1 ULB ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು. BSB BSB: Some time later, the king of the Ammonites died and was succeeded by his son Hanun.
2 ULB ದಾವೀದನು, <<ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು>> ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು. BSB BSB: And David said, “I will show kindness to Hanun son of Nahash, just as his father showed kindness to me.” So David sent some of his servants to console Hanun concerning his father. But when they arrived in the land of the Ammonites,
3 ULB ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, <<ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ>> ಎಂದು ಹೇಳಿದರು. BSB BSB: the princes of the Ammonites said to Hanun their lord, “Just because David has sent you comforters, do you really believe he is showing respect for your father? Has not David instead sent his servants to explore the city, spy it out, and overthrow it?”
4 ULB ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು. BSB BSB: So Hanun took David’s servants, shaved off half of each man’s beard, cut off their garments at the hips, and sent them away.
5 ULB ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ <<ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ>> ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ. BSB BSB: When this was reported to David, he sent messengers to meet the men, since they had been thoroughly humiliated. The king told them, “Stay in Jericho until your beards have grown back, and then return.”
6 ULB ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು BSB BSB: When the Ammonites realized that they had become a stench to David, they hired twenty thousand Aramean foot soldiers from Beth-rehob and Zoba, as well as a thousand men from the king of Maacah and twelve thousand men from Tob.
7 ULB ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು. BSB BSB: On hearing this, David sent Joab and the entire army of mighty men.
8 ULB ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು. BSB BSB: The Ammonites marched out and arrayed themselves for battle at the entrance of the city gate, while the Arameans of Zobah and Rehob and the men of Tob and Maacah were by themselves in the open country.
9 ULB ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು. BSB BSB: When Joab saw the battle lines before him and behind him, he selected some of the best men of Israel and arrayed them against the Arameans.
10 ULB ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು. BSB BSB: And he placed the rest of the troops under the command of his brother Abishai, who arrayed them against the Ammonites.
11 ULB ಯೋವಾಬನು ಅವನಿಗೆ, <<ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು. BSB BSB: “If the Arameans are too strong for me,” said Joab, “then you will come to my rescue. And if the Ammonites are too strong for you, then I will come to your rescue.
12 ULB ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ>> ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು. BSB BSB: Be strong and let us fight bravely for our people and for the cities of our God. May the LORD do what is good in His sight.”
13 ULB ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು. BSB BSB: So Joab and his troops advanced to fight the Arameans, who fled before him.
14 ULB ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು. BSB BSB: When the Ammonites saw that the Arameans had fled, they too fled before Abishai, and they entered the city. So Joab returned from fighting against the Ammonites and came to Jerusalem.
15 ULB ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು. BSB BSB: When the Arameans saw that they had been defeated by Israel, they regrouped.
16 ULB ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು. BSB BSB: Hadadezer sent messengers to bring more Arameans from beyond the Euphrates, and they came to Helam with Shobach the commander of Hadadezer’s army leading them.
17 ULB ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ, BSB BSB: When this was reported to David, he gathered all Israel, crossed the Jordan, and went to Helam. Then the Arameans arrayed themselves against David and fought against him.
18 ULB ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು. BSB BSB: But the Arameans fled before Israel, and David killed seven hundred charioteers and forty thousand foot soldiers. He also struck down Shobach the commander of their army, who died there.
19 ULB ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ. BSB BSB: When all the kings who were subject to Hadadezer saw that they had been defeated by Israel, they made peace with Israel and became subject to them. So the Arameans were afraid to help the Ammonites anymore.
Select verses for actions: Enter goes to them and Escape comes back.