1 ULB ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ, BSB BSB: Finally, brothers, pray for us, that the word of the Lord may spread quickly and be held in honor, just as it was with you.
2 ULB ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ. BSB BSB: And pray that we may be delivered from wicked and evil men; for not everyone holds to the faith.
3 ULB ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು. BSB BSB: But the Lord is faithful, and He will strengthen you and guard you from the evil one.
4 ULB ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು. BSB BSB: And we have confidence in the Lord that you are doing and will continue to do what we command.
5 ULB ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ. BSB BSB: May the Lord direct your hearts into God’s love and Christ’s perseverance.
6 ULB ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ. BSB BSB: Now we command you, brothers, in the name of our Lord Jesus Christ, to keep away from any brother who leads an undisciplined life that is not in keeping with the tradition you received from us.
7 ULB ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ. BSB BSB: For you yourselves know how you ought to imitate us, because we were not undisciplined among you,
8 ULB ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು. BSB BSB: nor did we eat anyone’s food without paying for it. Instead, in labor and toil, we worked night and day so that we would not be a burden to any of you.
9 ULB ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು. BSB BSB: Not that we lack this right, but we wanted to offer ourselves as an example for you to imitate.
10 ULB ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, <<ಕೆಲಸ ಮಾಡಲೊಲ್ಲದವನು ಊಟಮಾಡಬಾರ>> ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. BSB BSB: For even while we were with you, we gave you this command: “If anyone is unwilling to work, he shall not eat.”
11 ULB ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. BSB BSB: For we hear that some of you are leading undisciplined lives, accomplishing nothing, but being busybodies.
12 ULB ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ. BSB BSB: We command and urge such people by our Lord Jesus Christ to begin working quietly to earn their own living.
13 ULB ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ. BSB BSB: But as for you, brothers, do not grow weary in well-doing.
14 ULB ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. BSB BSB: Take note of anyone who does not obey the instructions we have given in this letter. Do not associate with him, so that he may be ashamed.
15 ULB ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ. BSB BSB: Yet do not regard him as an enemy, but admonish him as a brother.
16 ULB ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ. BSB BSB: Now may the Lord of peace Himself give you peace at all times and in every way. The Lord be with all of you.
17 ULB ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ. BSB BSB: This greeting is in my own hand—Paul. This is my mark in every letter; it is the way I write.
18 ULB ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. BSB BSB: The grace of our Lord Jesus Christ be with all of you.
Select verses for actions: Enter goes to them and Escape comes back.