1 ULB ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು. BSB BSB: Then it was reported to Joab, “The king is weeping and mourning over Absalom.”
2 ULB ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು. BSB BSB: And that day’s victory was turned into mourning for all the people, because on that day they were told, “The king is grieving over his son.”
3 ULB ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು. BSB BSB: So they returned to the city quietly that day, as people steal away in humiliation after fleeing a battle.
4 ULB ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, <<ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!>> ಎಂದು ಬಹಳವಾಗಿ ಗೋಳಾಡಿದನು. BSB BSB: But the king covered his face and cried out at the top of his voice, “O my son Absalom! O Absalom, my son, my son!”
5 ULB ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, <<ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ. BSB BSB: Then Joab went into the house and said to the king, “Today you have disgraced all your servants who have saved your life and the lives of your sons and daughters, of your wives, and of your concubines.
6 ULB ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ. BSB BSB: You love those who hate you and hate those who love you! For you have made it clear today that the commanders and soldiers mean nothing to you. I know today that if Absalom were alive and all of us were dead, it would have pleased you!
7 ULB ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು>> ಎಂದು ಹೇಳಿದನು. BSB BSB: Now therefore get up! Go out and speak comfort to your servants, for I swear by the LORD that if you do not go out, not a man will remain with you tonight. This will be worse for you than all the adversity that has befallen you from your youth until now!”
8 ULB ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು. BSB BSB: So the king got up and sat in the gate, and all the people were told: “Behold, the king is sitting in the gate.” So they all came before the king. Meanwhile, the Israelites had fled, each man to his home.
9 ULB ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ <<ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು. BSB BSB: And all the people throughout the tribes of Israel were arguing, “The king rescued us from the hand of our enemies and delivered us from the hand of the Philistines, but now he has fled the land because of Absalom.
10 ULB ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?>> ಎಂದು ಮಾತನಾಡಿಕೊಂಡರು. BSB BSB: But Absalom, the man we anointed over us, has died in battle. So why do you say nothing about restoring the king?”
11 ULB ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, <<ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, <ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ? BSB BSB: Then King David sent this message to Zadok and Abiathar, the priests: “Say to the elders of Judah, ‘Why should you be the last to restore the king to his palace, since the talk of all Israel has reached the king at his quarters?
12 ULB ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ> ಎಂದು ಹೇಳಿರಿ. BSB BSB: You are my brothers, my own flesh and blood. So why should you be the last to restore the king?’
13 ULB ಅಮಾಸನಿಗೆ, <ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ> ಎಂಬುದಾಗಿಯೂ ತಿಳಿಸಿರಿ>> ಎಂದು ಹೇಳಿ ಕಳುಹಿಸಿದನು. BSB BSB: And say to Amasa, ‘Aren’t you my flesh and blood? May God punish me, and ever so severely, if from now on you are not the commander of my army in place of Joab!’”
14 ULB ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, <<ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ>> ಎಂದು ಹೇಳಿಕಳುಹಿಸಿದರು. BSB BSB: So he swayed the hearts of all the men of Judah as though they were one man, and they sent word to the king: “Return, you and all your servants.”
15 ULB ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು. BSB BSB: So the king returned, and when he arrived at the Jordan, the men of Judah came to Gilgal to meet him and escort him across the Jordan.
16 ULB ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು. BSB BSB: Then Shimei son of Gera, a Benjamite from Bahurim, hurried down with the men of Judah to meet King David,
17 ULB ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು BSB BSB: along with a thousand men of Benjamin, as well as Ziba the steward of the house of Saul and his fifteen sons and twenty servants. They rushed down to the Jordan before the king
18 ULB ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ, BSB BSB: and crossed at the ford to carry over the king’s household and to do what was good in his sight. When Shimei son of Gera crossed the Jordan, he fell down before the king
19 ULB <<ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ. BSB BSB: and said, “My lord, do not hold me guilty, and do not remember your servant’s wrongdoing on the day my lord the king left Jerusalem. May the king not take it to heart.
20 ULB ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ>> ಎಂದು ಹೇಳಿದನು. BSB BSB: For your servant knows that I have sinned, so here I am today as the first of all the house of Joseph to come down to meet my lord the king.”
21 ULB ಚೆರೂಯಳ ಮಗನಾದ ಅಬೀಷೈಯು, <<ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ>> ಎಂದನು. BSB BSB: But Abishai son of Zeruiah said, “Shouldn’t Shimei be put to death for this, because he cursed the LORD’s anointed?”
22 ULB ಅದಕ್ಕೆ ದಾವೀದನು, <<ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು>> ಎಂದು ನುಡಿದನು. BSB BSB: And David replied, “Sons of Zeruiah, what have I to do with you, that you should be my adversaries today? Should any man be put to death in Israel today? Am I not indeed aware that today I am king over Israel?”
23 ULB ಅನಂತರ ಅರಸನು ಶಿಮ್ಮಿಗೆ, <<ನಿನಗೆ ಮರಣದಂಡನೆ ಆಗುವುದಿಲ್ಲ>> ಎಂದು ಪ್ರಮಾಣಮಾಡಿ ಹೇಳಿದನು. BSB BSB: So the king said to Shimei, “You shall not die.” And the king swore an oath to him.
24 ULB ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುವವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ. BSB BSB: Then Mephibosheth, Saul’s grandson, went down to meet the king. He had not cared for his feet or trimmed his mustache or washed his clothes from the day the king had left until the day he returned safely.
25 ULB ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, <<ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?>> ಎಂದು ಕೇಳಿದನು. BSB BSB: And he came from Jerusalem to meet the king, who asked him, “Mephibosheth, why did you not go with me?”
26 ULB ಅವನು, <<ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ <ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು> ಎಂದು ಆಜ್ಞಾಪಿಸಿದೆನು. BSB BSB: “My lord the king,” he replied, “because I am lame, I said, ‘I will have my donkey saddled so that I may ride on it and go with the king.’ But my servant Ziba deceived me,
27 ULB ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ. BSB BSB: and he has slandered your servant to my lord the king. Yet my lord the king is like the angel of God, so do what is good in your eyes.
28 ULB ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?>> ಎಂದು ಉತ್ತರ ಕೊಟ್ಟನು. BSB BSB: For all the house of my grandfather deserves death from my lord the king, yet you have set your servant among those who eat at your table. What further right, then, do I have to keep appealing to the king?”
29 ULB ಆಗ ಅರಸನು ಅವನಿಗೆ, <<ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು>> ಎಂದು ಹೇಳಿದನು. BSB BSB: The king replied, “Why say any more? I hereby declare that you and Ziba are to divide the land.”
30 ULB ಅದಕ್ಕೆ ಮೆಫೀಬೋಶೆತನು, <<ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು>> ಎಂದನು. BSB BSB: And Mephibosheth said to the king, “Instead, since my lord the king has safely come to his own house, let Ziba take it all!”
31 ULB ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು. BSB BSB: Now Barzillai the Gileadite had come down from Rogelim to cross the Jordan with the king and send him on his way from there.
32 ULB ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು. BSB BSB: Barzillai was quite old, eighty years of age, and since he was a very wealthy man, he had provided for the king while he stayed in Mahanaim.
33 ULB ಅರಸನು ಬರ್ಜಿಲ್ಲೈಗೆ, <<ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ>> ಎಂದನು. BSB BSB: The king said to Barzillai, “Cross over with me, and I will provide for you at my side in Jerusalem.”
34 ULB ಅದಕ್ಕೆ ಬರ್ಜಿಲ್ಲೈಯು, <<ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ BSB BSB: But Barzillai replied, “How many years of my life remain, that I should go up to Jerusalem with the king?
35 ULB ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು? BSB BSB: I am now eighty years old. Can I discern what is good and what is not? Can your servant taste what he eats or drinks? Can I still hear the voice of singing men and women? Why should your servant be an added burden to my lord the king?
36 ULB ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು? BSB BSB: Your servant will go with the king only a short distance past the Jordan; why should the king repay me with such a reward?
37 ULB ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ>> ಎಂದನು. BSB BSB: Please let your servant return, that I may die in my own city near the tomb of my father and mother. But here is your servant Chimham. Let him cross over with my lord the king, and do for him what is good in your sight.”
38 ULB ಅದಕ್ಕೆ ಅರಸನು, <<ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ>> ಎಂದು ಹೇಳಿದನು. BSB BSB: The king replied, “Chimham will cross over with me, and I will do for him what is good in your sight, and I will do for you whatever you desire of me.”
39 ULB ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು. BSB BSB: So all the people crossed the Jordan, and then the king crossed over. The king kissed Barzillai and blessed him, and Barzillai returned home.
40 ULB ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು. BSB BSB: Then the king crossed over to Gilgal, and Chimham crossed over with him. All the troops of Judah and half the troops of Israel escorted the king.
41 ULB ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, <<ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?>> ಎಂದು ಕೇಳಿದರು. BSB BSB: Soon all the men of Israel came to the king and asked, “Why did our brothers, the men of Judah, take you away secretly and bring the king and his household across the Jordan, together with all of David’s men?”
42 ULB ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, <<ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?>> ಎಂದು ಉತ್ತರ ಕೊಟ್ಟರು. BSB BSB: And all the men of Judah replied to the men of Israel, “We did this because the king is our relative. Why does this anger you? Have we ever eaten at the king’s expense or received anything for ourselves?”
43 ULB ಆಗ ಇಸ್ರಾಯೇಲರು ಯೆಹೂದ್ಯರಿಗೆ, <<ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?>> ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು. BSB BSB: “We have ten shares in the king,” answered the men of Israel, “so we have more claim to David than you. Why then do you despise us? Were we not the first to speak of restoring our king?” But the men of Judah spoke more fiercely than the men of Israel.
Select verses for actions: Enter goes to them and Escape comes back.