2 ULB ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು. BSB BSB: One evening David got up from his bed and strolled around on the roof of the palace. And from the roof he saw a woman bathing—a very beautiful woman.
3 ULB ಕೂಡಲೆ ದಾವೀದನು ಒಬ್ಬನನ್ನು ಕರೆದು, <<ಆ ಸ್ತ್ರೀ ಯಾರು?>> ಎಂದು ವಿಚಾರಿಸಲು ಅವನು, <<ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?>> ಎಂದು ಉತ್ತರ ಕೊಟ್ಟನು. BSB BSB: So David sent and inquired about the woman, and he was told, “This is Bathsheba, the daughter of Eliam and the wife of Uriah the Hittite.”
4 ULB ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು. BSB BSB: Then David sent messengers to get her, and when she came to him, he slept with her. (Now she had just purified herself from her uncleanness.) Then she returned home.
5 ULB ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು. BSB BSB: And the woman conceived and sent word to David, saying, “I am pregnant.”
6 ULB ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, <<ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು>> ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು. BSB BSB: At this, David sent orders to Joab: “Send me Uriah the Hittite.” So Joab sent him to David.
7 ULB ಊರೀಯನು ಬಂದಾಗ ದಾವೀದನು, <<ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?>> ಎಂದು ವಿಚಾರಿಸಿದ, ನಂತರ BSB BSB: When Uriah came to him, David asked how Joab and the troops were doing and how the war was going.
8 ULB ಅವನಿಗೆ, <<ಮನೆಗೆ ಹೋಗಿ ಕೈಕಾಲು ತೊಳೆದುಕೋ>> ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು. BSB BSB: Then he said to Uriah, “Go down to your house and wash your feet.” So Uriah left the palace, and a gift from the king followed him.
9 ULB ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು. BSB BSB: But Uriah slept at the door of the palace with all his master’s servants; he did not go down to his house.
10 ULB ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, <<ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?>> ಅಂದನು. BSB BSB: And David was told, “Uriah did not go home.” “Haven’t you just arrived from a journey?” David asked Uriah. “Why didn’t you go home?”
11 ULB ಅದಕ್ಕೆ ಊರೀಯನು, <<ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ>> ಎಂದು ಉತ್ತರಕೊಟ್ಟನು. BSB BSB: Uriah answered, “The ark and Israel and Judah are dwelling in tents, and my master Joab and his soldiers are camped in the open field. How can I go to my house to eat and drink and sleep with my wife? As surely as you live, and as your soul lives, I will not do such a thing!”
12 ULB ಆಗ ದಾವೀದನು ಅವನಿಗೆ, <<ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ>> ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು. BSB BSB: “Stay here one more day,” David said to Uriah, “and tomorrow I will send you back.” So Uriah stayed in Jerusalem that day and the next.
13 ULB ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ. BSB BSB: Then David invited Uriah to eat and drink with him, and he got Uriah drunk. And in the evening Uriah went out to lie down on his cot with his master’s servants, but he did not go home.
14 ULB ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು. BSB BSB: The next morning David wrote a letter to Joab and sent it with Uriah.
15 ULB ಅದರಲ್ಲಿ, <<ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ>> ಎಂಬುದಾಗಿ ಬರೆದಿದ್ದನು. BSB BSB: In the letter he wrote: “Put Uriah at the front of the fiercest battle; then withdraw from him, so that he may be struck down and killed.”
16 ULB ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು. BSB BSB: So as Joab besieged the city, he assigned Uriah to a place where he knew the strongest enemy soldiers were.
17 ULB ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು. BSB BSB: And when the men of the city came out and fought against Joab, some of David’s servants fell, and Uriah the Hittite also died.
18 ULB ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, <<ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು. BSB BSB: Joab sent to David a full account of the battle
19 ULB ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು, BSB BSB: and instructed the messenger, “When you have finished giving the king a full account of the battle,
20 ULB <ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? BSB BSB: if the king’s anger flares, he may ask you, ‘Why did you get so close to the city to fight? Did you not realize they would shoot from atop the wall?
21 ULB ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?> ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು>> ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು. BSB BSB: Who struck Abimelech son of Jerubbesheth? Was it not a woman who dropped an upper millstone on him from the wall, so that he died in Thebez? Why did you get so close to the wall?’ If he asks you this, then you are to say, ‘Your servant Uriah the Hittite is dead as well.’”
22 ULB ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ, BSB BSB: So the messenger set out and reported to David all that Joab had sent him to say.
23 ULB <<ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು. BSB BSB: The messenger said to David, “The men overpowered us and came out against us in the field, but we drove them back to the entrance of the gate.
24 ULB ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು>> ಎಂದನು. BSB BSB: Then the archers shot at your servants from the wall, and some of the king’s servants were killed. And your servant Uriah the Hittite is dead as well.”
25 ULB ಅದಕ್ಕೆ ದಾವೀದನು ದೂತನಿಗೆ, <<ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು>> ಎಂದನು. BSB BSB: Then David told the messenger, “Say this to Joab: ‘Do not let this matter upset you, for the sword devours one as well as another. Strengthen your attack against the city and demolish it.’ Encourage him with these words.”
26 ULB ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು. BSB BSB: When Uriah’s wife heard that her husband was dead, she mourned for him.
27 ULB ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು. BSB BSB: And when the time of mourning was over, David had her brought to his house, and she became his wife and bore him a son. But the thing that David had done was evil in the sight of the LORD.
Select verses for actions: Enter goes to them and Escape comes back.