1 ULB ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು. BSB BSB: After some time, David’s son Amnon fell in love with Tamar, the beautiful sister of David’s son Absalom.
2 ULB ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು. BSB BSB: Amnon was sick with frustration over his sister Tamar, for she was a virgin, and it seemed implausible for him to do anything to her.
3 ULB ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು. BSB BSB: Now Amnon had a friend named Jonadab, the son of David’s brother Shimeah. Jonadab was a very shrewd man,
4 ULB ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, <<ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ>> ಎಂದು ಕೇಳಲು ಅವನು, <<ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ>> ಎಂದು ಉತ್ತರ ಕೊಟ್ಟನು. BSB BSB: and he asked Amnon, “Why are you, the son of the king, so depressed morning after morning? Won’t you tell me?” Amnon replied, “I am in love with Tamar, my brother Absalom’s sister.”
5 ULB ಆಗ ಯೋನಾದಾಬನು ಅವನಿಗೆ, <<ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, <ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ> ಎಂದು ಹೇಳು>> ಎಂದನು. BSB BSB: Jonadab told him, “Lie down on your bed and pretend you are ill. When your father comes to see you, say to him, ‘Please let my sister Tamar come and give me something to eat. Let her prepare it in my sight so I may watch her and eat it from her hand.’”
6 ULB ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, <<ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು>> ಎಂದು ಹೇಳಿದನು. BSB BSB: So Amnon lay down and feigned illness. When the king came to see him, Amnon said, “Please let my sister Tamar come and make a couple of cakes in my sight, so that I may eat from her hand.”
7 ULB ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, <<ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು>> ಎಂದು ಹೇಳಿದನು. BSB BSB: Then David sent word to Tamar at the palace: “Please go to the house of Amnon your brother and prepare a meal for him.”
8 ULB ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು. BSB BSB: So Tamar went to the house of her brother Amnon, who was lying down. She took some dough, kneaded it, made cakes in his sight, and baked them.
9 ULB ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು. BSB BSB: Then she brought the pan and set it down before him, but he refused to eat. “Send everyone away!” said Amnon. And everyone went out.
10 ULB ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, <<ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ>> ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು. BSB BSB: Then Amnon said to Tamar, “Bring the food into the bedroom, so that I may eat it from your hand.” Tamar took the cakes she had made and went to her brother Amnon’s bedroom.
11 ULB ಕೂಡಲೆ ಅವನು ಆಕೆಯನ್ನು ಹಿಡಿದು <<ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ>> ಎಂದನು. BSB BSB: And when she had brought them to him to eat, he took hold of her and said, “Come lie with me, my sister!”
12 ULB ಆಕೆಯು; <<ಅಣ್ಣನೇ, ಬೇಡ, ನನ್ನನ್ನು ಅಪಮಾನಪಡಿಸಬೇಡ, ಇಸ್ರಾಯೇಲರಲ್ಲಿ ಇಂಥ ನೀಚಕಾರ್ಯವು ನಡೆಯಬಾರದು. ಇಂಥ ಅವಮಾನಕರವಾದ ಕೆಲಸವನ್ನು ಮಾಡಬೇಡ. BSB BSB: “No, my brother!” she cried. “Do not violate me, for such a thing should never be done in Israel. Do not do this disgraceful thing!
13 ULB ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು>> ಎಂದಳು. BSB BSB: Where could I ever take my shame? And you would be like one of the fools in Israel! Please speak to the king, for he will not withhold me from you.”
14 ULB ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು. BSB BSB: But Amnon refused to listen to her, and being stronger, he violated her and lay with her.
15 ULB ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು. BSB BSB: Then Amnon hated Tamar with such intensity that his hatred was greater than the love he previously had. “Get up!” he said to her. “Be gone!”
16 ULB ಅಮ್ನೋನನು ಆಕೆಗೆ, <<ಎದ್ದು ಹೋಗು>> ಎಂದು ಹೇಳಿದಾಗ ಆಕೆಯು, <<ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ>> ಅಂದಳು. BSB BSB: “No,” she replied, “sending me away is worse than this great wrong you have already done to me!” But he refused to listen to her.
17 ULB ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, <<ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು>> ಎಂದು ಆಜ್ಞಾಪಿಸಿದನು. BSB BSB: Instead, he called to his attendant and said, “Throw this woman out and bolt the door behind her!”
18 ULB ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು. BSB BSB: So Amnon’s attendant threw her out and bolted the door behind her. Now Tamar was wearing a robe of many colors, because this is what the king’s virgin daughters wore.
19 ULB ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು. BSB BSB: And Tamar put ashes on her head and tore her robe. And putting her hand on her head, she went away crying aloud.
20 ULB ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, <<ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ>> ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು. BSB BSB: Her brother Absalom said to her, “Has your brother Amnon been with you? Be quiet for now, my sister. He is your brother. Do not take this thing to heart.” So Tamar lived as a desolate woman in the house of her brother Absalom.
21 ULB ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು. BSB BSB: When King David heard all this, he was furious.
22 ULB ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು. BSB BSB: And Absalom never said a word to Amnon, either good or bad, because he hated Amnon for violating his sister Tamar.
23 ULB ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು. BSB BSB: Two years later, when Absalom’s sheepshearers were at Baal-hazor near Ephraim, he invited all the sons of the king.
24 ULB ಅವನು ಅರಸನ ಬಳಿಗೆ ಹೋಗಿ ಅವನನ್ನು, <<ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ>> ಎಂದು ಬೇಡಿಕೊಂಡನು. BSB BSB: And he went to the king and said, “Your servant has just hired shearers. Will the king and his servants please come with me?”
25 ULB ಅರಸನು ಅವನಿಗೆ, <<ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು>> ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ. BSB BSB: “No, my son,” the king replied, “we should not all go, or we would be a burden to you.” Although Absalom urged him, he was not willing to go, but gave him his blessing.
26 ULB ಆಗ ಅಬ್ಷಾಲೋಮನು, <<ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು>> ಅಂದನು. ಅದಕ್ಕೆ ಅರಸನು, <<ಅವನೇಕೆ ನಿನ್ನ ಸಂಗಡ ಬರಬೇಕು?>> ಎಂದು ಕೇಳಿದನು. BSB BSB: “If not,” said Absalom, “please let my brother Amnon go with us.” “Why should he go with you?” the king asked.
27 ULB ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು. BSB BSB: But Absalom urged him, so the king sent Amnon and the rest of his sons.
28 ULB ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, <<ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ>> ಎಂದು ಹೇಳಿದನು. BSB BSB: Now Absalom had ordered his young men, “Watch Amnon until his heart is merry with wine, and when I order you to strike Amnon down, you are to kill him. Do not be afraid. Have I not commanded you? Be courageous and valiant!”
29 ULB ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು. BSB BSB: So Absalom’s young men did to Amnon just as Absalom had ordered. Then all the other sons of the king got up, and each one fled on his mule.
30 ULB ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, <<ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ>> ಎಂಬ ಸುದ್ದಿ ಮುಟ್ಟಿತು. BSB BSB: While they were on the way, a report reached David: “Absalom has struck down all the sons of the king; not one of them is left!”
31 ULB ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು. BSB BSB: Then the king stood up, tore his clothes, and lay down on the ground. And all his servants stood by with their clothes torn.
32 ULB ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, <<ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು. BSB BSB: But Jonadab, the son of David’s brother Shimeah, spoke up: “My lord must not think they have killed all the sons of the king, for only Amnon is dead. In fact, Absalom has planned this since the day Amnon violated his sister Tamar.
33 ULB ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ>> ಎಂದು ಹೇಳಿ ಸಂತೈಸಿದನು. BSB BSB: So now, my lord the king, do not take to heart the report that all the sons of the king are dead. Only Amnon is dead.”
34 ULB ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು. BSB BSB: Meanwhile, Absalom had fled. When the young man standing watch looked up, he saw many people coming down the road west of him, along the side of the hill. And the watchman went and reported to the king, “I see men coming from the direction of Horonaim, along the side of the hill.”
35 ULB ಯೋನಾದಾಬನು ಅರಸನಿಗೆ, <<ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?>> ಎಂದು ಹೇಳಿ ಮುಗಿಸುವಷ್ಟರಲ್ಲಿ, BSB BSB: So Jonadab said to the king, “Look, the sons of the king have arrived! It is just as your servant said.”
36 ULB ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು. BSB BSB: And as he finished speaking, the sons of the king came in, wailing loudly. Then the king and all his servants also wept very bitterly.
37 ULB ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು. BSB BSB: Now Absalom fled and went to Talmai son of Ammihud, the king of Geshur. But David mourned for his son every day.
38 ULB ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು. BSB BSB: After Absalom had fled and gone to Geshur, he stayed there three years.
39 ULB ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು. BSB BSB: And King David longed to go to Absalom, for he had been consoled over Amnon’s death.
Select verses for actions: Enter goes to them and Escape comes back.