1 ULB ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ, BSB BSB: Simon Peter, a servant and apostle of Jesus Christ, To those who through the righteousness of our God and Savior Jesus Christ have received a faith as precious as ours:
2 ULB ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ. BSB BSB: Grace and peace be multiplied to you through the knowledge of God and of Jesus our Lord.
3 ULB ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು. BSB BSB: His divine power has given us everything we need for life and godliness through the knowledge of Him who called us by His own glory and excellence.
5 ULB ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, BSB BSB: For this very reason, make every effort to add to your faith virtue; and to virtue, knowledge;
6 ULB ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ, BSB BSB: and to knowledge, self-control; and to self-control, perseverance; and to perseverance, godliness;
7 ULB ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ. BSB BSB: and to godliness, brotherly kindness; and to brotherly kindness, love.
8 ULB ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ. BSB BSB: For if you possess these qualities and continue to grow in them, they will keep you from being ineffective and unproductive in your knowledge of our Lord Jesus Christ.
9 ULB ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. BSB BSB: But whoever lacks these traits is nearsighted to the point of blindness, having forgotten that he has been cleansed from his past sins.
10 ULB ಆದ್ದರಿಂದ ಪ್ರಿಯರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. BSB BSB: Therefore, brothers, strive to make your calling and election sure. For if you practice these things you will never stumble,
11 ULB ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. BSB BSB: and you will receive a lavish reception into the eternal kingdom of our Lord and Savior Jesus Christ.
12 ULB ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು. BSB BSB: Therefore I will always remind you of these things, even though you know them and are established in the truth you now have.
13 ULB ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ. BSB BSB: I think it is right to refresh your memory as long as I live in the tent of my body,
14 ULB ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು. BSB BSB: because I know that this tent will soon be laid aside, as our Lord Jesus Christ has made clear to me.
15 ULB ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು. BSB BSB: And I will make every effort to ensure that after my departure, you will be able to recall these things at all times.
17 ULB ಏಕೆಂದರೆ, <<ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ>> ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ. BSB BSB: For He received honor and glory from God the Father when the voice came to Him from the Majestic Glory, saying, “This is My beloved Son, in whom I am well pleased.”
18 ULB ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು. BSB BSB: And we ourselves heard this voice from heaven when we were with Him on the holy mountain.
19 ULB ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು. BSB BSB: We also have the word of the prophets as confirmed beyond doubt. And you will do well to pay attention to it, as to a lamp shining in a dark place, until the day dawns and the morning star rises in your hearts.
20 ULB ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. BSB BSB: Above all, you must understand that no prophecy of Scripture comes from one’s own interpretation.
21 ULB ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು. BSB BSB: For no such prophecy was ever brought forth by the will of man, but men spoke from God as they were carried along by the Holy Spirit.
Select verses for actions: Enter goes to them and Escape comes back.