1 ULB ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, <<ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ>> ಎಂದನು. BSB BSB: Now a worthless man named Sheba son of Bichri, a Benjamite, happened to be there, and he blew the ram’s horn and shouted: “We have no share in David, no inheritance in Jesse’s son. Every man to his tent, O Israel!”
2 ULB ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು. BSB BSB: So all the men of Israel deserted David to follow Sheba son of Bichri. But the men of Judah stayed by their king all the way from the Jordan to Jerusalem.
3 ULB ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು. BSB BSB: When David returned to his palace in Jerusalem, he took the ten concubines he had left to take care of the palace, and he placed them in a house under guard. He provided for them, but he no longer slept with them. They were confined until the day of their death, living as widows.
4 ULB ಅನಂತರ ಅರಸನು ಅಮಾಸನಿಗೆ, <<ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು>> ಎಂದು ಆಜ್ಞಾಪಿಸಿದನು. BSB BSB: Then the king said to Amasa, “Summon the men of Judah to come to me within three days, and be here yourself.”
5 ULB ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ BSB BSB: So Amasa went to summon Judah, but he took longer than the time allotted him.
6 ULB ಅರಸನು ಅಬೀಷೈಗೆ, <<ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು>> ಎಂದನು. BSB BSB: And David said to Abishai, “Now Sheba the son of Bichri will do us more harm than Absalom. Take your lord’s servants and pursue him, or he will find fortified cities and elude us.”
7 ULB ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು. BSB BSB: So Joab’s men, along with the Cherethites, the Pelethites, and all the mighty men, marched out of Jerusalem in pursuit of Sheba son of Bichri.
8 ULB ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು. BSB BSB: And while they were at the great stone in Gibeon, Amasa joined them. Now Joab was dressed in military attire, with a dagger strapped to his belt. And as he stepped forward, he slipped the dagger from its sheath.
9 ULB ಅವನು ಅಮಾಸನನ್ನು, <<ಸಹೋದರನೇ ಕ್ಷೇಮವೋ>> ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, BSB BSB: “Are you well, my brother?” Joab asked Amasa. And with his right hand Joab grabbed Amasa by the beard to kiss him.
10 ULB ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ, BSB BSB: Amasa was not on guard against the dagger in Joab’s hand, and Joab stabbed him in the stomach and spilled out his intestines on the ground. And Joab did not need to strike him again, for Amasa was dead. Then Joab and his brother Abishai pursued Sheba son of Bichri.
11 ULB ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, <<ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ>> ಎಂದು ಕೂಗಿದನು BSB BSB: One of Joab’s young men stood near Amasa and said, “Whoever favors Joab, and whoever is for David, let him follow Joab!”
12 ULB ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು. BSB BSB: But Amasa wallowed in his blood in the middle of the road, and when the man saw that all the troops were stopping there, he dragged the body off the road into a field and threw a garment over it.
13 ULB ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು. BSB BSB: As soon as Amasa’s body was removed from the road, all the men went on with Joab to pursue Sheba son of Bichri.
14 ULB ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು. BSB BSB: Sheba passed through all the tribes of Israel to Abel-beth-maacah and through the entire region of the Berites, who gathered together and followed him.
15 ULB ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು. BSB BSB: And Joab’s troops came and besieged Sheba in Abel-beth-maacah and built a siege ramp against the outer rampart of the city. As all the troops with Joab were battering the wall to topple it,
16 ULB ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, <<ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ>> ಎಂದು ಕೂಗಿದಳು. BSB BSB: a wise woman called out from the city, “Listen! Listen! Please tell Joab to come here so that I may speak with him.”
17 ULB ಯೋವಾಬನು ಬರಲು ಆ ಸ್ತ್ರೀಯು, <<ನೀನು ಯೋವಾಬನೋ?>> ಎಂದು ಅವನನ್ನು ಕೇಳಲು ಅವನು <<ಹೌದು ನಾನೇ>> ಎಂದು ಉತ್ತರ ಕೊಟ್ಟನು. ಆಕೆಯು, <<ನಿನ್ನ ದಾಸಿಯ ಮಾತನ್ನು ಕೇಳು>> ಅನ್ನಲು ಅವನು, <<ಕೇಳುತ್ತೇನೆ>> ಎಂದನು. BSB BSB: When he had come near to her, the woman asked, “Are you Joab?” “I am,” he replied. “Listen to the words of your servant,” she said. “I am listening,” he answered.
18 ULB ಆಗ ಆಕೆಯು, <<ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು. BSB BSB: Then the woman said, “Long ago they used to say, ‘Seek counsel at Abel,’ and that is how disputes were settled.
19 ULB ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?>> ಎಂದಳು. BSB BSB: I am among the peaceable and faithful in Israel, but you are trying to destroy a city that is a mother in Israel. Why would you swallow up the LORD’s inheritance?”
20 ULB ಅದಕ್ಕೆ ಯೋವಾಬನು, <<ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ. BSB BSB: “Far be it!” Joab declared. “Far be it from me to swallow up or destroy!
21 ULB ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ>> ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, <<ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು>> ಎಂದು ಉತ್ತರ ಕೊಟ್ಟು, BSB BSB: That is not the case. But a man named Sheba son of Bichri, from the hill country of Ephraim, has lifted up his hand against the king, against David. Deliver him alone, and I will depart from the city.” “Look,” the woman replied, “his head will be thrown to you over the wall.”
22 ULB ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು. BSB BSB: Then the woman went to all the people with her wise counsel, and they cut off the head of Sheba son of Bichri and threw it to Joab. So he blew the ram’s horn and his men dispersed from the city, each to his own home. And Joab returned to the king in Jerusalem.
23 ULB ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ. BSB BSB: Now Joab was over the whole army of Israel; Benaiah son of Jehoiada was over the Cherethites and Pelethites;
24 ULB ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ. BSB BSB: Adoram was in charge of the forced labor; Jehoshaphat son of Ahilud was the recorder;
25 ULB ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು. BSB BSB: Sheva was the scribe; Zadok and Abiathar were priests;
26 ULB ಯಾಯೀರಿನವನಾದ ಈರನೂ ದಾವೀದನ ಯಾಜಕನು. BSB BSB: and Ira the Jairite was David’s priest.
Select verses for actions: Enter goes to them and Escape comes back.