1 ULB ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು. BSB BSB: Again the anger of the LORD burned against Israel, and He stirred up David against them, saying, “Go and take a census of Israel and Judah.”
2 ULB ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, <<ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ>> ಎಂದು ಅವನಿಗೆ ಆಜ್ಞಾಪಿಸಿದನು. BSB BSB: So the king said to Joab the commander of his army, who was with him, “Go now throughout the tribes of Israel from Dan to Beersheba and register the troops, so that I may know their number.”
3 ULB ಆಗ ಯೋವಾಬನು ಅರಸನಿಗೆ, <<ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?>> ಅಂದನು. BSB BSB: But Joab replied to the king, “May the LORD your God multiply the troops a hundred times over, and may the eyes of my lord the king see it. But why does my lord the king want to do such a thing?”
4 ULB ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು. BSB BSB: Nevertheless, the king’s word prevailed against Joab and against the commanders of the army. So Joab and the commanders of the army departed from the presence of the king to register the troops of Israel.
5 ULB ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ, BSB BSB: They crossed the Jordan and camped near Aroer, south of the town in the middle of the valley, and proceeded toward Gad and Jazer.
6 ULB ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು. BSB BSB: Then they went to Gilead and the land of Tahtim-hodshi, and on to Dan-jaan and around to Sidon.
7 ULB ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು. BSB BSB: They went toward the fortress of Tyre and all the cities of the Hivites and Canaanites. Finally, they went on to the Negev of Judah, to Beersheba.
8 ULB ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು. BSB BSB: At the end of nine months and twenty days, having gone through the whole land, they returned to Jerusalem.
9 ULB ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು- ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ. BSB BSB: And Joab reported to the king the total number of the troops. In Israel there were 800,000 men of valor who drew the sword, and in Judah there were 500,000.
10 ULB ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, <<ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು>> ಎಂದು ಪ್ರಾರ್ಥಿಸಿದನು. BSB BSB: After David had numbered the troops, his conscience was stricken and he said to the LORD, “I have sinned greatly in what I have done. Now, O LORD, I beg You to take away the iniquity of Your servant, for I have acted very foolishly.”
11 ULB ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ, BSB BSB: When David got up in the morning, the word of the LORD had come to Gad the prophet, David’s seer:
12 ULB <<ನೀನು ದಾವೀದನ ಬಳಿ ಹೋಗಿ ಅವನಿಗೆ, <ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ> ಎಂಬುದಾಗಿ ಹೇಳು>> ಎಂದು ಆಜ್ಞಾಪಿಸಿದನು. BSB BSB: “Go and tell David that this is what the LORD says: ‘I am offering you three options. Choose one of them, and I will carry it out against you.’”
13 ULB ಆಗ ಗಾದನು ದಾವೀದನ ಬಳಿಗೆ ಹೋಗಿ, <<ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು>> ಎಂದನು. BSB BSB: So Gad went and said to David, “Do you choose to endure three years of famine in your land, three months of fleeing the pursuit of your enemies, or three days of plague upon your land? Now then, think it over and decide how I should reply to Him who sent me.”
14 ULB ಅದಕ್ಕೆ ದಾವೀದನು ಗಾದನಿಗೆ, <<ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು>> ಎಂದು ಹೇಳಿದನು. BSB BSB: David answered Gad, “I am deeply distressed. Please, let us fall into the hand of the LORD, for His mercies are great; but do not let me fall into the hands of men.”
15 ULB ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು. BSB BSB: So the LORD sent a plague upon Israel from that morning until the appointed time, and seventy thousand of the people from Dan to Beersheba died.
16 ULB ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, <<ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ>> ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು. BSB BSB: But when the angel stretched out his hand to destroy Jerusalem, the LORD relented from the calamity and said to the angel who was destroying the people, “Enough! Withdraw your hand now!” At that time the angel of the LORD was by the threshing floor of Araunah the Jebusite.
17 ULB ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, <<ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ>> ಎಂದು ಬೇಡಿಕೊಂಡನು. BSB BSB: When David saw the angel striking down the people, he said to the LORD, “Surely I, the shepherd, have sinned and acted wickedly. But these sheep, what have they done? Please, let Your hand fall upon me and my father’s house.”
18 ULB ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, <<ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು>> ಎಂದು ಹೇಳಿದನು. BSB BSB: And that day Gad came to David and said to him, “Go up and build an altar to the LORD on the threshing floor of Araunah the Jebusite.”
19 ULB ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು. BSB BSB: So David went up at the word of Gad, just as the LORD had commanded.
20 ULB ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. BSB BSB: When Araunah looked out and saw the king and his servants coming toward him, he went out and bowed facedown before the king.
21 ULB ಅವನು, <<ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?>> ಎಂದು ಕೇಳಿದನು. ದಾವೀದನು ಅವನಿಗೆ, <<ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ>> ಎಂದು ಉತ್ತರಕೊಟ್ಟನು. BSB BSB: “Why has my lord the king come to his servant?” Araunah said. “To buy your threshing floor,” David replied, “that I may build an altar to the LORD, so that the plague upon the people may be halted.”
22 ULB ಆಗ ಅರೌನನು ದಾವೀದನಿಗೆ, <<ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ. BSB BSB: Araunah said to David, “May my lord the king take whatever seems good to him and offer it up. Here are the oxen for a burnt offering and the threshing sledges and ox yokes for the wood.
23 ULB ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ>> ಎಂದು ಹೇಳಿದನು. BSB BSB: O king, Araunah gives all these to the king.” He also said to the king, “May the LORD your God accept you.”
24 ULB ಅರಸನು ಅರೌನನಿಗೆ, <<ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ>> ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು. BSB BSB: “No,” replied the king, “I insist on paying a price, for I will not offer to the LORD my God burnt offerings that cost me nothing.” So David bought the threshing floor and the oxen for fifty shekels of silver.
25 ULB ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು. BSB BSB: And there he built an altar to the LORD and offered burnt offerings and peace offerings. Then the LORD answered the prayers on behalf of the land, and the plague upon Israel was halted.
Select verses for actions: Enter goes to them and Escape comes back.