1 ULB ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, <<ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.>> BSB BSB: Now Elisha the prophet summoned one of the sons of the prophets and said to him, “Tuck your cloak under your belt, take this flask of oil, and go to Ramoth-gilead.
3 ULB ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, <<ಯೆಹೋವನು ಹೀಗೆ ಅನ್ನುತ್ತಾನೆ, <ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ> ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು>> ಎಂದು ಆಜ್ಞಾಪಿಸಿದನು. BSB BSB: Then take the flask of oil, pour it on his head, and declare, ‘This is what the LORD says: I anoint you king over Israel.’ Then open the door and run. Do not delay!”
4 ULB ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು. BSB BSB: So the young prophet went to Ramoth-gilead,
5 ULB ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, <<ನಾಯಕನೇ ನಿನಗೊಂದು ಮಾತು ಹೇಳುವುದಿದೆ>> ಎಂದನು. ಯೇಹುವು ಅವನಿಗೆ, <<ನಮ್ಮಲ್ಲಿ ಯಾರಿಗೆ?>> ಎಂದು ಕೇಳಲು ಅವನು, <<ಸೇನಾಧಿಪತಿಯಾದ ನಿನಗೆ>> ಎಂದು ಉತ್ತರಕೊಟ್ಟನು. BSB BSB: and when he arrived, the army commanders were sitting there. “I have a message for you, commander,” he said. “For which of us?” asked Jehu. “For you, commander,” he replied.
6 ULB ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, <<ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, <ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ. BSB BSB: So Jehu got up and went into the house, where the young prophet poured the oil on his head and declared, “This is what the LORD, the God of Israel, says: ‘I anoint you king over the LORD’s people Israel.
7 ULB ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು. BSB BSB: And you are to strike down the house of your master Ahab, so that I may avenge the blood of My servants the prophets and the blood of all the servants of the LORD shed by the hand of Jezebel.
8 ULB ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು. BSB BSB: The whole house of Ahab will perish, and I will cut off from Ahab every male, both slave and free, in Israel.
9 ULB ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು. BSB BSB: I will make the house of Ahab like the houses of Jeroboam son of Nebat and Baasha son of Ahijah.
10 ULB ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು>>> ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು. BSB BSB: And on the plot of ground at Jezreel the dogs will devour Jezebel, and there will be no one to bury her.’” Then the young prophet opened the door and ran.
11 ULB ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, <<ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?>> ಎಂದು ಕೇಳಿದರು. ಅದಕ್ಕೆ ಯೇಹುವು, <<ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ>> ಎಂದು ಉತ್ತರಕೊಟ್ಟನು. BSB BSB: When Jehu went out to the servants of his master, they asked, “Is everything all right? Why did this madman come to you?” “You know his kind and their babble,” he replied.
12 ULB ಆದರೆ ಅವರು, <<ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು>> ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, <<ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.>> BSB BSB: “That is a lie!” they said. “Tell us now!” So Jehu answered, “He talked to me about this and that, saying, ‘This is what the LORD says: I anoint you king over Israel.’”
13 ULB ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು. BSB BSB: Quickly, each man took his garment and put it under Jehu on the bare steps. Then they blew the ram’s horn and proclaimed, “Jehu is king!”
14 ULB ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು. BSB BSB: Thus Jehu son of Jehoshaphat, the son of Nimshi, conspired against Joram. (Now Joram and all Israel had been defending Ramoth-gilead against Hazael king of Aram,
15 ULB ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, <<ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ>> ಎಂದು ಹೇಳಿದನು. BSB BSB: but King Joram had returned to Jezreel to recover from the wounds he had suffered at the hands of the Arameans in the battle against Hazael their king.) So Jehu said, “If you commanders wish to make me king, then do not let anyone escape from the city to go and tell it in Jezreel.”
16 ULB ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು. BSB BSB: Then Jehu got into his chariot and went to Jezreel, because Joram was laid up there. And Ahaziah king of Judah had gone down to see him.
17 ULB ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, <<ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ>> ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, <<ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು>> ಎಂಬುದಾಗಿ ಆಜ್ಞಾಪಿಸಿದನು. BSB BSB: Now the watchman standing on the tower in Jezreel saw Jehu’s troops approaching, and he called out, “I see a company of troops!” “Choose a rider,” Joram commanded. “Send him out to meet them and ask, ‘Have you come in peace?’”
18 ULB ರಾಹುತನು ಯೇಹುವನ್ನು ಎದುರುಗೊಂಡು, <<ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ>> ಎನ್ನಲು ಅವನು, <<ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ>> ಎಂದು ಹೇಳಿದನು. ಕಾವಲುಗಾರನು ಅರಸನಿಗೆ, <<ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ>> ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. BSB BSB: So a horseman rode off to meet Jehu and said, “This is what the king asks: ‘Have you come in peace?’” “What do you know about peace?” Jehu replied. “Fall in behind me.” And the watchman reported, “The messenger reached them, but he is not coming back.”
19 ULB ಅವನು ಹೋಗಿ ಯೇಹುವನ್ನು ಎದುರುಗೊಂಡು, <<ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ>> ಎನ್ನಲು ಅವನು, <<ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ>> ಎಂದನು. BSB BSB: So the king sent out a second horseman, who went to them and said, “This is what the king asks: ‘Have you come in peace?’” “What do you know about peace?” Jehu replied. “Fall in behind me.”
21 ULB ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. BSB BSB: “Harness!” Joram shouted, and they harnessed his chariot. Then Joram king of Israel and Ahaziah king of Judah set out, each in his own chariot, and met Jehu on the property of Naboth the Jezreelite.
22 ULB ಯೋರಾಮನು ಅವನನ್ನು ಕಂಡ ಕೂಡಲೆ, <<ಯೇಹುವೇ, ಶುಭವೋ?>> ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, <<ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?>> ಎಂದು ಉತ್ತರಕೊಟ್ಟನು. BSB BSB: When Joram saw Jehu, he asked, “Have you come in peace, Jehu?” “How can there be peace,” he replied, “as long as the idolatry and witchcraft of your mother Jezebel abound?”
23 ULB ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, <<ಅಹಜ್ಯನೇ, ಇದು ಒಳಸಂಚು>> ಎಂದು ಹೇಳಿ ಓಡಿಹೋದನು. BSB BSB: Joram turned around and fled, calling out to Ahaziah, “Treachery, Ahaziah!”
25 ULB ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, <<ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು: BSB BSB: And Jehu said to Bidkar his officer, “Pick him up and throw him into the field of Naboth the Jezreelite. For remember that when you and I were riding together behind his father Ahab, the LORD lifted up this burden against him:
26 ULB ಯೆಹೋವನು ಅಹಾಬನಿಗೆ, <ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು> ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು>> ಎಂದು ಹೇಳಿದನು. BSB BSB: ‘As surely as I saw the blood of Naboth and the blood of his sons yesterday, declares the LORD, so will I repay you on this plot of ground, declares the LORD.’ Now then, according to the word of the LORD, pick him up and throw him on the plot of ground.”
27 ULB ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, <<ಅವನನ್ನೂ ರಥದಲ್ಲಿಯೇ ಹೊಡೆಯಿರಿ>> ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು. BSB BSB: When King Ahaziah of Judah saw this, he fled up the road toward Beth-haggan. And Jehu pursued him, shouting, “Shoot him too!” So they shot Ahaziah in his chariot on the Ascent of Gur, near Ibleam, and he fled to Megiddo and died there.
28 ULB ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. BSB BSB: Then his servants carried him by chariot to Jerusalem and buried him with his fathers in his tomb in the City of David.
29 ULB ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು. BSB BSB: (In the eleventh year of Joram son of Ahab, Ahaziah had become king over Judah.)
30 ULB ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು. BSB BSB: Now when Jehu arrived in Jezreel, Jezebel heard of it. So she painted her eyes, adorned her head, and looked down from a window.
31 ULB ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, <<ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?>> ಎಂದು ಕೇಳಿದಳು. BSB BSB: And as Jehu entered the gate, she asked, “Have you come in peace, O Zimri, murderer of your master?”
32 ULB ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, <<ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?>> ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು. BSB BSB: He looked up at the window and called out, “Who is on my side? Who?” And two or three eunuchs looked down at him.
33 ULB ಅವನು ಅವರಿಗೆ, <<ಆಕೆಯನ್ನು ಕೆಳಗೆ ದೊಬ್ಬಿರಿ>> ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು. BSB BSB: “Throw her down!” yelled Jehu. So they threw her down, and her blood splattered on the wall and on the horses as they trampled her underfoot.
34 ULB ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, <<ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ>> ಎಂದು ಆಜ್ಞಾಪಿಸಿದನು. BSB BSB: Then Jehu went in and ate and drank. “Take care of this cursed woman,” he said, “and bury her, for she was the daughter of a king.”
35 ULB ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ. BSB BSB: But when they went out to bury her, they found nothing but her skull, her feet, and the palms of her hands.
36 ULB ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, <<ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು. BSB BSB: So they went back and told Jehu, who replied, “This is the word of the LORD, which He spoke through His servant Elijah the Tishbite: ‘On the plot of ground at Jezreel the dogs will devour the flesh of Jezebel.
37 ULB ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು>> ಎಂದನು. BSB BSB: And Jezebel’s body will lie like dung in the field on the plot of ground at Jezreel, so that no one can say: This is Jezebel.’”
Select verses for actions: Enter goes to them and Escape comes back.