1 ULB ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರೆಲ್ಲರು ಕಳವಳಗೊಂಡರು. BSB BSB: Now when Ish-bosheth son of Saul heard that Abner had died in Hebron, he lost courage, and all Israel was dismayed.
2 ULB ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ. BSB BSB: Saul’s son had two men who were leaders of raiding parties. One was named Baanah and the other Rechab; they were sons of Rimmon the Beerothite of the tribe of Benjamin—Beeroth is considered part of Benjamin,
3 ULB ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ. BSB BSB: because the Beerothites fled to Gittaim and have lived there as foreigners to this day.
4 ULB ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು. BSB BSB: And Jonathan son of Saul had a son who was lame in his feet. He was five years old when the report about Saul and Jonathan came from Jezreel. His nurse picked him up and fled, but as she was hurrying to escape, he fell and became lame. His name was Mephibosheth.
5 ULB ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು. BSB BSB: Now Rechab and Baanah, the sons of Rimmon the Beerothite, set out and arrived at the house of Ish-bosheth in the heat of the day, while the king was taking his midday nap.
6 ULB ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು. BSB BSB: They entered the interior of the house as if to get some wheat, and they stabbed him in the stomach. Then Rechab and his brother Baanah slipped away.
7 ULB ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ, BSB BSB: They had entered the house while Ish-bosheth was lying on his bed, and having stabbed and killed him, they beheaded him, took his head, and traveled all night by way of the Arabah.
8 ULB ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, <<ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ>> ಅಂದನು. BSB BSB: They brought the head of Ish-bosheth to David at Hebron and said to the king, “Here is the head of Ish-bosheth son of Saul, your enemy who sought your life. Today the LORD has granted vengeance to my lord the king against Saul and his offspring.”
9 ULB ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ, BSB BSB: But David answered Rechab and his brother Baanah, the sons of Rimmon the Beerothite, “As surely as the LORD lives, who has redeemed my life from all distress,
10 ULB <<ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ? BSB BSB: when someone told me, ‘Look, Saul is dead,’ and thought he was a bearer of good news, I seized him and put him to death at Ziklag. That was his reward for his news!
11 ULB ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು>> ಎಂದು ಹೇಳಿ, BSB BSB: How much more, when wicked men kill a righteous man in his own house and on his own bed, shall I not now require his blood from your hands and remove you from the earth!”
12 ULB ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು. BSB BSB: So David commanded his young men, and they killed Rechab and Baanah. They cut off their hands and feet and hung their bodies by the pool in Hebron, but they took the head of Ish-bosheth and buried it in Abner’s tomb in Hebron.
Select verses for actions: Enter goes to them and Escape comes back.