the report, “Elisha is in Dothan,”
14 ULB ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು. BSB BSB: the king of Aram sent horses, chariots, and a great army. They went there by night and surrounded the city.
15 ULB ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, <<ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?>> ಎಂದನು. BSB BSB: When the servant of the man of God got up and went out early in the morning, behold, an army with horses and chariots had surrounded the city. So he asked Elisha, “Oh, my master, what are we to do?”
16 ULB ಆಗ ಎಲೀಷನು ಅವನಿಗೆ, <<ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ>> ಎಂದು ಹೇಳಿ, BSB BSB: “Do not be afraid,” Elisha answered, “for those who are with us are more than those who are with them.”
17 ULB <<ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ>> ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು. BSB BSB: Then Elisha prayed, “O LORD, please open his eyes that he may see.” And the LORD opened the eyes of the young man, and he saw that the hills were full of horses and chariots of fire all around Elisha.
18 ULB ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, <<ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು>> ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು. BSB BSB: As the Arameans came down against him, Elisha prayed to the LORD, “Please strike these people with blindness.” So He struck them with blindness, according to the word of Elisha.
19 ULB ಆಗ ಎಲೀಷನು ಅವರಿಗೆ, <<ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ>> ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು. BSB BSB: And Elisha told them, “This is not the way, and this is not the city. Follow me, and I will take you to the man you are seeking.” And he led them to Samaria.
20 ULB ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, <<ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ>> ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು. BSB BSB: When they had entered Samaria, Elisha said, “O LORD, open the eyes of these men that they may see.” Then the LORD opened their eyes, and they looked around and discovered that they were in Samaria.
21 ULB ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, <<ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?>> ಎಂದು ಕೇಳಿದನು. BSB BSB: And when the king of Israel saw them, he asked Elisha, “My father, shall I kill them? Shall I kill them?”
22 ULB ಅದಕ್ಕೆ ಅವನು, <<ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ>> ಎಂದು ಉತ್ತರಕೊಟ್ಟನು. BSB BSB: “Do not kill them,” he replied. “Would you kill those you have captured with your own sword or bow? Set food and water before them, that they may eat and drink and then return to their master.”
23 ULB ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ. BSB BSB: So the king prepared a great feast for them, and after they had finished eating and drinking, he sent them away, and they returned to their master. And the Aramean raiders did not come into the land of Israel again.
24 ULB ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು. BSB BSB: Some time later, Ben-hadad king of Aram assembled his entire army and marched up to besiege Samaria.
25 ULB ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು. BSB BSB: So there was a great famine in Samaria. Indeed, they besieged the city so long that a donkey’s head sold for eighty shekels of silver, and a quarter cab of dove’s dung sold for five shekels of silver.
26 ULB ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, <<ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು>> ಎಂದು ಮೊರೆಯಿಟ್ಟಳು. BSB BSB: As the king of Israel was passing by on the wall, a woman cried out to him, “Help me, my lord the king!”
27 ULB ಅರಸನು ಆಕೆಗೆ, <<ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ>> ಎಂದು ಕೇಳಿ, BSB BSB: He answered, “If the LORD does not help you, where can I find help for you? From the threshing floor or the winepress?”
28 ULB <<ನಿನಗಿರುವ ದುಃಖ ಯಾವುದು>> ಎಂದು ಅರಸನು ಕೇಳಿದನು. ಆಗ ಆಕೆಯು, <<ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ>> ಎಂದು ಹೇಳಿದ್ದರಿಂದ, BSB BSB: Then the king asked her, “What is the matter?” And she answered, “This woman said to me, ‘Give up your son, that we may eat him, and tomorrow we will eat my son.’
29 ULB ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, <<ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು>> ಎಂದು ಹೇಳಿದಳು. BSB BSB: So we boiled my son and ate him, and the next day I said to her, ‘Give up your son, that we may eat him.’ But she had hidden her son.”
30 ULB ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು. BSB BSB: When the king heard the words of the woman, he tore his clothes. And as he passed by on the wall, the people saw the sackcloth under his clothes next to his skin.
31 ULB ಇದಲ್ಲದೆ ಅವನು, <<ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಆಣೆಯಿಟ್ಟುಕೊಂಡನು. BSB BSB: He announced, “May God punish me, and ever so severely, if the head of Elisha son of Shaphat remains on his shoulders through this day!”
32 ULB ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, <<ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ>> ಎಂದು ಹೇಳಿದನು. BSB BSB: Now Elisha was sitting in his house, and the elders were sitting with him. The king sent a messenger ahead, but before he arrived, Elisha said to the elders, “Do you see how this murderer has sent someone to cut off my head? Look, when the messenger comes, shut the door to keep him out. Is not the sound of his master’s footsteps behind him?”
33 ULB ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, <<ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು>> ಎಂದನು. BSB BSB: While Elisha was still speaking with them, the messenger came down to him. And the king said, “This calamity is from the LORD. Why should I wait for the LORD any longer?”
Select verses for actions: Enter goes to them and Escape comes back.