1 ULB ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು. BSB BSB: Some time later, Absalom provided for himself a chariot with horses and fifty men to run ahead of him.
2 ULB ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, <<ನೀವು ಯಾವ ಊರಿನರವರು?>> ಎಂದು ಕೇಳುವನು. ಅವರು, <<ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು>> ಎಂದು ಉತ್ತರ ಕೊಡುವರು. BSB BSB: He would get up early and stand beside the road leading to the city gate. Whenever anyone had a grievance to bring before the king for a decision, Absalom would call out and ask, “What city are you from?” And if he replied, “Your servant is from one of the tribes of Israel,”
3 ULB ಆಗ ಅಬ್ಷಾಲೋಮನು, <<ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ. BSB BSB: Absalom would say, “Look, your claims are good and right, but the king has no deputy to hear you.”
4 ULB ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು>> ಎಂದು ಹೇಳುವನು. BSB BSB: And he would add, “If only someone would appoint me judge in the land, then everyone with a grievance or dispute could come to me, and I would give him justice.”
5 ULB ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು. BSB BSB: Also, when anyone approached to bow down to him, Absalom would reach out his hand, take hold of him, and kiss him.
6 ULB ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು. BSB BSB: Absalom did this to all the Israelites who came to the king for justice. In this way he stole the hearts of the men of Israel.
7 ULB ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, <<ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ. BSB BSB: After four years had passed, Absalom said to the king, “Please let me go to Hebron to fulfill a vow I have made to the LORD.
8 ULB ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ>> ಎಂದು ವಿಜ್ಞಾಪಿಸಿದನು. BSB BSB: For your servant made a vow while dwelling in Geshur of Aram, saying: ‘If indeed the LORD brings me back to Jerusalem, I will worship the LORD in Hebron.’”
9 ULB ಆಗ ಅರಸನು, <<ಹೋಗಿಬಾ, ನಿನಗೆ ಶುಭವಾಗಲಿ>> ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು. BSB BSB: “Go in peace,” said the king. So Absalom got up and went to Hebron.
10 ULB ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, <<ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ <ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ>>> ಎಂದು ಹೇಳಿಸಿದ್ದನು. BSB BSB: Then Absalom sent spies throughout the tribes of Israel with this message: “When you hear the sound of the horn, you are to say, ‘Absalom reigns in Hebron!’”
11 ULB ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ. BSB BSB: Two hundred men from Jerusalem accompanied Absalom. They had been invited as guests and they went along innocently, for they knew nothing about the matter.
12 ULB ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು. BSB BSB: While Absalom was offering the sacrifices, he sent for Ahithophel the Gilonite, David’s counselor, to come from his hometown of Giloh. So the conspiracy gained strength, and Absalom’s following kept increasing.
13 ULB ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು. BSB BSB: Then a messenger came to David and reported, “The hearts of the men of Israel are with Absalom.”
14 ULB ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, <<ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು>> ಎಂದು ಹೇಳಿದನು. BSB BSB: And David said to all the servants with him in Jerusalem, “Arise and let us flee, or we will not escape from Absalom! We must leave quickly, or he will soon overtake us, heap disaster on us, and put the city to the sword.”
15 ULB ಸೇವಕರು ಅರಸನಿಗೆ, <<ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ>> ಎಂದು ಉತ್ತರ ಕೊಟ್ಟರು. BSB BSB: The king’s servants replied, “Whatever our lord the king decides, we are your servants.”
16 ULB ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು. BSB BSB: Then the king set out, and his entire household followed him. But he left behind ten concubines to take care of the palace.
17 ULB ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು. BSB BSB: So the king set out with all the people following him. He stopped at the last house,
18 ULB ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು. BSB BSB: and all his servants marched past him—all the Cherethites and Pelethites, and six hundred Gittites who had followed him from Gath.
19 ULB ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, <<ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು. BSB BSB: Then the king said to Ittai the Gittite, “Why should you also go with us? Go back and stay with the new king, since you are both a foreigner and an exile from your homeland.
20 ULB ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ>> ಎಂದು ಹೇಳಿದನು. BSB BSB: In fact, you arrived only yesterday; should I make you wander around with us today while I do not know where I am going? Go back and take your brothers with you. May the LORD show you loving devotion and faithfulness.”
21 ULB ಅದಕ್ಕೆ ಇತ್ತೈ, <<ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು>> ಎಂದು ಉತ್ತರಕೊಟ್ಟನು. BSB BSB: But Ittai answered the king, “As surely as the LORD lives, and as my lord the king lives, wherever my lord the king may be, whether it means life or death, there will your servant be!”
22 ULB ಆಗ ದಾವೀದನು ಅವನಿಗೆ, <<ಒಳ್ಳೆಯದು, ಮುಂದೆ ನಡೆ>> ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು. BSB BSB: “March on then,” said David to Ittai. So Ittai the Gittite marched past with all his men and all the little ones who were with him.
23 ULB ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು. BSB BSB: Everyone in the countryside was weeping loudly as all the people passed by. And as the king crossed the Kidron Valley, all the people also passed toward the way of the wilderness.
24 ULB ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು. BSB BSB: Zadok was also there, and all the Levites with him were carrying the ark of the covenant of God. And they set down the ark of God, and Abiathar offered sacrifices until all the people had passed out of the city.
25 ULB ಅರಸನು ಚಾದೋಕನಿಗೆ, <<ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು. BSB BSB: Then the king said to Zadok, “Return the ark of God to the city. If I find favor in the eyes of the LORD, He will bring me back and let me see both it and His dwelling place again.
26 ULB ಒಂದು ವೇಳೆ ಆತನು <ನಿನ್ನಲ್ಲಿ ನನಗೆ ಇಷ್ಟವಿಲ್ಲ> ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ>> ಎಂದನು. BSB BSB: But if He should say, ‘I do not delight in you,’ then here I am; let Him do to me whatever seems good to Him.”
27 ULB ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, <<ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು. BSB BSB: The king also said to Zadok the priest, “Are you not a seer? Return to the city in peace—you with your son Ahimaaz, and Abiathar with his son Jonathan.
28 ULB ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು>> ಎಂದು ಹೇಳಿದನು. BSB BSB: See, I will wait at the fords of the wilderness until word comes from you to inform me.”
29 ULB ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು. BSB BSB: So Zadok and Abiathar returned the ark of God to Jerusalem and stayed there.
30 ULB ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು. BSB BSB: But David continued up the Mount of Olives, weeping as he went up. His head was covered, and he was walking barefoot. And all the people with him covered their heads and went up, weeping as they went.
31 ULB ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, <<ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು>> ಎಂದು ಪ್ರಾರ್ಥಿಸಿದನು. BSB BSB: Now someone told David: “Ahithophel is among the conspirators with Absalom.” So David pleaded, “O LORD, please turn the counsel of Ahithophel into foolishness!”
32 ULB ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು. BSB BSB: When David came to the summit, where he used to worship God, Hushai the Archite was there to meet him with his robe torn and dust on his head.
33 ULB ಅರಸನು ಅವನಿಗೆ, <<ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ. BSB BSB: David said to him, “If you go on with me, you will be a burden to me.
34 ULB ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, <ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ> ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು. BSB BSB: But you can thwart the counsel of Ahithophel for me if you return to the city and say to Absalom: ‘I will be your servant, my king; in the past I was your father’s servant, but now I will be your servant.’
35 ULB ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ. BSB BSB: Will not Zadok and Abiathar the priests be there with you? Report to them everything you hear from the king’s palace.
36 ULB ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು>> ಎಂದು ಹೇಳಿ ಅವನನ್ನು ಕಳುಹಿಸಿದನು. BSB BSB: Indeed, their two sons, Ahimaaz son of Zadok and Jonathan son of Abiathar, are there with them. Send them to me with everything you hear.”
37 ULB ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು. BSB BSB: So David’s friend Hushai arrived in Jerusalem just as Absalom was entering the city.
Select verses for actions: Enter goes to them and Escape comes back.