1 ULB ಅನಂತರ ದಾವೀದನು ಯೆಹೋವನನ್ನು, <<ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?>> ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, <<ಯಾವ ಊರಿಗೆ ಹೋಗಲಿ?>> ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು. BSB BSB: Some time later, David inquired of the LORD, “Should I go up to one of the towns of Judah?” “Go up,” the LORD answered. Then David asked, “Where should I go?” “To Hebron,” replied the LORD.
2 ULB ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು. BSB BSB: So David went there with his two wives, Ahinoam of Jezreel and Abigail the widow of Nabal of Carmel.
3 ULB ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು. BSB BSB: David also took the men who were with him, each with his household, and they settled in the towns near Hebron.
4 ULB ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು. BSB BSB: Then the men of Judah came to Hebron, and there they anointed David king over the house of Judah. And they told David, “It was the men of Jabesh-gilead who buried Saul.”
5 ULB ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, <<ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ. BSB BSB: So David sent messengers to the men of Jabesh-gilead to tell them, “The LORD bless you, because you showed this kindness to Saul your lord when you buried him.
6 ULB ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು. BSB BSB: Now may the LORD show you loving devotion and faithfulness, and I will also show you the same favor because you have done this.
7 ULB ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ>> ಎಂದು ಹೇಳಿ ಕಳುಹಿಸಿದನು. BSB BSB: Now then, be strong and courageous, for though Saul your lord is dead, the house of Judah has anointed me as their king.”
8 ULB ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ BSB BSB: Meanwhile, Abner son of Ner, the commander of Saul’s army, took Saul’s son Ish-bosheth, moved him to Mahanaim,
9 ULB ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು. BSB BSB: and made him king over Gilead, Asher, Jezreel, Ephraim, and Benjamin—over all Israel.
10 ULB ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು. BSB BSB: Saul’s son Ish-bosheth was forty years old when he began to reign over Israel, and he reigned for two years. The house of Judah, however, followed David.
11 ULB ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು. BSB BSB: And the length of time that David was king in Hebron over the house of Judah was seven years and six months.
12 ULB ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು. BSB BSB: One day Abner son of Ner and the servants of Ish-bosheth son of Saul marched out from Mahanaim to Gibeon.
13 ULB ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು. BSB BSB: So Joab son of Zeruiah and the servants of David marched out and met them by the pool of Gibeon. And the two groups took up positions on opposite sides of the pool.
14 ULB ಆಗ ಅಬ್ನೇರನು ಯೋವಾಬನಿಗೆ, <<ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ>> ಎಂದು ಹೇಳಲು ಯೋವಾಬನು, <<ಆಗಲಿ>> ಅಂದನು. BSB BSB: Then Abner said to Joab, “Let us have the young men get up and compete before us.” “Let them get up,” Joab replied.
15 ULB ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು. BSB BSB: So they got up and were counted off—twelve for Benjamin and Ish-bosheth son of Saul, and twelve for David.
16 ULB ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ<< ಹೆಲ್ಕಾತ್ ಹಸ್ಸೂರಿಂ>> ಎಂದು ಹೆಸರಾಯಿತು. BSB BSB: Then each man grabbed his opponent by the head and thrust his sword into his opponent’s side, and they all fell together. So this place, which is in Gibeon, is called Helkath-hazzurim.
17 ULB ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು. BSB BSB: The battle that day was intense, and Abner and the men of Israel were defeated by the servants of David.
18 ULB ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು. BSB BSB: The three sons of Zeruiah were there: Joab, Abishai, and Asahel. Now Asahel was fleet of foot like a wild gazelle,
19 ULB ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು. BSB BSB: and he chased Abner, not turning to the right or to the left in his pursuit.
20 ULB ಅಬ್ನೇರನು ಹಿಂತಿರುಗಿ ನೋಡಿ, <<ನೀನು ಅಸಾಹೇಲನೋ?>> ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು. BSB BSB: And Abner glanced back and said, “Is that you, Asahel?” “It is,” Asahel replied.
21 ULB ಆಗ ಅಬ್ನೇರನು ಅವನಿಗೆ, <<ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ>> ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ. BSB BSB: So Abner told him, “Turn to your right or to your left, seize one of the young men, and take his equipment for yourself.” But Asahel would not stop chasing him.
22 ULB ಅಬ್ನೇರನು ತಿರುಗಿ ಅಸಾಹೇಲನಿಗೆ, <<ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ>> ಅಂದನು. BSB BSB: Once again, Abner warned Asahel, “Stop chasing me. Why should I strike you to the ground? How could I show my face to your brother Joab?”
23 ULB ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು. BSB BSB: But Asahel refused to turn away. So Abner thrust the butt of his spear into his stomach, and it came out his back, and he fell dead on the spot. And every man paused when he came to the place where Asahel had fallen and died.
24 ULB ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು <<ಅಮ್ಮಾ>> ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ. BSB BSB: But Joab and Abishai pursued Abner. By sunset, they had gone as far as the hill of Ammah opposite Giah on the way to the wilderness of Gibeon.
25 ULB ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು. BSB BSB: The Benjamites rallied to Abner, formed a single unit, and took their stand atop a hill.
26 ULB ಆಗ ಅಬ್ನೇರನು, <<ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ>> ಎಂದನು. BSB BSB: Then Abner called out to Joab: “Must the sword devour forever? Do you not realize that this will only end in bitterness? How long before you tell the troops to stop pursuing their brothers?”
27 ULB ಅದಕ್ಕೆ ಯೋವಾಬನು, <<ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ>> ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು. BSB BSB: “As surely as God lives,” Joab replied, “if you had not spoken up, the troops would have continued pursuing their brothers until morning.”
28 ULB ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು. BSB BSB: So Joab blew the ram’s horn, and all the troops stopped; they no longer pursued Israel or continued to fight.
29 ULB ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು. BSB BSB: And all that night Abner and his men marched through the Arabah. They crossed the Jordan, marched all morning, and arrived at Mahanaim.
30 ULB ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ. BSB BSB: When Joab returned from pursuing Abner, he gathered all the troops. In addition to Asahel, nineteen of David’s servants were missing,
31 ULB ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು. BSB BSB: but they had struck down 360 Benjamites who were with Abner.
32 ULB ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು. BSB BSB: And they took Asahel and buried him in his father’s tomb in Bethlehem. Then Joab and his men marched all night and reached Hebron at daybreak.
Select verses for actions: Enter goes to them and Escape comes back.