1 ULB ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು. BSB BSB: After the death of Saul, David returned from the slaughter of the Amalekites and stayed in Ziklag two days.
2 ULB ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು. BSB BSB: On the third day a man with torn clothes and dust on his head arrived from Saul’s camp. When he came to David, he fell to the ground to pay him homage.
3 ULB ದಾವೀದನು ಅವನನ್ನು, <<ನೀನು ಎಲ್ಲಿಂದ ಬಂದಿ>> ಎಂದು ಕೇಳಲು ಅವನು, <<ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು>> ಎಂದು ಉತ್ತರಕೊಟ್ಟನು. BSB BSB: “Where have you come from?” David asked. “I have escaped from the Israelite camp,” he replied.
4 ULB ಆಗ ದಾವೀದನು, <<ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು>> ಅನ್ನಲು ಆ ಮನುಷ್ಯನು, <<ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು>> ಎಂದು ತಿಳಿಸಿದನು. BSB BSB: “What was the outcome?” David asked. “Please tell me.” “The troops fled from the battle,” he replied. “Many of them fell and died. And Saul and his son Jonathan are also dead.”
5 ULB ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ <<ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು>> ಎಂದು ಪ್ರಶ್ನಿಸಲು ಅವನು, BSB BSB: Then David asked the young man who had brought him the report, “How do you know that Saul and his son Jonathan are dead?”
6 ULB <<ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು. BSB BSB: “I happened to be on Mount Gilboa,” he replied, “and there was Saul, leaning on his spear, with the chariots and the cavalry closing in on him.
7 ULB ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು. BSB BSB: When he turned around and saw me, he called out to me, and I answered, ‘Here I am!’
8 ULB ನಾನು, <ಇಗೋ ಬಂದೆನು> ಎಂದು ಹೇಳಿ ಹೋದಾಗ ಅವನು <ನೀನಾರು?> ಎಂದು ಕೇಳಿದ್ದಕ್ಕೆ, <ನಾನು ಅಮಾಲೇಕ್ಯನು> ಎಂದು ಉತ್ತರಕೊಟ್ಟೆನು. BSB BSB: ‘Who are you?’ he asked. So I told him, ‘I am an Amalekite.’
9 ULB ಆಗ ಅವನು ನನಗೆ, <ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ> ಎಂದು ಹೇಳಿದನು. BSB BSB: Then he begged me, ‘Stand over me and kill me, for agony has seized me, but my life still lingers.’
10 ULB ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ>> ಅಂದನು. BSB BSB: So I stood over him and killed him, because I knew that after he had fallen he could not survive. And I took the crown that was on his head and the band that was on his arm, and I have brought them here to my lord.”
11 ULB ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ BSB BSB: Then David took hold of his own clothes and tore them, and all the men who were with him did the same.
12 ULB ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು. BSB BSB: They mourned and wept and fasted until evening for Saul and his son Jonathan, and for the people of the LORD and the house of Israel, because they had fallen by the sword.
13 ULB ದಾವೀದನು ವರ್ತಮಾನ ತಂದ ಯುವಕನನ್ನು, <<ನೀನು ಎಲ್ಲಿಯವನು?>> ಎಂದು ಕೇಳಿದನು. ಅವನು, <<ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು>> ಎಂದು ಉತ್ತರಕೊಟ್ಟನು. BSB BSB: And David inquired of the young man who had brought him the report, “Where are you from?” “I am the son of a foreigner,” he answered. “I am an Amalekite.”
14 ULB ದಾವೀದನು ಅವನಿಗೆ, <<ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?>> ಎಂದು ಹೇಳಿ BSB BSB: So David asked him, “Why were you not afraid to lift your hand to destroy the LORD’s anointed?”
15 ULB ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, <<ಹೋಗಿ ಇವನನ್ನು ಕೊಂದುಹಾಕು>> ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು. BSB BSB: Then David summoned one of the young men and said, “Go, execute him!” So the young man struck him down, and he died.
16 ULB ದಾವೀದನು, <<ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು>> ಅಂದನು. BSB BSB: For David had said to the Amalekite, “Your blood be on your own head because your own mouth has testified against you, saying, ‘I killed the LORD’s anointed.’”
17 ULB ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ, BSB BSB: Then David took up this lament for Saul and his son Jonathan,
18 ULB ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ. BSB BSB: and he ordered that the sons of Judah be taught the Song of the Bow. It is written in the Book of Jashar:
19 ULB <<ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ. BSB BSB: “Your glory, O Israel, lies slain on your heights. How the mighty have fallen!
20 ULB ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು. BSB BSB: Tell it not in Gath; proclaim it not in the streets of Ashkelon, lest the daughters of the Philistines rejoice, and the daughters of the uncircumcised exult.
21 ULB ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ. BSB BSB: O mountains of Gilboa, may you have no dew or rain, no fields yielding offerings of grain. For there the shield of the mighty was defiled, the shield of Saul, no longer anointed with oil.
22 ULB ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ. BSB BSB: From the blood of the slain, from the fat of the mighty, the bow of Jonathan did not retreat, and the sword of Saul did not return empty.
23 ULB ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು. BSB BSB: Saul and Jonathan, beloved and delightful in life, were not divided in death. They were swifter than eagles; they were stronger than lions.
24 ULB ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ? BSB BSB: O daughters of Israel, weep for Saul, who clothed you in scarlet and luxury, who decked your garments with ornaments of gold.
25 ULB ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ BSB BSB: How the mighty have fallen in the thick of battle! Jonathan lies slain on your heights.
26 ULB ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು. BSB BSB: I grieve for you, Jonathan, my brother. You were delightful to me; your love to me was extraordinary, surpassing the love of women.
27 ULB ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.>> BSB BSB: How the mighty have fallen, and the weapons of war have perished!”
Select verses for actions: Enter goes to them and Escape comes back.